LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಹೆಚ್ಚುತ್ತಿರುವ ಅಪರಾಧ ಪ್ರಕರಣ ಸಂಜೆ ಹಿರಿಯ ಅಧಿಕಾರಿಗಳ ಡಿಜಿ ಸಭೆ

ಬೆಂಗಳೂರು: ಪೊಲೀಸ್ ತನಿಕಾ ಲೋಪದಿಂದಾಗಿ ಕೋರ್ಟ್ ವಿಚಾರಣೆಯಲ್ಲಿ ಖುಲಾಸೆಯಾಗುತ್ತಿರುವ ಅಪರಾಧ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಮತ್ತು ಬೆಂಗಳೂರು ನಗರ ಒಂದರಲ್ಲಿಯೇ ಆನ್ಲೈನ್‌ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಾಮಾನ್ಯ ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಜಾಸ್ತಿ ಆದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ರವರು ಇಂದು ಸಂಜೆ ೪ ಗಂಟೆಗೆ ಪೊಲೀಸ್ ಕಮಿಷನರ್ ಕಚೇರಿಯಲ್ಲಿರುವ ಸಭಾಂಗಣದಲ್ಲಿ ಎ ಸಿ ಪಿ ಮತ್ತು ಮೇಲ್ಪಟ್ಟ ಅಧಿಕಾರಿಗಳ ಸಭೆಯನ್ನು ಹಮ್ಮಿಕೊಂಡಿದ್ದಾರೆ.
ಈ ಸಭೆಯಲ್ಲಿ ನಗರದಲ್ಲಿ ವರದಿಯಾಗಿರುವ ಘೋರ ಅಪರಾಧಗಳ ತನಿಖೆಗಳ ಕುರಿತು ಬೆಂಗಳೂರು ನಗರದ ಎಂಟು ಡಿ ಸಿ ಪಿ ವಿಭಾಗಗಳ ಸೈಬರ್ ಕ್ರೆö ಪೊಲೀಸ್ ಠಾಣೆಗಳಲ್ಲಿ ಸಾಮಾನ್ಯ ಜನರಿಗೆ ಆನ್ಲೈನ್‌   ಮೂಲಕ ವಂಚಿಸಿರುವ ಪ್ರಕರಣಗಳ ತನಿಖೆ ಕುರಿತು ದೀರ್ಘ ಚರ್ಚೆ ನಡೆಸಿ ಆರೋಪಿಗಳ ಪತ್ತೆ ಮತ್ತು ಪರಿಹಾರ ಹಾಗೂ ಪತ್ತೆಯಾಗಿರುವ ಪ್ರಕರಣಗಳ ಆರೋಪಿಗಳ ಶಿಕ್ಷೆ ಬಗ್ಗೆ ನ್ಯಾಯಾಲಯದಲ್ಲಿ ಯಾವ ರೀತಿ ವಾದ ಮಂಡಿಸಬೇಕೆAದು ನಿರ್ಧಾರ ತೆಗೆದುಕೊಳ್ಳುವ ಸಭೆ ನಡೆಯಲಿದೆ.
ನ್ಯಾಯಾಲಯದಲ್ಲಿ ಖುಲಾಸೆಯಾದ ಪ್ರಕರಣಗಳನ್ನು ಪರಿಶೀಲನೆ ನಡೆಸಿ ತಪ್ಪಿತಸ್ಥ ತನಿಕಾ ಅಧಿಕಾರಿಗಳ ವಿರುದ್ಧ ಕ್ರಮ
ಕೈಗೊಳ್ಳುವ ಬಗ್ಗೆಯೂ ಸಹ ಚರ್ಚೆ ನಡೆಸಲಾಗುವುದು.
ಸೈಬರ್ ಅಪರಾಧ ಮತ್ತು ಸುಗಮ ಸಂಚಾರದ ಬಗ್ಗೆ ಹಾಗೂ ಕಾನೂನು ಸುವ್ಯವಸ್ಥೆ ಬಗ್ಗೆ ಮತ್ತು ಮಾಜಿ ಮುಖ್ಯಮಂತ್ರಿಗಳ, ಶಾಸಕರ, ಮಾಜಿ ಶಾಸಕರ, ಹಾಲಿ ಮುಖ್ಯಮಂತ್ರಿಗಳ ಮತ್ತು ಹಿರಿಯ ಐ ಎ ಎಸ್, ಐ ಪಿ ಎಸ್ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕೇಸುಗಳ ಬಗ್ಗೆ ಕುಲಂಕುಶವಾಗಿ ಚರ್ಚಿಸಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂದು ಚರ್ಚೆ ನಡೆಯಲಿದೆ.
ಕ್ರಿಮಿನಲ್ ಪ್ರಕರಣಗಳಲ್ಲಿ ತನಿಖಾ ಲೋಪವಿರೂವುದು ದೃಢಪಟಲ್ಲಿ ಇಲಾಖಾ ವಿಚಾರಣೆಗಾಗಿ ತನಿಖೆ ಬಗ್ಗೆ ವಿವರಣೆ ಪಡೆಯಲು ನೋಟಿಸ್ ನೀಡಿ ವಿವರಣೆ ಪಡೆದು ಕ್ರಮ ಕೈಗೊಳ್ಳುವ ಬಗ್ಗೆಯು ಚರ್ಚೆ ನಡೆಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚೆಗೆ ನಗರದಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಚರ್ಚಿಸಲಿದ್ದಾರೆ.
ಈ ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ್ ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತರುಗಳು ಹಾಗೂ ಜಂಟಿ ಪೊಲೀಸ್ ಆಯುಕ್ತ, ಸಂಚಾರ, ಸಿ ಎ ಆರ್ ಡಿ ಸಿ ಪಿ ಗಳು ಮತ್ತು ಕಾನೂನು ವ್ಯವಸ್ಥೆ ಡಿ ಸಿ ಪಿ ಗಳು ಹಾಗೂ ಸಂಚಾರಿ ಡಿ ಸಿ ಪಿ ಗಳು ಸೇರಿದಂತೆ ಒಟ್ಟು ಅಂದಾಜು ೮೦ ಜನ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು