LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ಬಾಯಿಗೆ ಬೀಗ ಹಾಕೊಳ್ಳಿ! ಕಾಂಗ್ರೆಸ್ ನಾಯಕರು, ಶಾಸಕರಿಗೆ ಡಿಕೆಶಿ ಖಡಕ್ ಎಚ್ಚರಿಕೆ

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಕ್ರಮಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ. ನಾನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿ ನೋಟಿಸ್ ನೀಡುತ್ತೇವೆ ಎಂದು ಹೇಳಿದ್ದಾರೆ.

ಪಕ್ಷ ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೇ ಗೊತ್ತು. ಪಕ್ಷದ ಹಿತದೃಷ್ಟಿಯಿಂದ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯದು. ಯಾವ ಸ್ವಾಮೀಜಿಗಳೂ ಮಾತಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ. ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬೇಕೆಂಬ ಆಗ್ರಹಗಳು ಕರ್ನಾಟಕ ಕಾಂಗ್ರೆಸ್‍ನಲ್ಲಿ ಹೆಚ್ಚಾದ ಬೆನ್ನಲ್ಲೇ ಡಿಕೆ ಶಿವಕುಮಾರ್ ಈ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಸಚಿವರು, ಶಾಸಕರು ಮತ್ತು ಪಕ್ಷದ ಅನೇಕ ನಾಯಕರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಇದರಿಂದ ಪಕ್ಷದ, ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗುತ್ತಿದೆ. ಹೀಗಾಗಿ ಇದೀಗ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಖುದ್ದು ಆ ಬಗ್ಗೆ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು