LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ: ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ವನ್ನು ಗುರುವಾರದಿಂದ ಫೆಬ್ರವರಿ 13ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ವಿಗಾಗಿ ಜನರಿಗೆ ಕುಷ್ಠರೋಗದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಆಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕುಷ್ಠರೋಗ ಮುಕ್ತ ಭಾರತ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಕನಸಾಗಿತ್ತು. ಗಾಂಧಿಜೀಯವರು ಹುತಾತ್ಮರಾದ ದಿನವಾದ ಜನವರಿ 30 ರಿಂದ 15 ದಿನಗಳ ಕಾಲ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ ಏರ್ಪಡಿಸಲಾಗುತ್ತಿದೆ. ಕುಷ್ಠರೋಗವು ಲಿಪ್ರೆ ಎಂಬ ಬ್ಯಾಕ್ಟೀರಿಯಾದಿಂದ ಬರುವ ಕಾಯಿಲೆಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಗುಣಲಕ್ಷಣಗಳನ್ನು ಪತ್ತೆಹಚ್ಚಿ ಶೀಘ್ರ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದಾಗಿದೆ. ಕಾಯಿಲೆ ನಿರ್ಮೂಲನೆಗಾಗಿ ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡಬೇಕಿದೆ ಎಂದರು.

ಕುಷ್ಠರೋಗದ ನಿರ್ಮೂಲನೆ ಕುರಿತು ಜಿಲ್ಲೆಯ ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ಅಧ್ಯಕ್ಷರು, ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನೊಳಗೊಂಡ ತಂಡವು ಐ.ಇ.ಸಿ ಚಟುವಟಿಕೆಗಳಡಿ ವ್ಯಾಪಕವಾಗಿ ಜನಜಾಗೃತಿ ಮೂಡಿಸಿ ಕುಷ್ಠರೋಗದ ಬಗ್ಗೆ ಜನರಲ್ಲಿರುವ ಕೀಳಿರಿಮೆಯನ್ನು ಹೋಗಲಾಡಿಸಬೇಕಿದೆ. ಚಿಕಿತ್ಸೆ ಪಡೆದುಕೊಳ್ಳುವಂತೆ ಜನರ ಮನವೊಲಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಬೆಳಗಿನ ಪ್ರಾರ್ಥನಾ ವೇಳೆ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ವಾಸವಿರುವ ವಿದ್ಯಾರ್ಥಿಗಳಿಗೆ ಕುಷ್ಠರೋಗದ ನಿಯಂತ್ರಣ ಬಗ್ಗೆ ಅರಿವು ನೀಡಬೇಕು. ಗ್ರಾಮಗಳಲ್ಲಿನ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು, ಸ್ತ್ರೀಶಕ್ತಿ, ಸ್ವಸಹಾಯ ಗುಂಪುಗಳೊಂದಿಗೆ ಸಮನ್ವಯ ಸಾಧಿಸಿ ಕುಷ್ಠರೋಗ ಅರಿವು ಆಂದೋಲನದಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಕುಷ್ಠರೋಗದ ಗುಣಲಕ್ಷಣಗಳು ಹಾಗೂ ಅದರ ನಿಯಂತ್ರಣ ವಿಧಾನಗಳ ಕುರಿತು ಸಂಪೂರ್ಣ ತಿಳಿವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

ಜಿಲ್ಲಾ ಕುಷ್ಠರೋಗ ನಿರ್ಮೂನಾಧಿಕಾರಿ ಡಾ. ಚಂದ್ರಶೇಖರ್ ಅವರು ಆರಂಭದಲ್ಲಿ ಮಾತನಾಡಿ 2024 ಏಪ್ರಿಲ್‍ನಿಂದ ಡಿಸೆಂಬರ್‍ವರೆಗೆ ಜಿಲ್ಲೆಯಲ್ಲಿ 38 ಮಂದಿ ಪುರುಷರು ಹಾಗೂ 12 ಮಂದಿ ಮಹಿಳೆಯರು ಸೇರಿದಂತೆ ಒಟ್ಟು 50 ಕುಷ್ಠರೋಗಿಗಳನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ದೇಹದ ಯಾವುದೇ ಭಾಗದಲ್ಲಿ ತಿಳಿಬಿಳಿ ತಾಮ್ರ ವರ್ಣದ ಕೆಂಪುಮಿಶ್ರಿತ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು ಕುಷ್ಠರೋಗದ ಲಕ್ಷಣವಾಗಿರಬಹುದು. ಅಂತಹವರು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ತಪಾಸಣೆಗೆ ಒಳಗಾಗಬೇಕು. ಅಗತ್ಯವಿದ್ದರೆ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದರು.

ಇದೇ ವೇಳೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕುಷ್ಠರೋಗ ನಿರ್ಮೂಲನೆಯ ಪ್ರತಿಜ್ಞಾವಿಧಿ ಬೋಧಿಸಿ ಬಳಿಕ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ ದ ಭಿತ್ತಿಪತ್ರ ಬಿಡುಗಡೆ ಮಾಡಿದರು.
ಅಲ್ಲದೆ ಕುಷ್ಠರೋಗಕ್ಕೆ ಚಿಕಿತ್ಸೆ ಪಡೆದು ಗುಣಮುಖರಾಗಿರುವವರನ್ನು ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಆತ್ಮೀಯವಾಗಿ ಮಾತನಾಡಿಸಿದರು. ಕಾಯಿಲೆ ವಾಸಿಯಾಗಿದೆಯೇ, ಚಿಕಿತ್ಸೆ ಪಡೆಯುತ್ತಿದ್ದೀರಾ, ಹೆಚ್ಚಿನ ಚಿಕಿತ್ಸೆ ಅಗತ್ಯವಿದೆಯೇ ಎಂಬುದಾಗಿ ವಿಚಾರಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ಮಾಡಿದರು ಹಾಗೂ ಧೈರ್ಯ ತುಂಬಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಎಂ.ವಿ. ಸುಧಾ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಜಿಲ್ಲಾ ಏಡ್ಸ್ ಪ್ರತಿಬಂಧಕ ಘಟಕದ ಅಧಿಕಾರಿ ಡಾ. ರವಿಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ. ಅಂಕಪ್ಪ, ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಎಲ್ಲಾ ತಾಲೂಕು ವೈದ್ಯಾಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು