LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸೊಸೈಟಿ ಸ್ಥಾಪನೆಗೆ ಚಿಂತನೆ ಖಾಸಗಿ ಹಣಕಾಸು ಸಂಸ್ಥೆಗಳ ಹಾವಳಿ ತಡೆಗೆ ಸರ್ಕಾರದಿಂದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯಿಂದ ಸಾಲ ಪಡೆದವರು ಕಂಗಾಲಾಗಿದ್ದು, ಈ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತಮಟ್ಟದ ಸಚಿವರ ಸಮಾಲೋಚನೆ ಸಭೆ ನಡೆದಿದೆ.ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ. ಜಿ. ಪರಮೇಶ್ವರ್, ಎಚ್.ಕೆ. ಪಾಟೀಲ್, ಕೃಷ್ಣಭೈರೇಗೌಡ, ಕೆ.ಗೋವಿಂದರಾಜು, ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದಾರೆ.

ಖಾಸಗಿ ಹಣಕಾಸು ಸಂಸ್ಥೆಗಳವರಿಂದ ಸಾಲ ಪಡೆದವರಿಗೆ ಕಿರುಕುಳ ನೀಡಲಾಗುತ್ತಿದ್ದು, ಈಗಾಗಲೇ 3ಕ್ಕೂ ಹೆಚ್ಚು ಮಂದಿ ಆತ್ಮಹತ್ಯೆಗೆ ಶರಣಾಗಿದ್ದು, ಕೆಲ ಜಿಲ್ಲೆಗಳ ಗ್ರಾಮಗಳಲ್ಲಿ ಸಾಲ ಪಡೆದವರು ಗ್ರಾಮವನ್ನೇ ತೊರೆದಿರುವ ಘಟನೆಗಳು ನಡೆದಿವೆ. ಹಾಗಾಗಿ ಇಂತಹ ಪ್ರಕರಣಗಳು ಸಂಭವಿಸದಂತೆ ಇರಲು ಮಸೂದೆಯೊಂದನ್ನು ತರಲು ಸರ್ಕಾರ ಮುಂದಾಗಿದೆ. ಈ ಮಸೂದೆಯಲ್ಲಿ ಸಾಲ ನೀಡಿದ್ದ ಸಂಸ್ಥೆಗಳವರು ಸಾಲಗಾರರಿಗೆ ಕಿರುಕುಳ ನೀಡಿದರೆ ಅಂತಹವರ ವಿರುದ್ಧ ಜಾಮೀನು ರಹಿತ ದೂರು ದಾಖಲು, ಅಪರಾಧಿಗಳಿಗೆ ಮೂರು ವರ್ಷ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಕ್ರೆಡಿಟ್ ಕೋ ಆಪ್‍ರೇಟಿವ್ ಸೊಸೈಟಿ ಆರಂಭಿಸಲು ಚಿಂತನೆ ನಡೆಸಲಾಗಿದೆ.

ಈ ಸೊಸೈಟಿ ವತಿಯಿಂದ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡುವ ಯೋಜನೆಯನ್ನು ಆರಂಭಿಸೋದು, ಕಡಿಮೆ ಬಡ್ಡಿ ದರದಲ್ಲ ಸಾಲ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ.
ಈ ಸಂಬಂಧ ಈಗಾಗಲೇ ಅಧಿಕಾರಿಗಳು ರಾಜಸ್ಥಾನ, ತೆಲಂಗಾಣಕ್ಕೆ ತೆರಳಿ ಅಧ್ಯಯನ ನಡೆಸಿ ವರದಿ ನೀಡಿದ್ದಾರೆ ಎಂದು ಹೇಳಲಾಗಿದೆ. ಒಟ್ಟಾರೆ ಮೈಕ್ರೋ ಫೈನಾನ್ಸ್‍ನವರ ಹಾವಳಿ ತಡೆಗೆ ಸರ್ಕಾರ ಮುಂದಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು