LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಸೋಲನ್ನು ನಾನು ಸ್ವೀಕಾರ ಮಾಡ್ತೇನೆ: ನಿಖಿಲ್​ ಕುಮಾರಸ್ವಾಮಿ

ರಾಮನಗರ: ಈ ಸೋಲನ್ನು ನಾನು ಸ್ವೀಕಾರ ಮಾಡ್ತೇನೆ. ಆದರೆ ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇನೆ ಎಂದು ಎನ್ ಡಿಎ ಅಭ್ಯರ್ಥಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, ನಿಖಿಲ್ ಕುಮಾರಸ್ವಾಮಿ ವಿರುದ್ಧ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು ಅನುಭವಿಸಿದ್ದಾರೆ.

ಫಲಿತಾಂಶದ ಬಳಿಕ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ. 87 ಸಾವಿರ ಮತ ನೀಡಿದ ಚನ್ನಪಟ್ಟಣ ಜನರಿಗೆ ಧನ್ಯವಾದ ತಿಳಿಸುತ್ತೇನೆ. ಜೆಡಿಎಸ್​, ಬಿಜೆಪಿ ಕಾರ್ಯಕರ್ತರಿಗೂ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದು ಹೇಳಿದರು.

ನಾನು ಸೋತರೂ ರಾಮನಗರ ಜಿಲ್ಲೆಯಲ್ಲಿ ಎಲ್ಲರಿಗೂ ಧ್ವನಿಯಾಗಿ ಕೆಲಸ ಮಾಡ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಮಾನವೇ ಅಂತಿಮ. ಎಲ್ಲಿ ಎಡವಿದ್ದೇವೆ ಅಂತ ಚರ್ಚೆ ಮಾಡುತ್ತೇವೆ ಎಂದರು.

ಎಚ್​ಡಿ ದೇವೇಗೌಡ, ಎಚ್​ಡಿ ಕುಮಾರಸ್ವಾಮಿ ಅವರನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನ. ಚುನಾವಣೆ ಸಂದರ್ಭದಲ್ಲಿ ಜನರಿಗೆ ನಾನು ಭರವಸೆ ಕೊಟ್ಟಿದ್ದೆ. ಆ ಭರವಸೆ ಕೇವಲ ಚುನಾವಣೆಗೆ ಸಂಬಂಧಪಟ್ಟಿದ್ದಲ್ಲ. ನಾನು ಕೊಟ್ಟ ಮಾತನ್ನು ಹಿಂಪಡೆಯಲ್ಲ ಎಂದರು.

ನಾನು ರಾಮನಗರದಲ್ಲಿ ಜನಿಸಿಲ್ಲ, ಆದರೆ, ಭಾವನಾತ್ಮಕ ಸಂಬಂಧವಿದೆ. ನಾನು ಎಚ್​ಡಿ ಕುಮಾರಸ್ವಾಮಿ ಅವರ ಜೊತೆ ಸೇರಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತೇನೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಒಂದು ಸಮುದಾಯದ ಮತದಾರರು ಕಾಂಗ್ರೆಸ್​ ಪರ ನಿಂತಿದ್ದಾರೆ. ಆದರೆ ಈ ಸೋಲಿನಿಂದ ಎದೆಗುಂದುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು