LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸ್ಯಾಂಡಲ್ ವುಡ್‍ಗೆ "ಮದ್ದಾನೆ" ಆಗಮನ

ಸತೀಶ್ ಕುಮಾರ್ ಎಸ್ ನಿರ್ದೇಶನದ ಈ ಚಿತ್ರಕ್ಕೆ ನಿಹಾಲ್ ರಾಜ್ ನಾಯಕಪ್ಯಾಂಥರ್ಸ್ ಕ್ರಿಯೇಟಿವ್ ಸಿನಿಮಾಸ್ ಲಾಂಛನದಲ್ಲಿ ರಂಜನ ಎಂ ಕುಮಾವತ್ ನಿರ್ಮಿಸುತ್ತಿರುವ ಹಾಗೂ ಸತೀಶ್ ಕುಮಾರ್ ಎಸ್ ಚೊಚ್ಚಲ ನಿರ್ದೇಶನದ "ಮದ್ದಾನೆ" ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕರಾದ ಕೆ.ಮಂಜು , ರಮೇಶ್ ಯಾದವ್ ಹಾಗೂ ಕಡ್ಡಿಪುಡಿ ಚಂದ್ರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಿಹಾಲ್ ರಾಜ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.

ಮುಹೂರ್ತ ಸಮಾರಂಭದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ "ಮದ್ದಾನೆ" ಚಿತ್ರದ ಬಗ್ಗೆ ಚಿತ್ರತಂಡದವರು ಮಾತನಾಡಿದರು."ಮದ್ದಾನೆ" ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಸತೀಶ್ ಕುಮಾರ್, ಇದೊಂದು ಹಳ್ಳಿ ಹಾಗೂ ಕಾಡಿನ ನಡುವೆ ನಡೆಯುವ ಕಥೆ. ಹೆಚ್ಚಿನ ಭಾಗದ ಚಿತ್ರೀಕರಣ ಚಿಕ್ಕಮಗಳೂರಿನಲ್ಲೇ ನಡೆಯುತ್ತದೆ. ನಿಹಾಲ್ ರಾಜ್ ನಾಯಕನಾಗಿ ನಟಿಸುತ್ತಿದ್ದಾರೆ. ನನ್ನ ಶ್ರೀಮತಿ ರಂಜನ ಎಂ ಕುಮಾವತ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ವಿನೋದ್ ಭಾರತಿ ಛಾಯಾಗ್ರಹಣ, ಸ್ವಾಮಿನಾಥನ್ ಸಂಗೀತ ನಿರ್ದೇಶನ, ಪುನೀತ್ ಆರ್ಯ ಸಾಹಿತ್ಯ ಹಾಗೂ ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಅರವಿಂದ್ ರಾವ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಮೂಲತಃ ಮಾರ್ಷಲ್ ಆರ್ಟ್ಸ್ ಕಲಾವಿದನಾಗಿರುವ ನಾನು, ಈವರೆಗೂ ಸಾಕಷ್ಟು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿ ಪದಕ ಪಡೆದಿದ್ದೇನೆ.

ಬೆಂಗಳೂರಿನ ಕೆಲವು ಕಡೆ ಮಾರ್ಷಲ್ ಆರ್ಟ್ಸ್ ತರಭೇತಿ ಶಾಲೆಗಳನ್ನು ನಡೆಸುತ್ತಿದ್ದೇನೆ. ಮೂವತ್ತು ವರ್ಷಗಳಿಂದ ಕನ್ನಡ ಚಿತ್ರಗಳನ್ನೇ ನೋಡಿಕೊಂಡು ಬರುತ್ತಿರುವ ಪ್ರೇಕ್ಷಕ ನಾನು. ಸಿನಿಮಾ ನಿರ್ದೇಶನ ನನ್ನ ಕನಸು. ನಿರ್ದೇಶನದ ಬಗ್ಗೆಯೂ ಓದಿಕೊಂಡು ಬಂದು ಈಗ ಮೊದಲ ನಿರ್ದೇಶನದ ಚಿತ್ರ ಆರಂಭಿಸಿದ್ದೇನೆ ಎಂದರು.

ನಾನು ಮೂಲತಃ ರಂಗಭೂಮಿ ಕಲಾವಿದ. "ರಾಣಾ" ಹಾಗೂ "ವಿಷ್ಣುಪ್ರಿಯ" ಚಿತ್ರಗಳಲ್ಲಿ ನಟಿಸಿದ್ದೇನೆ. ಕೆ.ಮಂಜು ಅವರ ಸಹಕಾರ ಮೊದಲಿನಿಂದಲೂ ಇದೆ. ಇಂದು ನಾನು ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೂ ಬಂದು ಅವರು ಹಾರೈಸಿದ್ದು ಸಂತೋಷವಾಗಿದೆ. ಅವರಿಗೆ ಹಾಗೂ ಅವಕಾಶ ನೀಡಿದ ನಿರ್ದೇಶಕ, ನಿರ್ಮಾಪಕರಿಗೆ ಧನ್ಯವಾದ ಎಂದರು ನಾಯಕ ನಿಹಾಲ್ ರಾಜ್.

ಮೊದಲ ನಿರ್ಮಾಣದ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ರಂಜನ ಎಂ ಕುಮಾವತ್. ಸಂಗೀತ ನಿರ್ದೇಶಕ ಸ್ವಾಮಿನಾಥನ್, ಛಾಯಾಗ್ರಾಹಕ ವಿನೋದ್ ಭಾರತಿ, ಗೀತರಚನೆಕಾರ ಪುನೀತ್ ಆರ್ಯ, ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ ಹಾಗೂ ನಟ ಅರವಿಂದ್ ರಾವ್ ತಮ್ಮ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು