LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸಿ.ಎಸ್.ಆರ್ ಅನುದಾನದಡಿ ಜಿಲ್ಲೆಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇನ್ಫೋಸಿಸ್ ಸಂಸ್ಥೆ ನೀಲನಕ್ಷೆ ದೇವನಹಳ್ಳಿ ತಾಲ್ಲೂಕಿನ 33 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶೀಘ್ರ ಚಾಲನೆ

ಬೆಂ.ಗ್ರಾ.ಜಿಲ್ಲೆ: ಇನ್ಫೋಸಿಸ್ ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿ.ಎಸ್.ಆರ್)ಯಡಿ ಜಿಲ್ಲೆಯ ಸರ್ಕಾರಿ ಶಾಲಾ ಕಟ್ಟಡಗಳನ್ನು ನವೀಕರಣ ಮತ್ತು ಅಭಿವೃದ್ಧಿ ಪಡಿಸಲು ಮುಂದೆ ಬಂದಿರುವುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿಎಸ್‍ಆರ್ ಅನುದಾನದಡಿ ಸರ್ಕಾರಿ ಶಾಲಾ ಕಟ್ಟಡಗಳ ಅಭಿವೃದ್ಧಿ ಪಡಿಸುವ ಸಲುವಾಗಿ ಚರ್ಚಿಸಲು ನಡೆದ ಸಭೆಯಲ್ಲಿ ಅವರು ಮಾತನಾಡಿ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ರೂಂ ಗಳು, ಮೂಲಭೂತ ಸೌಕರ್ಯ, ಲ್ಯಾಬ್ ವ್ಯವಸ್ಥೆ, ಗ್ರಂಥಾಲಯ, ಆಟದ ಮೈದಾನ ಮತ್ತು ಶಿಕ್ಷಕರನ್ನು ಒದಗಿಸುವುದಾಗಿ ಸಂಸ್ಥೆ ಹೇಳಿದೆ. ಮೊದಲ ಹಂತದಲ್ಲಿ ದೇವನಹಳ್ಳಿ ತಾಲೂಕಿನ 33 ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಹಂತ ಹಂತವಾಗಿ ಇನ್ನುಳಿದ ಮೂರು ತಾಲ್ಲೂಕುಗಳ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸಂಸ್ಥೆ ರೂಪುರೇಷೆ ಸಿದ್ದಪಡಿಸಿದೆ ಎಂದರು.

ಸಿಎಸ್‍ಆರ್ ಅನುದಾನ ದಡಿ ನಿರ್ಮಾಣಗೊಳ್ಳಲಿರುವ ಶಾಲಾ ಕಟ್ಟಡಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಸಾಕಷ್ಟು ವರ್ಷ ಕಟ್ಟಡ ಬಾಳಿಕೆ ಬರಬೇಕು. ಆ ರೀತಿಯಲ್ಲಿ ಯೋಜನೆ ರೂಪಿಸಿ ಶಾಲಾ ಕಟ್ಟಡ ನಿರ್ಮಾಣ ಮಾಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಸಾಕಷ್ಟು ರೈತರು ಕೈಗಾರಿಕಾಪ್ರದೇಶದಿಂದ ಕೃಷಿ ಭೂಮಿ ಕಳೆದುಕೊಂಡಿದ್ದಾರೆ, ಆ ರೈತರ ಕುಟುಂಬದವರು ಈಗ ಕೈಗಾರಿಕೆಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವುದು ವಾಸ್ತವ.

ಅಂತಹ ಪರಿಸ್ಥಿತಿ ಮುಂದಿನ ಪೀಳಿಗೆಯ ಮಕ್ಕಳಿಗೆ ಬರಬಾರದುಹಾಗಾಗಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಬಡತನದಿಂದ ಬೆಳೆದ ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಪಡೆಯಲು ಸಹಕಾರಿ ಆಗಬೇಕು. ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಮರಳಿ ಸರ್ಕಾರಿ ಶಾಲೆಗಳತ್ತ ಬರಬೇಕು ಎಂಬುದು ನನ್ನ ಆಶಯ. ಕೆ.ಪಿ.ಎಸ್ ಶಾಲೆಗಳನ್ನು ಸಹ ಉನ್ನತ ಶ್ರೇಣಿಯಲ್ಲಿ ನವೀಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಮಾತನಾಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಜೊತೆಗೆ ವಿದ್ಯಾರ್ಥಿಗಳಿಗೆಗುಣಮಟ್ಟದ ಶಿಕ್ಷಣ ನೀಡುವುದು ಅಷ್ಟೇ ಮುಖ್ಯ.ಶಾಲೆಗಳಿಗೆ ಕೌಶಲ್ಯಾಧಾರಿತ ಶಿಕ್ಷಕರನ್ನು ನೇಮಿಸುವುದರೊಂದಿಗೆ ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದರು.ಸಭೆಯಲ್ಲಿ ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗಶ್ರೀ , ಇನ್ಫೋಸಿಸ್ ಸಂಸ್ಥೆ ಅಧಿಕಾರಿ ಗಗನ್ ಮಟ್ಟಿ ಹಾಗೂ ತಂಡ, ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು