LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಹೆಣ್ಣುಮಕ್ಕಳ ಸುರಕ್ಷತೆ, ಹಕ್ಕು, ಆಶಯಗಳಿಗೆ ಆಪ್ತಗೆಳತಿ ಪೂರಕವಾಗಿದೆ: ಶಾಸಕ ಎ.ಆರ್. ಕೃಷ್ಣಮೂರ್ತಿ

ಚಾಮರಾಜನಗರ: ಹೆಣ್ಣುಮಕ್ಕಳ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ರೂಪಿಸಿರುವ ಅಪ್ತಗೆಳತಿ ಕಾರ್ಯಕ್ರಮ ಮಹಿಳೆಯರು, ಮಕ್ಕಳಿಗೆ ನೀಡಿರುವ ಹಕ್ಕು, ಆಶಯಗಳಿಗೆ ಪೂರಕವಾಗಿದೆ ಎಂದು ಕೊಳ್ಳೇಗಾಲ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಅಭಿಪ್ರಾಯಪಟ್ಟರು.ನಗರದ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ವಿನೂತನ ‘ಆಪ್ತಗೆಳತಿ... ...ನಿಮ್ಮ ಬಳಿಗೆ’ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಪ್ತಗೆಳತಿ ಕಿರುಪೆಟ್ಟಿಗೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ಆಪ್ತಗೆಳತಿ-ನಿಮ್ಮ ಬಳಿಗೆ ಪ್ರತಿಯೊಬ್ಬರ ಕಣ್ಣು ತೆರೆಸುವ ಕಾರ್ಯಕ್ರಮವಾಗಿದೆ. ಶತಶತಮಾನಗಳಿಂದಲೂ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಸಂವಿಧಾನ ಜಾರಿ ಬಳಿಕ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿದ್ದು, ಹೆಣ್ಣುಮಕ್ಕಳು ಶೈಕ್ಷಣಿಕ, ಅರ್ಥಿಕವಾಗಿ ಮುನ್ನೆಡೆದು ಸಬಲರಾಗುತ್ತಿದ್ದಾರೆ. ಇದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಮಹಿಳೆಯರು, ಮಕ್ಕಳಿಗೆ ನೀಡಿರುವ ಹಕ್ಕುಗಳೇ ಕಾರಣವಾಗಿವೆ ಎಂದರು.

ಇಂದು ಮಹಿಳೆ, ಪುರುಷರೆನ್ನದೇ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ದೌರ್ಜನ್ಯ ನಡೆದಾಗ ಮುಗ್ದ ಹೆಣ್ಣುಮಕ್ಕಳು ಹೇಳಿಕೊಳ್ಳಲು ಸಾಕಷ್ಟು ಮುಜುಗರ, ಯಾತನೆ ಅನುಭವಿಸುತ್ತಾರೆ. ಹೆಣ್ಣು ತಾಯಿಯಾಗಿ ಹೆಂಡತಿ, ಮಗಳು, ಅಕ್ಕ, ತಂಗಿಯಾಗಿ ನಮ್ಮನ್ನು ಅವರಿಸಿದ್ದಾರೆ. ದೌರ್ಜನ್ಯಕ್ಕೊಳಗಾದವರಿಗೆ ಬೆನ್ನುಬಾಗಿ ನಿಂತು ಮಾನಸಿಕ ಆತ್ಮಸ್ಥೈರ್ಯ ತುಂಬುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ಈ ನಿಟ್ಟಿನಲ್ಲಿ ಅಪ್ತಗೆಳತಿ ಕಾರ್ಯಕ್ರಮವು ಸಂವಿಧಾನದ ಆಶಯಗಳಿಗೆ ಪೂರಕವಾಗಿದೆ ಎಂದು ಶಾಸಕರಾದ ಕೃಷ್ಣಮೂರ್ತಿ ಅವರು ತಿಳಿಸಿದರು.ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ಅವರು ಮಾತನಾಡಿ ಅಪ್ತಗೆಳತಿ ಕಾರ್ಯಕ್ರಮ ಮಹಿಳೆಯರ ರಕ್ಷಣೆಗಾಗಿ ಕಲ್ಪಿಸಿರುವ ಉತ್ತಮ ಅವಕಾಶವಾಗಿದೆ. ಕಾರ್ಯಕ್ರಮವನ್ನು ಸಮರ್ಪಕವಾಗಿ ಜಾರಿಗೊಳಿಸುವುದರಿಂದ ಶಾಲಾ-ಕಾಲೇಜುಗಳಲ್ಲಿ ಹೆಣ್ಣುಮಕ್ಕಳು ಕಲಿಯಲು ಒಳ್ಳೆಯ ಪರಿಸರ ನಿರ್ಮಾಣವಾಗಲಿದೆ. ಕಲಿಕಾ ಪ್ರಕ್ರಿಯೆ ವೃದ್ಧಿಸಲಿದೆ ಎಂದರು. ದೌರ್ಜನ್ಯ ನಡೆದಾಗ ಹೆಣ್ಣುಮಕ್ಕಳು ಧೈರ್ಯವಾಗಿ ದೂರು ನೀಡುವ ವಾತಾವರಣ ನಿರ್ಮಾಣವಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಇದೊಂದು ಅರ್ಥಪೂರ್ಣ ಹಾಗೂ ಅತ್ಯದ್ಭುತ ಕಾರ್ಯಕ್ರಮವಾಗಿದೆ. ಮಹಿಳೆಯರು ಅದರಲ್ಲೂ ಚಿಕ್ಕಮಕ್ಕಳ ಮೇಲೆಯೂ ದೌರ್ಜನ್ಯ ಪ್ರಕ್ರಣಗಳು ದಾಖಲಾಗುತ್ತಿವೆ. ದೌರ್ಜನ್ಯ ಶಾಲೆಯಲ್ಲಿ, ಮನೆಯಲ್ಲಿ ಹಾಗೂ ಸಾರ್ವಜನಿಕವಾಗಿ ಎಲ್ಲಿಯಾದರೂ ನಡೆಯಬಹುದು. ಆದರೆ ಪೊಲೀಸ್ ಠಾಣೆಗೆ ದೂರು ನೀಡಲು ಕೆಲವರು ಮುಂದೆ ಬರುವುದಿಲ್ಲ. ಇದನ್ನು ಮನಗಂಡು ಅಪ್ತಗೆಳತಿ ಕಾರ್ಯಕ್ರಮ ರೂಪಿತವಾಗಿದ್ದು, ಮಹಿಳಾ ಸುರಕ್ಷತೆಗೆ ಲ್ಯಾಂಡ್‍ಮಾರ್ಕ್ ದೊರೆತಿದೆ. ದಾಖಲಾಗುವ ಪ್ರತಿಯೊಂದು ದೂರುಗಳು ನಂಬರಿಂಗ್ ಆಗಬೇಕು. ನೊಂದವರಿಗೆ ಪರಿಣಾಮಕಾರಿಯಾಗಿ ನ್ಯಾಯ ದೊರಕಿಸಲು ಪೊಲೀಸ್ ಇಲಾಖೆ ಮುಂದಾಗಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಜೀವಜಗತ್ತಿನ ಕೇಂದ್ರ ಬಿಂಧುವಾಗಿರುವ ಹೆಣ್ಣುಮಕ್ಕಳು ಹಲವು ಸಂಕೋಲೆ, ಸಂಕಷ್ಟಗಳಿಂದ ಹೊರಬರಲೂ ಇನ್ನೂ ಸಾಧ್ಯವಾಗಿಲ್ಲ. ಹುಟ್ಟಿದ ಮಗುವಿನಿಂದ ಹಿಡಿದು ವೃದ್ಧರಾದಿಯಾಗಿ ಮಹಿಳೆಯರು ದೌರ್ಜನ್ಯಕ್ಕೀಡಾಗುತ್ತಿದ್ದಾರೆ.

ಶೇ. 90ರಷ್ಟು ದೌರ್ಜನ್ಯಗಳು ಪರಿಚಿತರಿಂದಲೇ ನಡೆಯುತ್ತಿವೆ. ಇದು ಕಳವಳಕಾರಿ ಸಂಗತಿಯಾಗಿದೆ. ಈ ದಿಸೆಯಲ್ಲಿ ಹೆಣ್ಣುಮಕ್ಕಳ ಸುರಕ್ಷತೆಗಾಗಿ ಕಿರು ದೂರುಪೆಟ್ಟಿಗೆಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿಯೂ ಅಳವಡಿಸಲಾಗುತ್ತಿದೆ. ಯಾವುದೇ ಬಗೆಯ ದೌರ್ಜನ್ಯ ನಡೆದರೂ ಹೆಣ್ಣುಮಕ್ಕಳು, ಗಂಡುಮಕ್ಕಳು ಕಿರುಪೆಟ್ಟಿಗೆ ಮೂಲಕ ಮಾಹಿತಿ, ದೂರು ದಾಖಲಿಸಬಹುದು ಎಂದರು.

ಕಿರುಪಟ್ಟಿಗೆ ಮೂಲಕ ದೂರು ನೀಡುವ ಮಕ್ಕಳ ಹೆಸರನ್ನು ಗೌಪ್ಯವಾಗಿಡಲಾಗುವುದು. ಆಯಾ ಭಾಗದ ಬೀಟ್ ಪೋಲಿಸ್ ಕಾನ್ಸ್‍ಟೇಬಲ್‍ಗಳು ಪ್ರತಿ ಶನಿವಾರ ಕಿರುಪೆಟ್ಟಿಗೆ ತೆರೆದು ದೂರುಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಸಲ್ಲಿಸಲಿದ್ದಾರೆ. ಆ ಮೂಲಕ ಮಕ್ಕಳ ರಕ್ಷಣೆಗೆ ಕ್ರಮ ವಹಿಸಲಾಗಿದೆ. ಕಾರ್ಯಕ್ರಮದ ಮೊದಲ ಭಾಗವಾಗಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಿರುಪೆಟ್ಟಿಗೆ ಅಳವಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿನಿಲಯಗಳು, ರೈಲ್ವೆ ಹಾಗೂ ಬಸ್ ನಿಲ್ದಾಣ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಅಳವಡಿಸಲು ಇಲಾಖೆ ಮುಂದಾಗಿದೆ. ಕಾರ್ಯಕ್ರಮ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ. ಲಕ್ಷ್ಮೀ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್ ಅವರು ಅಪ್ತಗೆಳತಿ ಕಾರ್ಯಕ್ರಮದ ಸದುದ್ದೇಶ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದರು.ಇದೇ ವೇಳೆ ಜಿಲ್ಲೆಯ ವಿವಿಧ ಶಾಲಾ-ಕಾಲೇಜು ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರಿಗೆ ಅಪ್ತಗೆಳತಿ ಕಿರು ದೂರು ಪೆಟ್ಟಿಗೆಯನ್ನು ಸಾಂಕೇತಿಕವಾಗಿ ವಿತರಿಸಲಾಯಿತು.ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು,ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾದ ಮಂಜುನಾಥ ಪ್ರಸನ್ನ, ಡಿ.ವೈ.ಎಸ್.ಪಿ. ಲಕ್ಷ್ಮಯ್ಯ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು