LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸ್ವಂತ ಖರ್ಚಿನಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ 3 ಲಕ್ಷಕ್ಕೂ ಹೆಚ್ಚು ಲಾಡು ವಿತರಣೆ

ರಾಮನಗರ: ಪ್ರತಿ ವರ್ಷದಂತೆ ಈ ವರ್ಷವೂ ಸಹ 78ನೇ ಸ್ವಾತಂತ್ರ್ಯೋತ್ಸವದ ದಿನದಂದು ರಾಮನಗರ ಕ್ಷೇತ್ರದ ಶಾಸಕ ಹೆಚ್.ಎ.ಇಕ್ಬಾಲ್‍ಹುಸೇನ್ ಅವರ ಸ್ವಂತ ಖರ್ಚಿನಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ ಗಳು, ಶಾಲಾ-ಕಾಲೇಜುಗಳ ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಿಹಿ (ಲಾಡು) ವಿತರಣೆ ಮಾಡಲು ಭರದಿಂದ ಸಿದ್ದತೆಗಳು ನಡೆಯುತ್ತಿದೆ.

ಕಳೆದ ಎರಡು ದಿನಗಳಿಂದ ರಾಯರದೊಡ್ಡಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ 100ಕ್ಕೂ ಹೆಚ್ಚು ನುರಿತ ಬಾಣಸಿಗರು ಲಾಡುಗಳನ್ನು ತಯಾರಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಜಿಲ್ಲೆಯ ರಾಮನಗರ, ಮಾಗಡಿ, ಚನ್ನಪಟ್ಟಣ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ / ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ, ಸ್ನಾತಕೋತ್ತರ, ಡಿಇಡಿ, ಬಿಎಡ್ ಕಾಲೇಜುಗಳ ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೆ ಆಯಾಯ ವಿಭಾಗಗಳ ಮುಖ್ಯಸ್ಥರ ಮೂಲಕ ಸಿಹಿ ತುಂಬಿದ ಬಾಕ್ಸ್ಗಳನ್ನು ವಿತರಿಸಲು ಎಲ್ಲ ಸಿದ್ದತೆ ನಡೆಯುತ್ತಿದೆ.

ಪ್ರಾಥಮಿಕ ಶಾಲೆಯ ಮಕ್ಕಳ ಸಂಖ್ಯೆ ಹೆಚ್ಚಿರುವುದರಿಂದ ಬಿಇಓಗಳು ಕ್ಲಸ್ಟರ್ ಹಂತದಲ್ಲಿ ಸುಗಮವಾಗಿ ಸಿಹಿ ವಿತರಣೆ ಮಾಡಲು ಮಕ್ಕಳ ಪಟ್ಟಿ ಸಿದ್ದತೆ ಮಾಡಿ ಕೊಂಡಿದ್ದು, ಆ.14ರ ಬುಧವಾರ ಬೆಳಿಗ್ಗೆ ರಾಮನಗರದಿಂದ ಎಲ್ಲ ತಾಲ್ಲೂಕುಗಳಿಗೆ ಸಿಹಿ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.ನೋಡೆಲ್ ಅಧಿಕಾರಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಆಯಾಯ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಡಿಪಿಓಗಳು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸಿಹಿ ತುಂಬಿದ ಬಾಕ್ಸ್ಗಳನ್ನು ಪಡೆದು ಸಮರ್ಪಕ ವಿತರಣೆಗೆ ಕ್ರಮ ವಹಿಸಲಿದ್ದಾರೆ. ಅವರ ಸಹಕಾರದಿಂದಲೇ ಪ್ರತಿವರ್ಷ ಸಿಹಿ ವಿತರಣೆ ಕಾರ್ಯಕ್ರಮ ಯಶ ಸ್ಸು ಕಾಣುತ್ತಿದೆ ಎಂದು ಶಾಸಕರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು