LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹತ್ತು ವರ್ಷದಲ್ಲಿ ರಕ್ಷಣಾ ವಲಯದ ರಫ್ತಿನಲ್ಲಿ ಹತ್ತು ಪಟ್ಟು ಹೆಚ್ಚಳ; ರಾಜನಾಥ್ ಸಿಂಗ್ ಪ್ರಶಂಸೆ

ನವದೆಹಲಿ: ಭಾರತದ ರಕ್ಷಣಾ ವಲಯದ ಮ್ಯಾನುಫ್ಯಾಕ್ಚರಿಂಗ್ ಕಾರ್ಯ ಕಳೆದ ಒಂದು ದಶಕದಲ್ಲಿ ಗಮನಾರ್ಹವಾಗಿ ಬೆಳೆದಿದೆ. ಕಳೆದ 10 ವರ್ಷದಲ್ಲಿ ಈ ಕ್ಷೇತ್ರದಿಂದ ಆಗುವ ರಫ್ತು 10 ಪಟ್ಟು ಹೆಚ್ಚಾಗಿದೆ. ದಶಕದ ಹಿಂದೆ ಒಂದು ವರ್ಷದಲ್ಲಿ 2,000 ಕೋಟಿ ರೂನಷ್ಟು ರಫ್ತಾಗುತ್ತಿತ್ತು. ಈಗ ಅದು ವರ್ಷವೊಂದಕ್ಕೆ 21,000 ಕೋಟಿ ರೂಗೆ ತಲುಪಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಮಾಹಿತಿ ನೀಡಿದ್ದಾರೆ. ಮಧ್ಯಪ್ರದೇಶದ ಮಹೂ ಪಟ್ಟಣದ ಆರ್ಮಿ ವಾರ್ ಕಾಲೇಜ್​ನಲ್ಲಿ ಸೇನಾಧಿಕಾರಿಗಳನ್ನು  ಉದ್ದೇಶಿಸಿ ಮಾತನಾಡುತ್ತಿದ್ದ ಸಚಿವರು, 2029ರೊಳಗೆ ಭಾರತದ ಡಿಫೆನ್ಸ್ ರಫ್ತು ಮೌಲ್ಯ 50,000 ಕೋಟಿ ರೂ ಗಡಿ ದಾಟುವ ಗುರಿ ಇಡಲಾಗಿರುವುದನ್ನು ತಿಳಿಸಿದ್ದಾರೆ.

ಸೈನಿಕ ತರಬೇತಿ ಕೇಂದ್ರಗಳನ್ನು ಶ್ಲಾಘಿಸಿದ ರಾಜನಾಥ್ ಸಿಂಗ್

ನಿರಂತರವಾಗಿ ಬದಲಾಗುತ್ತಿರುವ ಸಂದರ್ಭದಲ್ಲಿ ಹೊಸ ತಂತ್ರಜ್ಞಾನಗಳನ್ನು ಸಿದ್ಧಿಸಿಕೊಳ್ಳುವುದು ಬಹಳ ಅಗತ್ಯ. ಭವಿಷ್ಯದ ಯುದ್ಧ ಸ್ವರೂಪಗಳಿಗೆ ಒಗ್ಗಿಕೊಳ್ಳಲು ಸೈನಿಕರನ್ನು ಅಣಿಗೊಳಿಸಬೇಕು. ಆ ನಿಟ್ಟಿನಲ್ಲಿ ಮಿಲಿಟರಿ ತರಬೇತಿ ಕೇಂದ್ರಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹೇಳಿದ್ದಾರೆ.

ಮಾಹಿತಿ ಯುದ್ಧಕಲೆ, ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಆಧಾರಿತ ಯುದ್ಧಕಲೆ, ಪರೋಕ್ಷ ಯುದ್ಧ, ಎಲೆಕ್ಟ್ರೋಮ್ಯಾಗ್ನೆಟಿಕ್ ಸಮರ, ಬಾಹ್ಯಾಕಾಶ ಸಮರ, ಸೈಬರ್ ದಾಳಿ ಇತ್ಯಾದಿ ಅಸಂಪ್ರದಾಯಿಕ ಯುದ್ಧ ವಿಧಾನಗಳು ಇವತ್ತಿನ ಕಾಲಘಟ್ಟದಲ್ಲಿ ಎದುರಾಗುತ್ತಿವೆ. ಇವುಗಳನ್ನು ಎದುರಿಸುವುದು ಇವತ್ತಿನ ದೊಡ್ಡ ಸವಾಲು. ಇಂಥ ಸಂಕೀರ್ಣ ಯುದ್ಧಗಳನ್ನು ಎದುರಿಸಲು ಸೂಕ್ತ ತಂತ್ರಜ್ಞಾನ, ತರಬೇತಿ ಇತ್ಯಾದಿ ಎಲ್ಲವೂ ಅಗತ್ಯವಾಗಿರುತ್ತದೆ ಎಂದು ಕೇಂದ್ರ ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಮಿಲಿಟರಿ ಟ್ರೈನಿಂಗ್ ಸೆಂಟರ್​ಗಳು ತಮ್ಮ ತರಬೇತಿ ಪಠ್ಯಕ್ರಮವನ್ನು ನಿರಂತರವಾಗಿ ಉತ್ತಮಪಡಿಸುತ್ತಿವೆ. ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಯೋಧರು ಸಿದ್ಧರಾಗುವ ನಿಟ್ಟಿನಲ್ಲಿ ಇವುಗಳು ಶ್ರಮ ವಹಿಸುತ್ತಿವೆ ಎಂದ ಅವರು ಮುಂದಿನ ದಿನಗಳಲ್ಲಿ ಭಾರತದ ಎಲ್ಲಾ ಮೂರು ಸೇನೆಗಳೂ ಸಂಯೋಜಿತ ರೀತಿಯಲ್ಲಿ ಮತ್ತು ಹೆಚ್ಚು ಕ್ಷಮತೆಯಿಂದ ಒಗ್ಗೂಡಿ ಸವಾಲುಗಳನ್ನು ಎದುರಿಸಬಲ್ಲುವು ಎಂದಿದ್ದಾರೆ.

ಶ್ವದ ಅತ್ಯಂತ ಶಕ್ತಿಶಾಲಿ ಆರ್ಥಿಕತೆ ಮತ್ತು ಮಿಲಿಟರಿ ದೇಶವನ್ನಾಗಿ ಭಾರತವನ್ನು ಮಾಡಬೇಕೆಂಬ ಸಂಕಲ್ಪ ಸರ್ಕಾರದ್ದಾಗಿದೆ. ದೇಶದ ಭದ್ರತೆಗೆ ಪೂರ್ಣ ಗಮನ ಕೊಟ್ಟರೆ ಮಾತ್ರವೇ ಆರ್ಥಿಕ ಸಮೃದ್ಧಿ ನೆಲಸಲು ಸಾಧ್ಯ. ಹಾಗೆಯೇ, ಆರ್ಥಿಕತೆ ಬಲವಾಗಿದ್ದರೆ ಮಾತ್ರವೇ ಭದ್ರತಾ ವ್ಯವಸ್ಥೆ ಉತ್ತಮವಾಗಿರುತ್ತದೆ ಎಂದು ರಾಜನಾಥ್ ಸಿಂಗ್ ಅವರು ಆರ್ಥಿಕತೆ ಹಾಗೂ ಮಿಲಿಟರಿಗಳೆರಡೂ ಅನಿವಾರ್ಯ ಎಂಬುದನ್ನು ಒತ್ತಿಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು