LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಿಲ್ಕ್ ಬೋರ್ಡ್ ಮೇಲ್ಸೇತುವೆ ವಾರದಲ್ಲಿ ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಸಾರ್ವಜನಿಕರ ಜೊತೆ ಸೇರಿ ನಾವೇ ಸಂಚಾರ ಮುಕ್ತಗೊಳಿಸುತ್ತೇವೆ: ಎಎಪಿ ಎಚ್ಚರಿಕೆ

ಬೆಂಗಳೂರು: ನಗರದ ಸಿಲ್ಕ್ ಬೋರ್ಡ್ ಮೇಲ್ಸೇತುವೆಯನ್ನು (ಫ್ಲೈ ಓವರ್) ಸಂಚಾರಕ್ಕೆ ಮುಕ್ತಗೊಳಿಸಲು ಕಾಂಗ್ರೆಸ್ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಇದರಿಂದ ವಾಹನ ಸವಾರರು ನಿತ್ಯವೂ ಕಿಲೊಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಯಲ್ಲಿ ಸಿಲುಕುವಂತಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಅಶೋಕ್ ಮೃಂತ್ಯುಂಜಯ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸಿಲ್ಕ್ ಬೋರ್ಡ್ ಬಳಿ ನಿರ್ಮಿಸಿರುವ ಮೇಲ್ಸೇತುವೆ ಬಳಿ ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮೇಲ್ಸೇತುವೆಯ ತಳದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಪಕ್ಷದ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಅಶೋಕ್, 2018ರಲ್ಲಿ ಆರಂಭಗೊಂಡ ಮೇಲ್ಸೇತುವೆ ಕಾಮಗಾರಿ, 2019ರಲ್ಲಿ ಪೂರ್ಣಗೊಳ್ಳಬೇಕಿತ್ತು. ಕಳೆದ ಹದಿನೈದು ದಿನಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದೆ. ಬೆಂಗಳೂರು ದಕ್ಷಿಣದಿಂದ ಪಶ್ಚಿಮ ಭಾಗಕ್ಕೆ, ಎಲೆಕ್ಟ್ರಾನಿಕ್ ಸಿಟಿ, ಮಡಿವಾಳ ಕಡೆ ಹೊರಡುವ ವಾಹನ ಸಂಚಾರರು ನಿತ್ಯವೂ ಸಂಚಾರ ದಟ್ಟಣೆಯಿಂದ ಪರದಾಡುವಂತಾಗಿದೆ ಎಂದರು.

ಸಿ.ಎಂ. ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ವಾರದೊಳಗೆ ಕ್ರಮವಹಿಸದಿದ್ದರೆ ಜನರೊಂದಿಗೆ ಸೇರಿ ನಾವೇ ಮೇಲ್ಸೇತುವೆಯನ್ನು ಸಂಚಾರ ಮುಕ್ತಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಮಾತನಾಡಿ, ಪ್ರತಿ ಸಿಗ್ನಲ್ ನಲ್ಲೂ ವಾಹನ ಸವಾರರು ಅರ್ಧಗಂಟೆ ನಿಲ್ಲಲೇಬೇಕಾದ ಪರಿಸ್ಥಿತಿ ಉಂಟಾಗಿದೆ. ಐ.ಟಿ ಉದ್ಯೋಗಿಗಳು ಸಂಚಾರ ದಟ್ಟಣೆಯಿಂದ ತೀರ ತೊಂದರೆ ಗೊಳಗಾಗಿದ್ದಾರೆ ಎಂದರು.

ಮೇಲ್ಸೇತುವೆ ಜನರ ಅನುಕೂಲಕ್ಕಾಗಿ ನಿರ್ಮಿಸಿದ್ದರೂ ಸಕಾಲಕ್ಕೆ ಸಂಚಾರ ಮುಕ್ತ ಮಾಡದೆ ಜನರ ಹಣ ವ್ಯರ್ಥ ಮಾಡಲಾಗುತ್ತಿದೆ. ಬ್ರ್ಯಾಂಡ್ ಬೆಂಗಳೂರು ಜನರಿಗೆ ಅನುಕೂಲ ಮಾಡಬೇಕೆ ವಿನಃ ನಷ್ಟವನ್ನಲ್ಲ. ಸಂಚಾರ ದಟ್ಟಣೆಯಿಂದ ಆಂಬುಲೆನ್ಸ್ ಸಹ ಕನಿಷ್ಠ ಇಪ್ಪತ್ತು ನಿಮಿಷ ನಿಲ್ಲಬೇಕಾದ ಸ್ಥಿತಿ ಉಂಟಾಗಿದೆ. ಜನರ ಸಮಯ ಮತ್ತು ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ. ಮೇಲ್ಸೇತುವೆ ಸಂಚಾರ ಮುಕ್ತಗೊಳಿಸಿ, ಆದಷ್ಟು ಬೇಗ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆ ವೇಳೆ ಪಕ್ಷದ ಇನ್ನಿತರ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು