LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸುವರ್ಣ ಸೌಧಕ್ಕೆ ಭದ್ರತೆ ವಿಧಾನಮಂಡಲ ಅಧಿವೇಶನ ಹಿನ್ನೆಲೆ ಪೊಲೀಸರಿಂದ ಮುನ್ನೆಚ್ಚರಿಕಾ ಕ್ರಮ

ಬೆಳಗಾವಿ: ಈ ತಿಂಗಳ 9ರ ಸೋಮವಾರದಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಕಲಾಪ ನಡೆಯಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸುವರ್ಣ ಸೌಧದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಾಡು ಮಾಡಿದ್ದಾರೆ.

ಈಗಾಗಲೇ ಪೊಲೀಸರು ಸುವರ್ಣಸೌಧದ ಬಳಿ ಬೀಡುಬಿಟ್ಟಿದ್ದು, ಹಲವು ಪೊಲೀಸರಿಗಾಗಿ ಅಲ್ಲಿಯೇ ವಸತಿ ಸಮ್ಮುಚ್ಛಯವನ್ನು ನಿರ್ಮಿಸಲಾಗಿದೆ. ಸುಮಾರು 2500 ಪೊಲೀಸರಿಗೆ ಜರ್ಮನ್ ಟೆಂಟ್ ಅಳವಡಿಸುವ ಮೂಲಕ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.ಬಂದೋಬಸ್ತ್ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರು, ಬಂದೋಬಸ್ತ್‍ಗಾಗಿ 6200 ಪೊಲೀಸರನ್ನು ನಿಯೋಜಿಸಿರುವುದಾಗಿ ತಿಳಿಸಿದ್ದಾರೆ.

100 ಸಿಪಿಐ, 235 ಪಿಎಸ್‍ಐ 35 ಡಿಎಆರ್ ತುಕಡಿಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಿರುವುದಾಗಿ ಹೇಳಿದ್ದಾರೆ. ಸುವರ್ಣಸೌಧ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಒಟ್ಟು 500 ಸಿಸಿ ಕ್ಯಾಮೆರಾ-ಗಳನ್ನು ಅಳವಡಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದು ಹೋಗುವವರ ಮೇಲೆ ನಿಗಾ ವಹಿಸಲು ವ್ಯವಸ್ಥೆ ಮಾಡಲಾಗಿದೆ.

ಪೊಲೀಸರಿಗಾಗಿ ಆರು ಕಡೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.ಈಬಾರಿಯೂ ಸಹ ಎಂಇಎಸ್ ನವರಿಗೆ ಮಹಾಮೇಳಾವ ನಡೆಸಲು ಅನುಮತಿ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಇಂದು ಬೆಳಗಾವಿಜಿಲ್ಲಾಧಿಕಾರಿ ಮಹಮ್ಮದ್ ರೋಷನ್, ಪೊಲೀಸ್ ಆಯುಕ್ತರು ಎಸ್.ಪಿ. ಜಿಲ್ಲಾಪಂಚಾಯಿತ್ ಸಿಇಒ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸುವರ್ಣಸೌಧದಲ್ಲಿ ಸ್ವಚ್ಛತೆ ಹಾಗೂ ಸುವರ್ಣಸೌಧ ಸುತ್ತ ಇರುವ ಪ್ರದೇಶವನ್ನು ಪರಿಶೀಲನೆ ನಡೆಸಿ ಅಧಿವೇಶನದ ಯಶಸ್ವಿಗೆ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟವರಿಗೆ ಸೂಚಿಸುವ ಮೂಲಕ ಕಲಾಪದ ಯಶಸ್ಸಿಗೆ ಸಕಲ ಸಿದ್ಧತೆ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು