LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸುಂದರ ಪ್ರೇಮ ಕಾವ್ಯ "ಇಬ್ಬನಿ ತಬ್ಬಿದ ಇಳೆಯಲಿ" ಚಿತ್ರಕ್ಕೆ ಕಲಾ ರಸಿಕರ ಸ್ಪಂದನೆ

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸಿರುವ ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಹಾಗೂ ವಿಹಾನ್, ಅಂಕಿತ ಅಮರ್, ಮಯೂರಿ ನಟರಾಜ್ ಅಭಿನಯದ ಸುಮಧುರ ಪ್ರೇಮಕಾವ್ಯ "ಇಬ್ಬನಿ ತಬ್ಬಿದ ಇಳೆಯಲಿ" ಚಿತ್ರ ಸೆಪ್ಟೆಂಬರ್ 5 ರಂದು ಬಿಡುಗಡೆಯಾಗಿತ್ತು.

ಆರಂಭದಿಂದಲೂ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದ್ದ ಈ ಚಿತ್ರ, ಬಿಡುಗಡೆಯಾದ ಮೇಲೂ ಎಲ್ಲರ ಪ್ರಶಂಸೆಗೆ ಪಾತ್ರವಾಗಿತ್ತು. ಆದರೆ ಬಿಡುಗಡೆಯ ಸಮಯದಲ್ಲಿ ಕಡಿಮೆ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆ ಕಂಡಿತ್ತು. ಆನಂತರ ಜನರೇ ಈ ಚಿತ್ರವನ್ನು ಹಾಡಿಹೊಗಳಿ ಹೆಚ್ಚು ಪ್ರಚಾರ ಮಾಡಲು ಆರಂಭಿಸಿದರು. ಕುಟುಂಬ ಸಮೇತ ಚಿತ್ರಮಂದಿರಗಳಿಗೆ ಬರಲು ಆರಂಭಿಸಿದರು.

ವಾರದ ಕೊನೆಯಲಂತೂ ಚಿತ್ರಮಂದಿರಗಳು ಕೌಟುಂಬಿಕ ಪ್ರೇಕ್ಷಕರಿಂದ ತುಂಬಿ ತುಳುಕುತ್ತಿದೆ. ವಿಹಾನ್, ಅಂಕಿತ, ಮಯೂರಿ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಜನರು ಚಿತ್ರಕ್ಕೆ ತೋರುತ್ತಿರುವ ಪ್ರೀತಿಗೆ ಚಿತ್ರತಂಡದ ಮನತುಂಬಿ ಬಂದಿದೆ. ಮೊದಲವಾರ ಐವತ್ತರ ಆಸುಪಾಸಿನ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಮೂರನೇ ವಾರದಲ್ಲಿ ಕರ್ನಾಟಕದಾದ್ಯಂತ ಇನ್ನೂರು ಸ್ಕ್ರೀನ್ ಗಳಲ್ಲಿ ಪ್ರದರ್ಶನವಾಗುತ್ತಿದೆ. ಜನರು "ಇಬ್ಬನಿಯನ್ನು ತಬ್ಬುತ್ತಿರುವ" ಪ್ರೀತಿಗೆ ಇದೊಂದು ಉತ್ತಮ ನಿದರ್ಶನವಾಗಿದೆ.

ಜನರಷ್ಟೇ ಅಲ್ಲದೇ ನಿರ್ದೇಶಕರಾದ ರಿಷಭ್ ಶೆಟ್ಟಿ, ಶಶಾಂಕ್, ಪವನ್ ಒಡೆಯರ್ ಮುಂತಾದ ಸ್ಯಾಂಡಲ್ ವುಡ್ ಗಣ್ಯರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಕುರಿತು ಮೆಚ್ಚುಗೆ ಮಾತುಗಳನ್ನು ಬರೆದು ಸಹಕಾರ ನೀಡಿದ್ದಾರೆ. ಚಿತ್ರಮಂದಿರಕ್ಕೆ ಜನರು ಬರುತ್ತಿಲ್ಲ ಎಂಬ ಮಾತನ್ನು "ಕೃಷ್ಣಂ ಪ್ರಣಯ ಸಖಿ" ಹಾಗೂ "ಭೀಮ" ಚಿತ್ರಗಳು ದೂರ ಮಾಡಿದ್ದವು. ಈಗ ಆ ಸಾಲಿಗೆ "ಇಬ್ಬನಿ ತಬ್ಬಿದ ಇಳೆಯಲಿ" ಚಿತ್ರ ಸಹ ಸೇರ್ಪಡೆಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು