LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸ್ವಚ್ಛ ರಾಜಕಾರಣಕ್ಕಾಗಿ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಿ: ಕೆಆರ್‍ಎಸ್ ಜಿಲ್ಲಾಧ್ಯಕ್ಷ ಶಿವಶಂಕರ್

ದೊಡ್ಡಬಳ್ಳಾಪುರ: ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ಮುಖಂಡರು ಪಕ್ಷದ ತತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಕೆಆರ್‍ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ಅವರು ತಿಳಿಸಿದರು.

ನಗರದಲ್ಲಿನ ಪಕ್ಷದ ಕಚೇರಿಯಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಕ್ಷದ ಉದ್ದೇಶ ಸ್ವಚ್ಛಾ, ಪ್ರಾಮಾಣಿಕ, ಭ್ರಷ್ಟಾಚಾರ ರಹಿತವಾದ ಆಡಳಿತ ನೀಡುವಂತಹದ್ದು. ಲೂಟಿಕೋರ ರಾಜಕಾರಣಿಗಳನ್ನು ಸಮಾಜದಿಂದ ಹೊರ ಹಾಕಿ ಸಾಮಾಜಿಕ ಕಳಕಳಿ ಇರುವಂತಹ ಜನ ಸ್ನೇಹಿ ರಾಜಕಾರಣಿಗಳು ನಮ್ಮ ಪಕ್ಷಕ್ಕೆ ಹಾಗೂ ಸಮಾಜಕ್ಕೆ ಬೇಕು.

ಈ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕು ಎಂದರು.ಪ್ರಸ್ತುತ ರಾಜ್ಯ ರಾಜಕೀಯ ತುಂಬಾ ಹದಗೆಟ್ಟಿದೆ. ಅದು ರಾಜಕಾರಣ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆ ಆಗುತ್ತದೆ. ಜನರ ಹಣವನ್ನು ಲೂಟಿ ಹೊಡೆದು ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದ್ದಾರೆ ಎಂದು ದೂರಿದರು.ನಂತರ ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ವಿ.ನಾಗರಾಜು ಮಾತನಾಡಿ, ನಾನು ಪಕ್ಷದ ಸಿದ್ಧಾಂತವನ್ನು ಒಪ್ಪಿ ಕೆಲಸ ಮಾಡುತ್ತಿದ್ದೇನೆ.

ನನ್ನ ಕಾರ್ಯವೈಖರಿಯನ್ನು ಪರಿಗಣಿಸಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಪಕ್ಷದ ಈ ನಿರ್ಧಾರಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ತಾಲೂಕಿನಲ್ಲಿ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಿಂದ ಪಕ್ಷ ಗಟ್ಟಿಗೊಳಿಸಲು ಶ್ರಮಿಸುತ್ತೇನೆ ಎಂದರು.ತಾಲೂಕು ಘಟಕದ ನೂತನ ಪದಾಧಿಕಾರಿಗಳು ಕೆ.ವಿ.ನಾಗರಾಜ್-ಅಧ್ಯಕ್ಷ, ಡಿ.ಎಂ.ಶ್ರೀನಿವಾಸ್ ಉಪಾಧ್ಯಕ್ಷ, .ಡಿ.ಪಿ.ಮುರಹರಿ-ಪ್ರಧಾನ ಕಾರ್ಯದರ್ಶಿ, ಮಂಜುನಾಥ್-ಕಾರ್ಯದರ್ಶಿ, ಪಾಪಣ್ಣ-ಕಾರ್ಯದರ್ಶಿ, .ಗೌತಮ್ ಗಂಗಪ್ಪ-ಜಂಟಿ ಕಾರ್ಯದರ್ಶಿ, ಎಸ್.ಬಾಲಕೃಷ್ಣ- ಸಂಘಟನಾ ಕಾರ್ಯದರ್ಶಿ ಈ ವೇಳೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು