LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹಾರರ್ ಜಾನರ್‍ನ "ಹಗ್ಗ" ಚಿತ್ರದ ಟೀಸರ್ ಬಿಡುಗಡೆ

ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ "ಹಗ್ಗ" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು. ಖ್ಯಾತ ನಿರ್ದೇಶಕ ಆರ್ ಚಂದ್ರು ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಅನೇಕ ಗಣ್ಯರು "ಹಗ್ಗ" ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಿರ್ದೇಶಕ ಅವಿನಾಶ್ ಮಾತನಾಡಿ ನಾನು ಮೂಲತಃ ಮೆಕಾನಿಕಲ್ ಎಂಜಿನಿಯರ್. ಸಿನಿಮಾ ನಿರ್ದೇಶನ ನನ್ನ ಕನಸು. ಆ ಕನಸು "ಹಗ್ಗ" ಚಿತ್ರದ ಮೂಲಕ ಈಡೇರಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆದರೆ "ಹಗ್ಗ" ನೇ ನಮ್ಮ ಚಿತ್ರದ ನಾಯಕ. ಹಾರರ್ ಜಾನರ್ ನ ಚಿತ್ರವಾದರೂ, ಚಿತ್ರದಲ್ಲಿ ಒಂದು ಪ್ರಮುಖ ಸಂದೇಶ ಸಹ ಇದೆ ಎಂದರು.

ಚಿತ್ರಕ್ಕೆ ನಾನೇ ಕಥೆ ಬರೆದು ನಿರ್ಮಾಣ ಮಾಡಿದ್ದೇನೆ. ಅವಿನಾಶ್ ನಿರ್ದೇಶನ ಮಾಡಿದ್ದಾರೆ. ಟೀಸರ್ ಬಿಡುಗಡೆ ಬಂದಿರುವ ಎಲ್ಲಾ ಗಣ್ಯರಿಗು ಧನ್ಯವಾದ. ಈಗಾಗಲೇ ಮೋಷನ್ ಪೋಸ್ಟರ್ ಮೂಲಕ "ಹಗ್ಗ" ಜನರ ಮನಸ್ಸಿಗೆ ಹತ್ತಿರವಾಗಿದೆ. ಈಗ ಟೀಸರ್ ಬಿಡುಗಡೆಯಾಗಿದೆ. ಆಗಸ್ಟ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ಮಾಪಕ ರಾಜ್ ಭಾರದ್ವಾಜ್ ತಿಳಿಸಿದರು.

ಅವಿನಾಶ್ ಅವರು ಚಿತ್ರದ ಕುರಿತು ಹೇಳಿದಾಗ ನನ್ನ ಪಾತ್ರ ಬಹಳ ಇಷ್ಟವಾಯಿತು. ನನ್ನನ್ನು "ಸೂಪರ್ ಹೀರೋ" ಎಂದು ತೋರಿಸಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ. ಆದರೆ ಒಳ್ಳೆಯ ಪಾತ್ರಕೊಟ್ಟ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ನಟಿ ಅನು ಪ್ರಭಾಕರ್.ನನ್ನದು ಈ ಚಿತ್ರದಲ್ಲಿ ಪತ್ರಕರ್ತೆಯ ಪಾತ್ರ. ಯಾವುದೋ ಒಂದು ವಿಷಯದ ಅನ್ವೇಷಣೆಗಾಗಿ ಹಳ್ಳಿಗೆ ಹೋಗುತ್ತೇನೆ. ಈ ಚಿತ್ರದಲ್ಲಿ ಜೀಪ್ ಕೂಡ ಡ್ರೈವ್ ಮಾಡಿದ್ದೇನೆ ಎಂದು ಹರ್ಷಿಕಾ ಪೂಣಚ್ಛ ತಿಳಿಸಿದರು.

ಇದು ನನ್ನ ಮೊದಲ ಚಿತ್ರ. ನಟನೆಗೆ ತಬಲನಾಣಿ ಅವರು ಬಹಳ ಸಹಾಯ ಮಾಡಿದರು. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ವೇಣು. ನಟ ತಬಲ ನಾಣಿ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.ನಿರ್ಮಾಪಕ ರಾಜ್ ಭಾರದ್ವಾಜ್ ಅವರೆ "ಹಗ್ಗ" ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಅವರದು.

ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ ಹಾಗೂ ಎನ್ ಎಂ ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಮನೋಹರ್ ಎಸ್ ಪಿ ಸಂಭಾಷಣೆ ಬರೆದಿದ್ದಾರೆ.ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು