LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

`ಹಸಿರು ನಾಳೆ ಮಲೆ ಮಹದೇಶ್ವರ ಬೆಟ್ಟ' ಯೋಜನೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಗ್ರಹವಾಗುತ್ತಿರುವ ತ್ಯಾಜ್ಯವನ್ನು ಸಂಗ್ರಹಣೆ ಮಾಡಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಅದನ್ನು ಮರುಬಳಕೆ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ತಿಳಿಸಿದರು.

ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಮೈಕ್ಯಾಪ್ಸ್ (ಮೈರಾಡ) ಸಂಸ್ಥೆಯ ಸಹಯೋಗದೊಂದಿಗೆ "ಹಸಿರು ನಾಳೆ ಮಲೆ ಮಹದೇಶ್ವರ ಬೆಟ್ಟ" ಯೋಜನೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಚಪ್ಪಲಿ, ಬಟ್ಟೆ, ನಿರುಪಯುಕ್ತ ಪೇಪರ್, ಒಣ ಎಲೆಗಳನ್ನು ಸಂಗ್ರಹಣ ಮಾಡಲಾಗುತ್ತಿದೆ.

ಇದೀಗ ಪೌರಕಾರ್ಮಿಕರು ಹಸಿ ಕಸ ಒಣ ಕಸ ವನ್ನಾಗಿ ಬೇರ್ಪಡಿಸಿ ಯಾವ ಯಾವ ಪದಾರ್ಥಗಳನ್ನು ಮರುಬಳಕೆ ಮಾಡಲು ಯಾವ ರೀತಿ ಸಿದ್ಧಪಡಿಸಬಹುದು ಎಂಬುದರ ಬಗ್ಗೆ ತರಬೇತಿ ನೀಡಲಾಗುತ್ತಿದೆ, ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈಗಾಗಲೇ ಸಭೆ ನಡೆಸಲಾಗಿದ್ದು ಮೈಕ್ಯಾಪ್ಸ್ ಸಂಸ್ಥೆಯ ವತಿಯಿಂದ 80 ಲಕ್ಷ ವೆಚ್ಚದ ಮಿಷನರಿಗಳನ್ನು ಖರೀದಿಸಲಾಗಿದ್ದು ಕಸದಿಂದ ರಸ ಮಾಡುವ ಈ ಒಂದು ಕಾರ್ಯಕ್ರಮವನ್ನು ಜನವರಿ ತಿಂಗಳಿನಿಂದ ಪ್ರಾರಂಭಿಸಲಾಗುವುದು, ಮರುಬಳಕೆಯಿಂದ ಬರುವ ಲಾಭವನ್ನು ನಮ್ಮ ಪೌರಕಾರ್ಮಿಕರಿಗೆ ನೀಡಲು ಕ್ರಮ ವಹಿಸಲಾಗಿದೆ ಎಂದರು.

ಈಗಾಗಲೇ ಶ್ರೀ ಕ್ಷೇತ್ರದಲ್ಲಿ ಸಂಗ್ರಹವಾಗುವ ಚಪ್ಪಲಿ ಬಟ್ಟೆಯನ್ನು ಸಿಮೆಂಟ್ ಕಂಪನಿಗೆ ನೀಡಲು, ಶ್ರೀ ಕ್ಷೇತ್ರದ ದಾಸೋಹ ಭವನದಲ್ಲಿ ಭಕ್ತರು ಪ್ರಸಾದ ತಿಂದು ಬಿಡುವ ತ್ಯಾಜ್ಯ ಆಹಾರ ಪದಾರ್ಥಗಳಿಂದ ಬಯೋಗ್ಯಾಸ್ ಒಣ ಎಲೆಗಳಿಂದ ಗೋಬರ್ ಗ್ಯಾಸ್ ಮಾಡಲು ಚಿಂತನೆ ನಡೆಸಲಾಗಿದೆ ಎಂದರು.ಇನ್ನು ಶ್ರೀ ಕ್ಷೇತ್ರದಲ್ಲಿರುವ ಪೌರಕಾರ್ಮಿಕರು ಯಾವ ಯಾವ ತ್ಯಾಜ್ಯ ಪದಾರ್ಥಗಳನ್ನು ಯಾವ ರೀತಿ ಪ್ರತ್ಯೇಕವಾಗಿ ಸಂಗ್ರಹಣೆ ಮಾಡಬೇಕು, ಯಾವ ರೀತಿ ವಿಲೇವಾರಿ ಮಾಡಿ ಮರುಬಳಕೆ ಮಾಡಬಹುದು ಎಂಬುದರ ವಿಶೇಷ ತರಬೇತಿ ನೀಡಿ ಪೌರಕಾರ್ಮಿಕರಿಗೆ ಪ್ರತ್ಯೇಕ ಪರಿಕರಗಳು, ಸಮವಸ್ತ್ರ ವಿತರಿಸಲಾಗುವುದು ಎಂದರು.

ಸಭೆಯಲ್ಲಿ ಮೈರಾಡ ಸಂಸ್ಥೆಯ ನಿರ್ದೇಶಕ ಅಶ್ರಫ್, ಮಲೆ ಮಹದೇಶ್ವರ ಬೆಟ್ಟದ ವಲಯ ಅರಣ್ಯಾಧಿಕಾರಿ ಅಮಿತ್, ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಪೌರಕಾರ್ಮಿಕ ಸಿಬ್ಬಂದಿಗಳು ಮೈರಾಡ ಸಂಸ್ಥೆಯ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು