LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸೆ .10ಕ್ಕೆ ಮೊದಲು ಹಾಕಿ ತಂಡದ ಜೊತೆ ಸಭೆ: ಮಾಂಡವೀಯ

ನವದೆಹಲಿ: 2028ರ ಲಾಸ್ ಏಂಜಲೀಸ್ ಒಲಿಂಪಿಕ್ ಕ್ರೀಡೆಗಳಲ್ಲಿ ಹಾಕಿಯಲ್ಲಿ ಚಿನ್ನದ ಪದಕ ಗೆಲ್ಲುವ ನಿಟ್ಟಿನಲ್ಲಿ ಭವಿಷ್ಯದ ಯೋಜನೆಗಳ ರೂಪುರೇಷೆ ಸಿದ್ಧಪಡಿಸಲು ಸೆಪ್ಟೆಂಬರ್ 10ಕ್ಕೆ ಮೊದಲು ತಾವು ಭಾರತ ಹಾಕಿ ತಂಡದ ಜೊತೆ ಸಭೆ ನಡೆಸುವುದಾಗಿ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರು ಮಂಗಳವಾರ ತಿಳಿಸಿದರು.

ಭಾರತ ಪುರುಷರ ಹಾಕಿ ತಂಡ ಪ್ಯಾರಿಸ್ ಕ್ರೀಡೆಗಳಲ್ಲಿ ಕಂಚಿನ ಪದಕ ಗೆದ್ದುಕೊಂಡಿತ್ತು. ಮಂಗಳವಾರ ಬೆಳಿಗ್ಗೆ ಪ್ಯಾರಿಸ್‍ನಿಂದ ಬಂದಿಳಿದ ಗೋಲ್‍ಕೀಪರ್ ಪಿ.ಆರ್.ಶ್ರೀಜೇಶ್, ಸಂಜಯ್, ಅಮಿತ್ ರೋಹಿದಾಸ್ ಮತ್ತು ಅಭಿಷೇಕ್ ಅವರನ್ನು ಸನ್ಮಾನಿಸಿದ ಅವರು ಮಾತನಾಡಿದರು.‘ಪ್ಯಾರಿಸ್‍ನಲ್ಲಿ ಹಾಕಿ ತಂಡದ ಪ್ರದರ್ಶನ ಅಮೋಘವಾಗಿತ್ತು. ನಾವು ಚಿನ್ನದ ಪದಕ ಗೆಲ್ಲದೇ ಹೋಗಿರಬಹುದು. ಆದರೆ ಅದಕ್ಕೆ ತೀರಾ ಹತ್ತಿರವಾಗಿದ್ದೆವು. ಸೆಮಿಫೈನಲ್‍ನಲ್ಲಿ ಸೋತರೂ ಆಟ ಮೆಚ್ಚುವಂತಿತ್ತು’ ಎಂದು ಸಚಿವರು ಹೇಳಿದರು.

ಟೋಕಿಯೊ ಕ್ರೀಡೆಗಳಷ್ಟು ಪದಕ ಗೆಲ್ಲದಿದ್ದರೂ, ಪ್ಯಾರಿಸ್‍ನಲ್ಲಿ ಭಾಗವಹಿಸಿದ್ದ ಭಾರತದ ಪಾಳಯದ ಪ್ರದರ್ಶನ ಉತ್ತಮವಾಗಿತ್ತು ಎಂದರು. 2021ರಲ್ಲಿ ನಡೆದ ಕ್ರೀಡೆಗಳಲ್ಲಿ ಭಾರತ ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚಿನ ಪದಕ ಗೆದ್ದುಕೊಂಡಿತ್ತು. ಈ ಬಾರಿ ಒದು ಬೆಳ್ಳಿ ಮತ್ತು ಐದು ಕಂಚಿನ ಪದಕಗಳನ್ನು ಭಾರತದ ಕ್ರೀಡಾಪಟುಗಳು ಗೆದ್ದಿದ್ದಾರೆ. ಆದರೆ ಈ ಬಾರಿಯ ಒಲಿಂಪಿಕ್ಸ್‍ನಲ್ಲಿ ಏಳು ಸ್ಪರ್ಧೆಗಳಲ್ಲಿ ಪದಕಗಳು ಅಲ್ಪದರಲ್ಲೇ ಕೈತಪ್ಪಿದ್ದವು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು