LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕ ಕೆಟಿ ರಾಮರಾವ್‍ಗೆ ಇಡಿ ಸಮನ್ಸ್

ಹೈದರಾಬಾದ್: 2023ರ ಫೆಬ್ರುವರಿಯಲ್ಲಿ ಹೈದರಾಬಾದ್‌ನಲ್ಲಿ ನಡೆದ ಫಾರ್ಮುಲಾ-ಇ-ರೇಸ್‌ನಲ್ಲಿನ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಕೆಟಿ ರಾಮರಾವ್ ಮತ್ತು ಇತರ ಕೆಲವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮುಂದಿನ ತಿಂಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ತೆಲಂಗಾಣ ಪೊಲೀಸ್ ಭ್ರಷ್ಟಾಚಾರ ನಿರ್ಗಹ ದಳ (ಎಸಿಬಿ) ದೂರನ್ನು ಗಮನದಲ್ಲಿಟ್ಟುಕೊಂಡು ತನಿಖಾ ಸಂಸ್ಥೆಯು ಕಳೆದ ವಾರ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಇಸಿಐಆರ್ ಅಥವಾ ಎಫ್‌ಐಆರ್ ದಾಖಲಿಸಿದೆ.

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಮತ್ತು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರ ರಾಮರಾವ್ ಜನವರಿ 7 ರಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ತನಿಖಾ ಸಂಸ್ಥೆ ಹೇಳಿದೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಮತ್ತು ನಿವೃತ್ತ ಅಧಿಕಾರಿ ಮತ್ತು ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ (ಎಚ್‌ಎಂಡಿಎ) ಮಾಜಿ ಮುಖ್ಯ ಎಂಜಿನಿಯರ್ ಬಿಎಲ್‌ಎನ್ ರೆಡ್ಡಿ ಅವರಿಗೆ ಕ್ರಮವಾಗಿ ಜನವರಿ 2 ಮತ್ತು ಜನವರಿ 3 ರಂದು ಸಮನ್ಸ್ ನೀಡಲಾಗಿದೆ.

ಕೆಟಿಆರ್ ಎಂದು ಜನಪ್ರಿಯರಾಗಿರುವ 48 ವರ್ಷದ ರಾಮರಾವ್ ವಿರುದ್ಧದ ತನಿಖೆಯು ಫೆಬ್ರುವರಿಯಲ್ಲಿ ಹಿಂದಿನ ಬಿಆರ್‌ಎಸ್ ಆಡಳಿತದಲ್ಲಿ ಹೈದರಾಬಾದ್‌ನಲ್ಲಿ ಫಾರ್ಮುಲಾ-ಇ ರೇಸ್ ಸಂಘಟಕರೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಸೂಕ್ತ ನಿಯಮಗಳನ್ನು ಪಾಲಿಸದೆಯೇ ಕಂಪನಿಗೆ 55 ಕೋಟಿ ರೂ.ಗಳನ್ನು ವರ್ಗಾಯಿಸಲು ಅನುಮತಿ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದೆ.

ಮೂಲಗಳ ಪ್ರಕಾರ, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ನಿಬಂಧನೆಗಳ ಅಡಿಯಲ್ಲಿ ಜಾರಿ ನಿರ್ದೇಶನಾಲಯವು ಈ ಪ್ರಕರಣದಲ್ಲಿ ಸಂಭವನೀಯ ವಿದೇಶಿ ವಿನಿಮಯ ನೀತಿ ಉಲ್ಲಂಘನೆಗಳ ಬಗ್ಗೆಯೂ ತನಿಖೆ ನಡೆಸುತ್ತಿದೆ ಎನ್ನಲಾಗಿದೆ.

ಇದರಲ್ಲಿ ಭ್ರಷ್ಟಾಚಾರ ಎಲ್ಲಿದೆ? ನಾವು 55 ಕೋಟಿ ರೂ. ಪಾವತಿಸಿದ್ದೇವೆ. ಅವರು (ಫಾರ್ಮುಲಾ-ಇ) ಪಾವತಿಯನ್ನು ಒಪ್ಪಿಕೊಂಡಿದ್ದಾರೆ ಎಂದು ರಾಮರಾವ್ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಅಲ್ಲಗಳೆದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು