LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸೈಬರ್ ಅಪರಾಧಗಳ ನಿಯಂತ್ರಣಕ್ಕಾಗಿ ಆಪ್‍ನಿಂದ ಪಂಗನಾಮ ಅಭಿಯಾನ

ದೇಶದಾದ್ಯಂತ ಅದರಲ್ಲೂ ಸಿಲಿಕಾನ್ ಸಿಟಿ ಎಂದೇ ಖ್ಯಾತನಾಮವಾಗಿರುವ ಬೆಂಗಳೂರು ನಗರದಲ್ಲಿಯೇ ಅದರಲ್ಲಿಯೂ ವಿದ್ಯಾವಂತರುಗಳೇ ಸೈಬರ್ ಅಪರಾಧಗಳಿಗೆ ತುತ್ತಾಗಿ ಸಾವಿರಾರು ಕೋಟಿ ರೂಪಾಯಿಗಳ ತಮ್ಮ ಗಳಿಕೆಯ ಹಣ ಕಳ್ಳರ ಪಾಲಾಗುತ್ತಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ.

ಇದರ ವಿರುದ್ಧ ಆಮ್ ಆದ್ಮಿ ಪಕ್ಷವು ಬೆಂಗಳೂರಿನಾದ್ಯಂತ ಎಲ್ಲಾ ವಾರ್ಡ್ಗಳಲ್ಲಿಯೂ ಮನೆಮನೆಗೆ ತೆರಳಿ ಹಾಗೂ ಜನನಿ ಬಿಡ ಪ್ರದೇಶಗಳಲ್ಲಿ "ಪಂಗನಾಮ" ಎಂಬ ಅಭಿಯಾನವನ್ನು ನಡೆಸಿ ಈ ಸೈಬರ್ ಅಪರಾಧಗಳು ತಕ್ಕಮಟ್ಟಿಗಾದರೂ ನಿಯಂತ್ರಣಕ್ಕೆ ಬರಬೇಕೆಂಬುದು ನಮ್ಮ ಅಭಿಲಾಷೆ ಎಂದು ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಳೆದು ಎಂಟು ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಮಾತ್ರ ಪೆÇಲೀಸ್ ಇಲಾಖೆಯ ಸೈಬರ್ ಅಪರಾಧ ವಿಭಾಗದಲ್ಲಿ 8000ಕ್ಕೂ ಹೆಚ್ಚು ದೂರುಗಳಿಂದ 1250 ಕೋಟಿ ರೂಪಾಯಿಗಳು ಕಳ್ಳರ ಪಾಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೈಬರ್ ಅಪರಾಧವನ್ನು ನಿಯಂತ್ರಿಸಲು ಸಾಧ್ಯವಾಗದಿರುವುದು ಸರ್ಕಾರಗಳ ಬೇಜವಾಬ್ದಾರಿಯನ್ನು ತೋರಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಕಾಲಕಾಲಕ್ಕೆ ಅಳವಡಿಸಿಕೊಂಡು ಸೈಬರ್ ತಜ್ಞರನ್ನು ನೇಮಕ ಮಾಡಿಕೊಂಡು ಈ ಅಪರಾಧಗಳನ್ನು ತಡೆಗಟ್ಟಲು ಪೆÇಲೀಸ್ ಇಲಾಖೆಯು ಸಂಪೂರ್ಣ ವಿಫಲ ವಾಗಿರುವುದು ಕಂಡುಬರುತ್ತದೆ.

ಕೂಡಲೇ ಸರ್ಕಾರವು ಎಚ್ಚೆತ್ತುಕೊಂಡು ಇತ್ತ ಕಡೆ ಗಮನ ಹರಿಸಬೇಕೆಂಬುದು ಪಕ್ಷದ ಒತ್ತಾಯವಾಗಿದೆ ಇದೇ ಸಮಯದಲ್ಲಿ ಜನತೆಗೆ ಅರಿವನ್ನು ಮೂಡಿಸುವಂತಹ "ಪಂಗನಾಮ" ಅಭಿಯಾನವನ್ನು ಯಶಸ್ವಿಗೊಳಿಸಲು ನಾಗರಿಕರು ಸಹ ನಮ್ಮೊಂದಿಗೆ ಕೈಜೋಡಿಸಬೇಕೆಂದು ಜಗದೀಶ್ ಚಂದ್ರು ಮನವಿ ಮಾಡಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಮಾತನಾಡಿ ಈಗಾಗಲೇ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಅಭಿಯಾನವನ್ನು ನಡೆಸುತ್ತಿದ್ದೇವೆ. ನಾಗರೀಕರಿಂದ ಅದ್ಭುತ ಪೂರ್ವ ಸ್ವಾಗತ ದೊರೆಯುತ್ತಿದ್ದು ಅಲ್ಲಿನ ಸ್ಥಳಿಯರು ಸಹ ನಮ್ಮೊಂದಿಗೆ ಕೈಜೋಡಿಸುತ್ತಿರೆಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು