LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

`ಹವಾಮಾನ ಬದಲಾವಣೆಯಿಂದ ವಿಪತ್ತು ಉಂಟಾಗಲು ಮಾನವನ ದುರಾಸೆ ಕಾರಣ'

ಕೋಲಾರ: ಜಾಗತಿಕ ವಿಪತ್ತು ಕಾರಣ ಮಾನವನ ದುರಾಸೆಯಿಂದ ಪ್ಲಾಸ್ಟಿಕ್ ಬಳಕೆಯು ಒಂದಾಗಿದೆ ಎಂದು ಗ್ರೀನ ವಾರಿಯರ್ಸ್ ಮುಖ್ಯಸ್ಥೆ ಯುವಶಕ್ತಿ ತೇಜು ತಿಳಿಸಿದರು.ನಗರದ ಜಿ.ಟಿ.ಟಿ.ಸಿ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ,ಯಂಗ್ ಇಂಡಿಯಾ ಡೆವಲಪ್ಮೆಂಟ್ ಸೊಸೈಟಿ ಮತ್ತು ರೋಟರಿ ಕೋಲಾರ ಲೇಕ್ ಸೈಡ್ ವತಿಯಿಂದ ಅಂತರಾಷ್ಟ್ರೀಯ ವಿಪತ್ತು ಅಪಾಯ ನಿಯಂತ್ರಣ ದಿನದ ಅಂಗವಾಗಿ ಯುವಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ಗ್ರೀನ್ ವಾರಿಯರ್ಸ್ ಮುಖ್ಯಸ್ಥೆ ನಂದೀತ ಕೆ.ವಿ ಮಾತಾನಾಡಿ, ವಿಪತ್ತು ನಿರ್ವಹಣೆ ಕೇವಲ ಸರಕಾರದ ಜವಾಬ್ದಾರಿಯಲ್ಲದೆ ಪ್ರತಿಯೊಬ್ಬರ ಜವಾಬ್ದಾರಿ, ಹೀಗಿರುವಾಗ ವಿಪತ್ತು ನಿರ್ವಹಣೆಯಲ್ಲಿ ಸಮುದಾಯದ ಭಾಗವಹಿಸುವಿಕೆ ಅತೀ ಮುಖ್ಯ. ತುರ್ತು ಪರಿಸ್ಥಿತಿಯಲ್ಲಿ ಮೊದಲು ಪ್ರತಿಕ್ರಿಯಿಸುವವರು ಸಮುದಾಯವೇ ಆದರೂ ಪೂರ್ವಭಾವಿ ತಯಾರಿಯಲ್ಲಿ ಸಮುದಾಯದ ಭಾಗವಹಿಸುವಿಕೆ ಇನ್ನೂ ವಿರಳ.

ಹಾಗಾಗಿ ವೈಯಕ್ತಿಕವಾಗಿ, ಕೌಟುಂಬಿಕವಾಗಿ, ಸಮುದಾಯವಾಗಿ ವಿಪತ್ತಿನ ಪೂರ್ವಭಾವಿ ಸನ್ನದ್ಧತೆ ಮತ್ತು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕ್ರಿಯಾತ್ಮಕವಾಗಿ ಮತ್ತು ಯೋಜನೆಯೊಂದಿಗೆ ಪ್ರತಿಕ್ರಿಯಿಸಿದರೆ ಪುನಶ್ಚೇತನ ಮತ್ತು ಪುನರ್ವಸತಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ನಿರ್ವಹಿಸಲು ಸಾಧ್ಯ ಎಂದು ತಿಳಿ ಹೇಳಿದರು.ಜಿಟಿಟಿಸಿ ಕಾಲೇಜಿನ ಪ್ರಾಂಶುಪಾಲ ಡಿ.ವಿಕಾಸ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಹೂಹಳ್ಳಿ ನಾಗರಾಜ್, ಕಾರ್ಯದರ್ಶಿ ಶ್ಯಾಮಲ ಅಧಿತಿ, ಉಪನ್ಯಾಸಕರಾದ ಪ್ರವೀಣ್, ಸುರಭಿ, ಹಸಿರು ಸೇನೆಯ ಹೊದಲವಾಡಿ ನಂದೀಶ್, ಭವ್ಯ, ಯುವ ಮುಖಂಡ ಅಭಿಲಾಷ್ ಮುಂತಾದವರು ಭಾಗವಹಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು