LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಹಕ್ಕು ಬಾಧ್ಯತೆಗಳ ಅರಿವು ಅವಶ್ಯ ಸಂವಿಧಾನ ದಿನಾಚರಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ , ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಭಾರತದ ಸಂವಿಧಾನ ಅಂಗೀಕರಣಗೊಂಡ 75 ನೇ ವಾರ್ಷಿಕೋತ್ಸವವನ್ನು ಸಂವಿಧಾನ ದಿನ ಎಂದು ಆಚರಿಸುತ್ತೇವೆ. ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳು ಸಂವಿಧಾನದಂತೆ ನಡೆದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಂತೆ ಕೆಲಸ ಮಾಡಬೇಕು.

ಆದ್ದರಿಂದ ರಾಜ್ಯದ ?ಲ್ಲ ಶಾಲಾಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿ, ಅದರ ಆಶಯಗಳನ್ನು ವಿದ್ಯಾರ್ಥಿಗಳು ಮನನ ಮಾಡಿಕೊಳ್ಳಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದರು.ಸಂವಿಧಾನವನ್ನು ತಿದ್ದುಪಡಿ ಮಾಡಲಾಗುವುದು ಎಂಬ ಬಿಜೆಪಿಯವರ ಧೋರಣೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸಂವಿಧಾನಕ್ಕೆ ವಿರೋಧವಾಗಿರುವವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ.

ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳೂ ಸಹ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮ್ಮೆ ನಮ್ಮದು ಎಂದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು