LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸುದೀಪ್ ಅಭಿನಯದ "ಮ್ಯಾಕ್ಸ್" ಚಿತ್ರದ "Lions roar" ಹಾಡು ಬಿಡುಗಡೆ

ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮ್ಯಾಕ್ಸ್" ಚಿತ್ರಕ್ಕಾಗಿ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ "Lions roar" ಹಾಡಿನ ಲಿರಿಕಲ್ ವಿಡಿಯೋ ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಯಿತು.

ಓರಾಯನ್ ಮಾಲ್ ನ ಆವರಣದಲ್ಲಿರುವ ಕೆರೆಯಂಗಳದಲ್ಲಿ ನಡೆದ ವರ್ಣರಂಜಿತ ಸಮಾರಂಭಕ್ಕೆ ಸಹಸ್ರಾರು ಅಭಿಮಾನಿಗಳು ಸಾಕ್ಷಿಯಾದರು. "ಮ್ಯಾಕ್ಸ್" ಚಿತ್ರದ ಹಾಡಿಗೆ ಹಾಗೂ ಟ್ರೇಲರ್ ಗೆ ಅಭಿಮಾನಿಗಳು ಫಿದಾ ಆದರು. ಕಿಚ್ಚ ಸುದೀಪ್, ನಿರ್ಮಾಪಕ ಕಲೈಪುಲಿ ಎಸ್ ತನು, ನಿರ್ದೇಶಕ ವಿಜಯ್ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಿಮ್ಮೆನೆಲ್ಲಾ ನೋಡಿ ಬಹಳ ಖುಷಿಯಾಗುತ್ತಿದೆ. ಎರಡುವರೆ ವರ್ಷಗಳ ನಂತರ ಡಿಸೆಂಬರ್ 25 ರಂದು ನನ್ನ ಅಭಿನಯದ "ಮ್ಯಾಕ್ಸ್" ಚಿತ್ರಬಿಡುಗಡೆಯಾಗುತ್ತಿದೆ. ತಡವಾಗಿರುವುದಕ್ಕೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ಆದರೆ ನಾವು ಲೇಟಾಗಿ ಬಂದರೂ ಲೇಟೆಸ್ಟಾಗಿ ಬರುತ್ತೇವೆ. ನಿಮ್ಮೆಲ್ಲರ           ಪ್ರೋತ್ಸಾಹ ಸದಾ ಇರಲಿ ಎಂದರು ನಾಯಕ ಸುದೀಪ್. ಇಷ್ಟು ಜನ ಸುದೀಪ್ ಅವರ ಅಭಿಮಾನಿಗಳನ್ನು ಕಂಡು ಆನಂದವಾಗುತ್ತಿದೆ ಎಂದು ಮಾತು ಆರಂಭಿಸಿದ ನಿರ್ಮಾಪಕ ಕಲೈಪುಲಿ ಎಸ್ ತನು, ಡಿಸೆಂಬರ್ 25 ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಮ್ಮೆಲ್ಲರ ಬೆಂಬಲವಿರಲಿ ಎಂದರು. ನಿರ್ದೇಶಕ ವಿಜಯ್ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು