LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಿಪಿಐ ತಲೆ ದಂಡ ರವಿ ಸುತ್ತಾಟ ಪ್ರಕರಣ ಪೊಲೀಸ್ ಅಧಿಕಾರಿ ಅಮಾನತು

ಬೆಂಗಳೂರು: ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬಂಧಿಸಿ ರಾತ್ರಿಯೆಲ್ಲಾ ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಐಜಿಪಿ ವಿಕಾಸ್ ಕುಮಾರ್ ಅವರು ಖಾನಪುರ ಠಾಣೆಯ ಸಿಪಿಐ ಮಂಜುನಾಥ್ ನಾಯ್ಕ್ ಎಂಬುವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಡಿ. 19ರಂದು ಸಿ.ಟಿ.ರವಿಯವರನ್ನು ಸುವರ್ಣಸೌಧದಲ್ಲಿ ವಶಕ್ಕೆ ಪಡೆದು ಮೊದಲಿಗೆ ಹಿರೇಬಾಗೇವಾಡಿ ಠಾಣೆಗೆ ಕರೆತಂದು ನಂತರ ಅವರನ್ನು ಖಾನಪುರ ಠಾಣೆಗೆ ಕರೆದೊಯ್ಯಲಾಗಿತ್ತು. ಅಲ್ಲಿಗೆ ಸಿ.ಟಿ. ರವಿ ಅವರನ್ನು ಕಾಣಲು ಬಿಜೆಪಿಯ ಮುಖಂಡರು ಬಂದಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಪೊಲೀಸರ ವಶದಲ್ಲಿದ್ದ ಸಿ.ಟಿ.ರವಿಯವರನ್ನು ಮಾತನಾಡಿಸಲು ಅವಕಾಶ ಕಲ್ಪಿಸಲಾಗಿತ್ತು. ನಂತರ ಭದ್ರತೆ ದೃಷ್ಟಿಯಿಂದ ಸಿ.ಟಿ.ರವಿಯವರನ್ನು ಒಂದು ಠಾಣೆಯಿಂದ ಮತ್ತೊಂದು ಠಾಣೆಗೆ ಸುತ್ತಾಡಿಸಲಾಗಿತ್ತು. ಇದೀಗ ಯಾವ ಕಾರಣಕ್ಕಾಗಿ ಸಿ.ಪಿ.ಐ ಮಂಜನಾಥ್ ನಾಯ್ಕ್ ಅವರನ್ನು ಅಮಾನತು ಪಡಿಸಿರುವುದು ಯಾವ ವಿಷಯಕ್ಕೆ ಎನ್ನುವುದು ಚರ್ಚಾ ವಿಷಯವಾಗಿದೆ.

ರಾತ್ರಿಯೆಲ್ಲಾ ಸುತ್ತಾಡಿಸಿದ್ದಕ್ಕೆ ಅಥವಾ ಬಿಜೆಪಿ ಮುಖಂಡರು ರವಿ ಅವರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೂ ಎಂಬುದು ಚರ್ಚೆಯ ವಿಷಯವಾಗಿದೆ.ಖಾನಪುರ ಠಾಣೆಗೆ ರವಿ ಅವರನ್ನು ರವಿಯವರನ್ನು ಕರೆತಂದ ವೇಳೆ ಪೊಲೀಸ ಆಯುಕ್ತ ಯಡಮಾರ್ಟಿನ್ ಎಸ್‍ಪಿ ಅವರು ಸಹ ಹಾಜರಿದ್ದರು ಎನ್ನಲಾಗಿದೆ. ಮತ್ತೊಂದೆಡೆ ಸಿಪಿಐ ಮಂಜುನಾಥ್ ನಾಯ್ಕ್ ಅವರನ್ನು ಅಮಾನತುಗೊಳಿಸಿರುವ ಘಟನೆ ಖಂಡಿಸಿ ನಾಳೆ ಖಾನಪುರ ಬಂದ್‍ಗೆ ಕರೆ ನೀಡಲಾಗಿದೆ ಎಂದು ಹೇಳಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು