LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸ್ವಸಹಾಯ ಗುಂಪುಗಳಿಂದ ಪ್ರಮುಖ ಉತ್ಪನ್ನಗಳ ಪ್ರದರ್ಶನ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳೊಂದಿಗೆ ಭಾಗವಹಿಸಿದ್ದು, ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 10 ಆಹಾರ ಮೇಳದ ಮಳಿಗೆಗಳು ಮತ್ತು 50 ಖಾದಿ ಉತ್ಪನ್ನಗಳ ಮೇಳಗಳು ಒಳಗೊಂಡಿದೆ. ಈ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ದಿನಾಂಕ:26-12-2024 ರಿಂದ 04.01.2025ರವರೆಗೆ ಪ್ರತಿ ದಿನ ಬೆಳಿಗ್ಗೆ 10.30 ಯಿಂದ ರಾತ್ರಿ 9.30 ರವರೆಗೆ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ: ಪ್ರತಿ ದಿನ ಸಂಜೆ 6.30 ರಿಂದ 9.00 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗಾವಿಯಲ್ಲಿ ಆಯೋಜಿಸಲಾಗುತ್ತಿರುವ ಸತತ 4ನೇ ವರ್ಷದ ಈ ಮೇಳದಲ್ಲಿ ಪ್ರಮುಖವಾಗಿ ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುವುದು ವಿಶೇಷತೆಯಾಗಿದೆ.

ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ 50 'ಅಕ್ಕ ಕೆಫೆ'ಗಳನ್ನು ಒಂದೇ ಮಾದರಿ ವಿನ್ಯಾಸದಡಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮದಡಿ ಅಂದಾಜು 1200 ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಮುಂದುವರೆದು, 'ಅಕ್ಕ-ಕಫೆ' ಕಾರ್ಯಕ್ರಮದ ಭಾಗವಾಗಿ ಈ ಮೇಳದ ಮೈದಾನದಲ್ಲಿನ ಆಹಾರ ಕೋರ್ಟ್‍ನ್ನು "ಅಕ್ಕ-ಕೆಫೆ" ಶೀರ್ಷಿಕೆಯಡಿ ಆಕರ್ಷಣೀಯವಾಗಿ ಸಿದ್ದಪಡಿಸಲಾಗಿದೆ.

ಸ್ಥಳದಲ್ಲೇ ಆಹಾರ ತಯಾರಿಕೆ: ಈ ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದಲ್ಲಿ ಹೆಸರುವಾಸಿಯಾದ ಗಿರಮಿಟ್/ಚುರುಮರಿ ಮಂಡಕ್ಕಿ, ಜೋಳದ ಖಡಕ್ ರೊಟ್ಟಿ ಸೇರಿದಂತೆ ಹೋಳಿಗೆ, ಮಂಗಳೂರು ನೀರ್‍ದೋಸೆ ಮತ್ತು ಮಾಂಸಹಾರಿ ಆಹಾರಗಳಾದ ಬ್ಯಾಂಬು ಬಿರಿಯಾನಿ ಮುಂತಾದವುಗಳನ್ನು ಸ್ಥಳದಲ್ಲೇ ತಯಾರಿಸಿ ಕೊಡಲಾಗುತ್ತಿದೆ.ರಾಜ್ಯದಲ್ಲಿ ಅಭಿಯಾನದಡಿ 2.79 ಲಕ್ಷ ಸ್ವ-ಸಹಾಯ ಗುಂಪುಗಳಡಿ 29.66 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಹಾಗೂ 45 ಸಾವಿರ ಸ್ವ-ಸಹಾಯ ಗುಂಪುಗಳಡಿ 4.50 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯಅಭಿಯಾನದಡಿ ಸಂಘಟಿಸಲಾಗಿದ್ದು,

ಪ್ರತಿಯೊಬ್ಬ ಮಹಿಳೆಯು ಸ್ಮಾವಲಂಬನೆಯ ಬದುಕಿನೊಂದಿಗೆ ತನ್ನ ಕುಟುಂಬದ ಅಭಿವೃದ್ಧಿಗೆ ಪೂರಕ ಸೇವೆಗಳನ್ನು ಪಡೆಯುವಲ್ಲಿ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.
ರಾಜ್ಯದಲ್ಲಿ ಈ ಮಹಿಳೆಯರು ಉತ್ಪನ್ನಗಳ ಮಾರಾಟಕ್ಕೆ ಪ್ರತಿಯೊಂದು ಹಳ್ಳಿ, ಸಂತೆ, ತಾಲ್ಲೂಕು ಮಟ್ಟದಲ್ಲಿ ಮಾಸಿಕ ಸಂತೆ, ಜಿಲ್ಲಾ ವಸ್ತು ಪ್ರದರ್ಶನ ಮಾರಾಟ ಮೇಳ ಏರ್ಪಡಿಸುವುದಷ್ಟೆ ಅಲ್ಲದೆ ಇತರೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಮೇಳಗಳಿಗೆ ರಾಜ್ಯದ ಮಹಿಳೆಯರನ್ನು ನಿಯೋಜನೆ ಮಾಡುವ ಮೂಲಕ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಕಳೆದ 3 ವರ್ಷದಿಂದ ಬೃಹತ್ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದಂತೆ ಈ ವರ್ಷವು ಸಹ ಮೇಳ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕಿ ಪಿ.ಐ.ವಿದ್ಯಾ ಅವರು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು