LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಹುತಾತ್ಮ ಪಿಎಸ್‍ಐ ಜಗದೀಶ್‍ರವರ 9ನೇ ವರ್ಷದ ಪುಣ್ಯಸ್ಮರಣೆ

ದೊಡ್ಡಬಳ್ಳಾಪುರ: ಕರ್ತವ್ಯದ ವೇಳೆ ದುಷ್ಟರಿಂದ ಹುತಾತ್ಮರಾದ ಪಿ.ಎಸ್.ಐ ಜಗದೀಶ್ ರವರ 9ನೇ ವರ್ಷದ ಪುಣ್ಯ ಸ್ಮರಣೆ ದಿನಾಚರಣೆಯನ್ನು ನಗರದ ಹೊರವಲಯದ ಡಿ.ಕ್ರಾಸ್ ಬಳಿಯ ಪಿ ಎಸ್ ಐ ಜಗದೀಶ ವೃತ್ತದಲ್ಲಿ ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ ಘಟ್ಟ ರವಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಹಾಗೂ ಬೇರೆ ರಾಜ್ಯಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಲು ಕಷ್ಟವಾಗಿದೆ. ಆದ್ದರಿಂದ, ಉನ್ನತ ಅಧಿಕಾರಿಗಳಿಂದ ಸಹಾಯ ಪಡೆದು ಹುತಾತ್ಮ ಪಿ ಎಸ್ ಐ ಜಗದೀಶ್ ರವರ ಹೆಸರಿನಲ್ಲಿ ಐ ಎ ಎಸ್, ಐ ಪಿ ಎಸ್ ಹಾಗೂ ಕೆ ಪಿ ಎಸ್ ಸಿ ಪರೀಕ್ಷಾ ತರಬೇತಿ ಕೇಂದ್ರ ತೆರೆದು ನುರಿತ ಶಿಕ್ಷಕರಿಂದ ಶಿಕ್ಷಣ ನೀಡಲಾಗುವುದು ಎಂದರು.

ನಂತರ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಮಾತನಾಡಿ, ಅಹಿತಕರ ಘಟನೆಗಳು ನಡೆದ ಸಂದರ್ಭದಲ್ಲಿ ನಾವು ಸಮಾಜದಲ್ಲಿ ತಪ್ಪು ಮಾಡುವ ಸಮಾಜ ಘಾತುಕರ ಮೇಲೆ ಕಠಿಣ ಕ್ರಮಜರುಗಿಸಬೇಕಾಗುತ್ತದೆ. ಆದರೆ ಇಂತಹ ಸಂದರ್ಭಗಳಲ್ಲಿ ನಾವು ಜೀವದ ಹಂಗು ತೊರೆದು ಸೆಣಸಾಟ ನಡೆಸಬೇಕಾಗುತ್ತದೆ,ಇಂತಹುದೇ ಸಂದರ್ಭದಲ್ಲಿ ಪಿಎಸ್‍ಐ ಜಗದೀಶ್ ಅವರು ಕರ್ತವ್ಯ ನಿರ್ವಹಣೆಯ ಸಮಯದಲ್ಲಿ ತಮ್ಮ ಜೀವಕಳೆದುಕೊಂಡಿರುತ್ತಾರೆ. ಇವರನ್ನು ನೆನಸುತ್ತಾ ಹುತಾತ್ಮ ಅಧಿಕಾರಿಗೆ ಗೌರವ ಸಲ್ಲಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.

ಪಿಎಸ್‍ಐ ಜಗದೀಶ್ ರವರ ಒಂಭತ್ತನೆ ಹುತಾತ್ಮ ದಿನಾಚರಣೆ ಅಂಗವಾಗಿ ನಗರ ಠಾಣೆ ಪಿಎಸ್‍ಐ ಕೃಷ್ಣಪ್ಪ, ಎಎಸ್‍ಐ ಕೃಷ್ಣಮೂರ್ತಿ ಪೇದೆಗಳಾದ ಪಾಂಡುರಂಗ, ಪ್ರಕಾಶ್ ಹಾಗೂ ಯೋಗಶ್ರೀ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್, ನಗರಸಭಾ ಉಪಾಧ್ಯಕ್ಷ ಮಲ್ಲೇಶ್ ಹಾಗು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ. ಚಂದ್ರಶೇಖರ್ ಉಪ್ಪಾರ್, ಹುತಾತ್ಮ ಪಿ ಎಸ್ ಐ ಜಗದೀಶರವರ ಮಡದಿ, ಮಕ್ಕಳು ಹಾಗೂ ಸಾರ್ವಜನಿಕರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು