LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸ್ಪೀಕರ್ ಕಚೇರಿಗೆ ನುಗ್ಗಿದ BJP ಶಾಸಕರು, UT Khader ಜತೆ ಜಗಳ, ಉದ್ವಿಗ್ನ ಪರಿಸ್ಥಿತಿ

ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣ ಬೆಳಗಾವಿ ಅಧಿವೇಶನದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದು, ಇತ್ತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಸದಸ್ಯರು ನೇರವಾಗಿ ಸ್ಪೀಕರ್ ಕಚೇರಿಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ವರದಿಯಾಗಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಹಾಗೂ ವಿಧಾನಪರಿಷತ್​ ನಲ್ಲಿ ಈ ಸಂಬಂಧ ಸದನಲ್ಲಿ ವಿಪಕ್ಷ ಬಿಜೆಪಿ ಹಾಗೂ ಆಡಳಿತ ಪಕ್ಷದ ನಡುವೆ ಮಾತಿನ ಚಕಮಕಿ ನಡೆದೆ. ಸಂಘರ್ಷ ಹಿನ್ನಲೆಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಸದನವನ್ನು ಕೊಂಚ ಸಮಯ ಮುಂದೂಡಿದರು.

ಇದರಿಂದ ಕೆರಳಿದ ವಿಪಕ್ಷ ಬಿಜೆಪಿ ಸದಸ್ಯರು ಸ್ಪೀಕರ್​ ಜೊತೆ ಜಗಳಕ್ಕೆ ಬಿದ್ದಿದ್ದಾರೆ. ಸ್ಪೀಕರ್ ಕಚೇರಿಯಲ್ಲಿ ಖಾದರ್​ ಜೊತೆ ಏರು ಧ್ವನಿಯಲ್ಲೇ ಜಗಳ ಮಾಡಿದ್ದಾರೆ. ಅಲ್ಲದೇ ಸ್ಪೀಕರ್​ ಕಚೇರಿಯ ಮೇಜು ಗುದ್ದಿ ಖಾದರ್​ ಅವರ ಜೊತೆ ಏರು ಧ್ವನಿಯಲ್ಲೇ ಜಗಳ ಮಾಡಿದ್ದಾರೆ.

ಮೂಲಗಳ ಪ್ರಕಾರ ಶಾಸಕ ಸುನೀಲ್ ಕುಮಾರ್, ವಿಪಕ್ಷ ನಾಯಕ ಅಶೋಕ್, ವಿಜಯೇಂದ್ರ, ಅರವಿಂದ್ ಬೆಲ್ಲದ್, ಸಿದ್ದು ಸವದಿ, ಸುರೇಶ್ ಗೌಡ ಸೇರಿದಂತೆ ಬಿಜೆಪಿ ಶಾಸಕರು ಸ್ಪೀಕರ್ ಕಚೇರಿಯಲ್ಲಿ ಖಾದರ್ ಅವರ ಜೊತೆ ವಾಗ್ದಾದ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಶಾಸಕರು ಸ್ಪೀಕರ್ ಜೊತೆ ಜಗಳದ ವಿಷಯ ತಿಳಿಯುತ್ತಿದ್ದಂತೆಯೇ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಸ್ಥಳಕ್ಕೆ ದೌಡಾಯಿಸಿ ಸ್ಪೀಕರ್ ಯುಟಿ ಖಾದರ್ ಬೆಂಬಲಕ್ಕೆ ನಿಂತರು. ಹೀಗಾಗಿ ಎರಡೂ ಕಡೆಯಿಂದ ವಾಗ್ವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಸ್ಪೀಕರ್ ಕಚೇರಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು