LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸ್ವಾಮೀಜಿ ಕಾನೂನು ಉಲ್ಲಂಘನೆ ಮಾಡಿದ್ದಾರೆ, ಲಾಠಿ ಚಾರ್ಜ್ ಅನಿವಾರ್ಯ ಆಗಿತ್ತು: ಪರಮೇಶ್ವರ್‌

ಬೆಂಗಳೂರು: ಪಂಚಮಸಾಲಿ ಪ್ರತಿಭಟನೆ  ವೇಳೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ ಇತ್ತು ಎಂದು ಗೃಹಸಚಿವ ಜಿ. ಪರಮೇಶ್ವರ್‌  ಅವರು ಪೊಲೀಸರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪಂಚಮಸಾಲಿಗಳ ಪ್ರತಿಭಟನೆ ವೇಳೆ ಲಾಠಿ ಚಾರ್ಜ್‌ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಗೃಹಸಚಿವರು ಪ್ರತಿಕ್ರಿಯೆ ನೀಡಿದರು.

ಪಂಚಮಸಾಲಿ ಪ್ರತಿಭಟನೆ ಅವರ ಹಕ್ಕು. 5 ಸಾವಿರ ಟ್ರ್ಯಾಕ್ಟರ್‌ಗಳನ್ನು ತೆಗೆದುಕೊಂಡು ಮುತ್ತಿಗೆ ಹಾಕಲು ಪ್ರತಿಭಟನೆ ಮಾಡಲು ಮುಂದಾಗಿದ್ದರು. ಅದಕ್ಕೆ ಅನುಮತಿ ನೀಡಲಾಗಿತ್ತು, ಮೂವರು ಸಚಿವರನ್ನು ಪ್ರತಿಭಟನಾ ಸ್ಥಳಕ್ಕೆ ಕಳಿಸಲಾಗಿತ್ತು. ಸಿಎಂ ಜೊತೆ ಮಾತುಕತೆಗೆ ಸ್ವಾಮೀಜಿ ಬರಲಿಲ್ಲ. ಮುಖ್ಯರಸ್ತೆಗೆ ಪ್ರತಿಭಟನಾಕಾರರು ಬಂದರು. ಕಾನೂನು ಉಲ್ಲಂಘನೆ ಮಾಡಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೋದಾಗ ಲಘು ಲಾಠಿ ಪ್ರಹಾರ ನಡೆದಿದೆ. ಸ್ವಾಮೀಜಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಲಾಠಿ ಚಾರ್ಜ್ ಮಾಡುವುದು ಅನಿವಾರ್ಯ ಆಗಿತ್ತು. ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ ಇತ್ತು ಎಂದು ತಿಳಿಸಿದರು.

ಇನ್ನೂ ಗೋಲಿಬಾರ್ ಮಾಡುವ ಪ್ಲ್ಯಾನ್‌ ಇತ್ತು ಎಂಬ ಸ್ವಾಮೀಜಿ ಹೇಳಿಕೆ ಆ ರೀತಿ ಏನೂ ಇಲ್ಲ, ಎಂದರಲ್ಲದೇ ಪೊಲೀಸರು ಯಾರ ಮೇಲೂ ದುರುದ್ದೇಶಪೂರಿತವಾಗಿ ಲಾಠಿ ಪ್ರಹಾರ ನಡೆಸಿಲ್ಲ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು