LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

`ಹರ ಘರ್ ತಿರಂಗ' ಅಭಿಯಾನ ಆರಂಭ

ನವದೆಹಲಿ: ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು 1 ವಾರವಷ್ಟೇ ಬಾಕಿ ಉಳಿದಿದೆ. ಇದಕ್ಕೂ ಮುಂಚಿತವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಯನ್ನು ಅನುಸರಿಸಿ ಮುಂದಿನ ವಾರ ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಷ್ಟ್ರದಾದ್ಯಂತ `ಹರ್ ಘರ್ ತಿರಂಗ' ಅಭಿಯಾನವನ್ನು ಪ್ರಾರಂಭಿಸಲು ಸಿದ್ಧವಾಗಿದೆ.

ಜುಲೈ 28ರಂದು ತಮ್ಮ `ಮನ್ ಕಿ ಬಾತ್' ರೇಡಿಯೋ ಪ್ರಸಾರದಲ್ಲಿ ಪಿಎಂ ನರೇಂದ್ರ ಮೋದಿ ಹರ್ ಘರ್ ತಿರಂಗ ಅಭಿಯಾನದ ಕುರಿತು ಮಾತನಾಡಿದ್ದರು. harghartiranga.com ವೆಬ್‍ಸೈಟ್‍ನಲ್ಲಿ ರಾಷ್ಟ್ರಧ್ವಜದೊಂದಿಗೆ ಸೆಲ್ಫಿಗಳನ್ನು ಅಪ್‍ಲೋಡ್ ಮಾಡುವಂತೆ ಜನರ ಬಳಿ ಮನವಿ ಮಾಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗ ಅಭಿಯಾನವು ಕಳೆದ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದ್ದು, ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸಿದೆ.

ಈ ಆಂದೋಲನವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಮತ್ತೆ ಅದೇ ಉತ್ಸಾಹದಿಂದ ಭಾಗವಹಿಸಲು ನಾನು ಎಲ್ಲಾ ನಾಗರಿಕರಲ್ಲಿ ಮನವಿ ಮಾಡುತ್ತೇನೆ ಎಂದು ಗೃಹ ಸಚಿವ ಅಮಿತ್ ಶಾ ವಿನಂತಿಸಿದ್ದರು.ಆಗಸ್ಟ್ 11ರಿಂದ ಆಗಸ್ಟ್ 13ರವರೆಗೆ ಬಿಜೆಪಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗ ಯಾತ್ರೆ ನಡೆಸಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು