LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸ್ಮೃತಿ ಮಂಧಾನ ಸಿಡಿಲಬ್ಬರಕ್ಕೆ ವಿಶ್ವ ದಾಖಲೆಗಳೇ ಉಡೀಸ್

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಸಹ ಶ್ರೀಲಂಕಾ ಮತ್ತು ನ್ಯೂಝಿಲೆಂಡ್ ಆಟಗಾರ್ತಯರು ಬರೆದಿದ್ದ ವಿಶ್ವ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.
ವಿಂಡೀಸ್ ವಿರುದ್ಧದ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಅರ್ಧಶತಕ ಬಾರಿಸುವುದರೊಂದಿಗೆ ಟಿ20 ಕ್ರಿಕೆಟ್‍ನಲ್ಲಿ ಒಂದೇ ವರ್ಷ ಅತ್ಯಧಿಕ ಹಾಫ್ ಸೆಂಚುರಿ ಸಿಡಿಸಿದ ಮಹಿಳಾ ಬ್ಯಾಟರ್ ಎಂಬ ವಿಶ್ವ ದಾಖಲೆ ಸ್ಮೃತಿ ಮಂಧಾನ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮಿಥಾಲಿ ರಾಜ್ ಹೆಸರಿನಲ್ಲಿತ್ತು.

2018 ರಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕಿ ಮಿಥಾಲಿ ರಾಜ್ 7 ಅರ್ಧಶತಕ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ.ಸ್ಮೃತಿ ಮಂಧಾನ ಈ ವರ್ಷ ಟಿ20 ಕ್ರಿಕೆಟ್‍ನಲ್ಲಿ ಬರೋಬ್ಬರಿ 8 ಅರ್ಧಶತಕ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‍ನಲ್ಲಿ ಒಂದೇ ವರ್ಷ ಅತ್ಯಧಿಕ ಹಾಫ್ ಸೆಂಚುರಿ ಸಿಡಿಸಿದ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 77 ರನ್ ಬಾರಿಸುವುದರೊಂದಿಗೆ ಚುಟುಕು ಕ್ರಿಕೆಟ್‍ನಲ್ಲಿ ಒಂದೇ ವರ್ಷ ಅತ್ಯಧಿಕ ರನ್ ಕಲೆಹಾಕಿದ ವಲ್ರ್ಡ್ ರೆಕಾರ್ಡ್ ಕೂಡ ಸ್ಮೃತಿ ಮಂಧಾನ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಚಾಮರಿ ಅಥಾಪತ್ತು ಹೆಸರಿನಲ್ಲಿತ್ತು.
ಶ್ರೀಲಂಕಾ ಆಟಗಾರ್ತಿ ಚಾಮರಿ ಅಥಾಪತ್ತು ಈ ವರ್ಷ 21 ಪಂದ್ಯಗಳಲ್ಲಿ 720 ರನ್ ಕಲೆಹಾಕಿದ್ದಾರೆ. ಇದೀಗ ಈ ರನ್ ರಾಶಿಗಳನ್ನು ದಾಟಿ ಸ್ಮೃತಿ ಮಂಧಾನ ಅಗ್ರಸ್ಥಾನಕ್ಕೇರಿದ್ದಾರೆ.

ಈ ವರ್ಷ 23 ಟಿ20 ಇನಿಂಗ್ಸ್ ಆಡಿರುವ ಸ್ಮೃತಿ ಮಂಧಾನ 8 ಅರ್ಧಶತಕಗಳೊಂದಿಗೆ 42.4 ಸರಾಸರಿಯಲ್ಲಿ ಒಟ್ಟು 763 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ವರ್ಷ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದರ ಜೊತೆಗೆ ಟಿ20 ಕ್ರಿಕೆಟ್‍ನಲ್ಲಿ ಅತೀ ಹೆಚ್ಚು 50+ ಸ್ಕೋರ್ ಕಲೆಹಾಕಿದ ವಿಶ್ವ ದಾಖಲೆಯನ್ನು ಸಹ ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ನ್ಯೂಜಿಲೆಂಡ್‍ನ ಸುಝಿ ಬೆಟ್ಸ್ (29 ಬಾರಿ) ಹೆಸರಿನಲ್ಲಿತ್ತು. ಇದೀಗ 30ನೇ ಬಾರಿ ಐವತ್ತಕ್ಕಿಂತ ಹೆಚ್ಚು ರನ್ ಕಲೆಹಾಕುವ ಮೂಲಕ ಸ್ಮೃತಿ ಮಂಧಾನ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಹಾಗೆಯೇ ಏಕದಿನ ಕ್ರಿಕೆಟ್‍ನಲ್ಲಿ ಒಂದೇ ವರ್ಷ ಅತೀ ಹೆಚ್ಚು ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಸ್ಮೃತಿ ಮಂಧಾನ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ನ್ಯಾಟ್ ಸ್ಕಿವರ್-ಬ್ರಂಟ್, ಸೋಫಿ ಡಿವೈನ್ ಸೇರಿದಂತೆ 7 ಬ್ಯಾಟರ್‍ಗಳು ಒಂದೇ ವರ್ಷ 3 ಏಕದಿನ ಶತಕಗಳನ್ನು ಬಾರಿಸಿದ್ದರು. ಇದೀಗ ಸ್ಮೃತಿ ಮಂಧಾನ ಒಂದೇ ವರ್ಷ 4 ಏಕದಿನ ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು