LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸ್ವಚ್ಛತೆಗೆ ನನ್ನ ಮೊದಲ ಆದ್ಯತೆ: ಹೆಚ್. ಬಾಲಕೃಷ್ಣ

ದೇವನಹಳ್ಳಿ: ತಾಲೂಕಿನ ಆಡಳಿತ ಸೌಧದ ಆವರಣದ ಸ್ವಚ್ಛತೆ ಮಾಡಿಸಲಿದ್ದೇನೆ, ಆವರಣದ ಮೈದಾನದಲ್ಲಿ ಶುಚಿಗೊಳಿಸಿ ಹಲವಾರು ಗಿಡಮರಗಳನ್ನು ನೆಡಲಾಗುವುದು ಮತ್ತು ಸಾರ್ವಜನಿಕರಿಗಾಗಿ ಶೌಚಾಲಯವನ್ನು ನಿರ್ಮಿಸುವುದರ ಮೂಲಕ ಸ್ವಚ್ಛತೆಗೆ ನನ್ನ ಮೊದಲ ಆದ್ಯತೆ ಎಂದು ನೂತನ ತಹಸೀಲ್ದಾರ್ ಎಚ್.ಬಾಲಕೃಷ್ಣ ಹೇಳಿದರು.

ದೇವನಹಳ್ಳಿ ತಾಲೂಕಿನ ಆಡಳಿತ ಸೌಧದಲ್ಲಿ ನೂತನ ತಹಸಿಲ್ದಾರ್ ಆಗಿ ಅಧಿಕಾರ ಸ್ವೀಕರಿಸಿ ಸಹಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ದೇವನಹಳ್ಳಿ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಸಹ ನನಗಿದೆ ಸಾಕಷ್ಟು ಜನಪರ, ರೈತಪರ ಕೆಲಸ ನಿರ್ವಹಿಸುವ ಹುಮ್ಮಸ್ಸಿನಿಂದ ಹಲವಾರು ಜನಪರ ಸೇವೆಯನ್ನು ಮಾಡುವ ಆಶಯ ನನ್ನಲ್ಲಿದೆ ಹಾಗೂತಾಲೂಕಿನ ಬಗೆಹರಿಯದ ಸಮಸ್ಯೆಗಳಾದ ಸ್ಮಶಾನ, ರಸ್ತೆ ಸಂಪರ್ಕಗಳು, ಸರ್ಕಾರಿ ಶಾಲಾ ಕಟ್ಟಡಗಳ ದುರಸ್ಥಿ, ಭೂ ಒತ್ತುವರಿ ವಿವಾದಗಳು ಸೇರಿದಂತೆ ಹಲವಾರು ಸಾರ್ವಜನಿಕ ಜ್ವಲಂತ ಸಮಸ್ಯೆಗಳ ಕುರಿತು ಗಮನ ಹರಿಸಿ ಹಂತ-ಹಂತವಾಗಿ ಬಗೆಹರಿಸಲಾಗುವುದು ಎಂದರು.

ಈ ವೇಳೆಯಲ್ಲಿ ಹಲವಾರು ಸಮಾಜದ ಮುಖಂಡರುಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಆಡಳಿತ ಸೌಧದ ಸಿಬ್ಬಂದಿ ವರ್ಗದವರು ನೂತನವಾಗಿ ಅಧಿಕಾರ ಸ್ವೀಕರಿಸಿದ ತಹಶೀಲ್ದಾರ್ ರವರಿಗೆ ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಆರ್‍ಎಚ್‍ಐ ಗಂಗಾಧರ್, ತಹಸಿಲ್ದಾರ್ ರಾಜೀವ್ ಸುಲೋಚನ, ನಿವೃತ್ತ ತಹಸೀಲ್ದಾರ್ ವಿಜಯ್ ಕುಮಾರ್, ಆರ್.ಐ.ಮಹೇಶ್, ಶಿರಸ್ತೆದಾರ್ಭರತ್, ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್. ಎಂ ರವಿಕುಮಾರ್ ಮತ್ತು ಮುಖಂಡರು, ಸಂತೋಷ್, ಮಹೇಶ್, ಸಮಾಜಸೇವಕ ಭುವನಹಳ್ಳಿ ತಿಪ್ಪಣ್ಣ, ಸೋಲೂರು ನಾಗಾರಾಜ್ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಆಡಳಿತ ಸೌಧದ ಸಿಬ್ಬಂದಿಯ ವರ್ಗದವರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು