LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸಿ ಟಿ ರವಿಯವರು ಮಾತನಾಡಿದ್ದು ಆಡಿಯೋ ರೆಕಾರ್ಡ್​ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ: ಸಭಾಪತಿ ಬಸವರಾಜ ಹೊರಟ್ಟಿ 

ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ ಅವರು ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್​ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನಪರಿಷತ್​​ ಸಭಾಪತಿ ಬಸವರಾಜ ಹೊರಟ್ಟಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಿ ಟಿ ರವಿಯವರು ಮಾತನಾಡಿದ್ದು ಆಡಿಯೋ ರೆಕಾರ್ಡ್​ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್​ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್​ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು.

ಸದನದಲ್ಲಿ ಪ್ರಶ್ನೋತ್ತರ ವೇಳೆ ಮುಗಿದ ಬಳಿಕ, ಕಾಂಗ್ರೆಸ್​ನವರು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆಗೆ ಮುಂದಾದರು. ಈ ವೇಳೆ ಗಲಾಟೆ ಆಯ್ತು, ಗಲಾಟೆ ಹಿನ್ನೆಲೆ ಕಲಾಪ ಮುಂದೂಡಿದ್ವಿ. ಅವಾಗ ಇದೆಲ್ಲ ಗಲಾಟೆ ಆಗಿದೆ. ಸಂಜೆ 6 ಗಂಟೆಗೆ ಸಿಟಿ ರವಿ ಬಂಧನವಾಗಿರುವ ಬಗ್ಗೆ ಮಾಹಿತಿ ಬಂತು ಎಂದರು.

ನಾನು ಲಕ್ಷ್ಮೀ ಹೆಬ್ಬಾಳ್ಕರ್​ ಹಾಗೂ ಸಿಟಿ ರವಿ ಅವರನ್ನು ಕರೆದು ಮಾತನಾಡಿದೆ‌. ಇದನ್ನು ಇಲ್ಲಿಗೆ ಮುಗಿಸೋಣ ಅಂತ ಸಲಹೆ ನೀಡಿದೆ. ಈ ರೀತಿ ಆಗಿರುವುದು ಮೊದಲ ಸಲ. 45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ. ಒಂದೊಂದು ಸಲ ಯಾಕಾದರೂ ಅಲ್ಲಿ ಕೂತಿದ್ದೇನೆ ಅನ್ಸತ್ತೆ ಎಂದು ಬಸವರಾಜ ಹೊರಟ್ಟಿ ಬೇಸರ ಹೊರಹಾಕಿದರು.

ನಾನು ಯಾರ ಪರವೂ ಇಲ್ಲ, ಎರಡು ಕಡೆ ಯೋಚನೆ ಮಾಡಿದ್ದೇನೆ. ಇದು ಕಡ್ಡಿ ಹೋಗಿ ಗುಡ್ಡ ಆಯ್ತು. ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗತ್ತೆ. ಜನ‌ ನಮ್ಮನ್ನು ನೋಡುತ್ತಾರೆ. ಶಾಸಕರು ನಡವಳಿಕೆ ತಿದ್ದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ನಿನ್ನೆ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಕೊನೆಯ ದಿನ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಇದೆಲ್ಲದಕ್ಕೂ ಮೂಲ ಕಾರಣವಾಯಿತು.

ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆಗೆ ಕೌಂಟರ್ ಆಗಿ ಬಿಜೆಪಿ ಕೂಡಾ ಪ್ರತಿಭಟನೆಗೆ ಇಳಿದಿದ್ದರಿಂದ, ಎರಡು ಪಕ್ಷಗಳ ನಡುವೆ ತೀವ್ರ ವಾಗ್ಯುದ್ದಕ್ಕೆ ಕಾರಣವಾಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿ.ಟಿ.ರವಿ ನಡುವೆ, ಮಾತಿನ ಚಕಮಕಿ ನಡೆದು ಆಕ್ಷೇಪಾರ್ಹ ಪದವನ್ನು ರವಿ ಬಳಸಿದರು ಎನ್ನುವುದು ಕಾಂಗ್ರೆಸ್ ಆರೋಪ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು