LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಹೇರ್ ಡ್ರೈಯರ್ ಸ್ಫೋಟ ಪ್ರಕರಣ: ಕ್ವಾರಿ ಕೆಲಸಗಾರನ ಬಂಧನ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಹೇರ್ ಡ್ರೈಯರ್ ಸ್ಫೋಟ ಪ್ರಕರಣ ಕ್ವಾರಿ ಕಾರ್ಮಿಕನೊಬ್ಬನ ಸಂಚು ಎಂದು ತನಿಖೆ ವೇಳೆ ಬಹಿರಂಗವಾಗಿದೆ. ಕೊಲೆ ಮಾಡುವ ಉದ್ದೇಶದಿಂದ ಹೇರ್ ಡ್ರೈಯರ್ ಸ್ಫೋಟಿಸಿರುವುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದ್ದು, ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.

ಕ್ವಾರಿ ಕೆಲಸಗಾರ ಸಿದ್ದಪ್ಪ ಶೀಲವಂತ (35) ಬಂಧಿತ ಆರೋಪಿ. ನವೆಂಬರ್ 15 ರಂದು ಶಶಿಕಲಾ ಕೊಲೆ ಮಾಡಲು ಸಂಚು ರೂಪಿಸಿದ್ದನು, ಆರೋಪಿ ಸಿದ್ದಪ್ಪ ಹಾಗೂ ಬಸವ್ವ ರಾಜೇಶ್ವರಿ ನಡುವೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಈ ಅಕ್ರಮ ಸಂಬಂಧ ವಿಚಾರಕ್ಕೆ ಬಸಮ್ಮನ ಸ್ನೇಹಿತೆ ಶಶಿಕಲಾ ಎಂಬವರು ತಕರಾರು ಮಾಡಿದ್ದರು. ಹೀಗಾಗಿ ಬಸಮ್ಮ ಆರೋಪಿಯಿಂದ ದೂರಾಗಿದ್ದಳು. ಇದರಿಂದ ಆಕ್ರೋಶಗೊಂಡಿದ್ದ ಆರೋಪಿಯು ಶಶಿಕಲಾ ಅವರ ಕೊಲೆಗೆ ಸಂಚು ರೂಪಿಸಿದ್ದ ಎಂದು ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ.

ಆರೋಪಿ ತಾನೇ ಹೇರ್ ಡ್ರೈಯರ್ ಖರೀದಿಸಿ, ಹೇರ್ ಡ್ರೈಯರ್ ಸ್ಫೋಟಿಸಲು ಅದರೊಳಗೆ ಡೆಟೊನೇಟರ್ ಬಳಸಿ ಶಶಿಕಲಾ ಅವರ ವಿಳಾಸಕ್ಕೆ ಕಳುಹಿಸಿದ್ದಾನೆ. ಆದರೆ ಊರಲ್ಲಿ ಇರದ ಶಶಿಕಲಾ ಅವರು ತನ್ನ ಸ್ನೇಹಿತೆ ಬಸಮ್ಮ ಅವರ ಬಳಿ ಹೇರ್ ಡ್ರೈಯರ್ ಪಡೆಯುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. ಸ್ನೇಹಿತೆ ಶಶಿಕಲಾ ಮಾಹಿತಿಯಂತೆ ಡಿಟಿಡಿಸಿ ಕೋರಿಯರ್ ಸೆಂಟರ್ ಗೆ ತೆರಳಿ ಬಸಮ್ಮ ಹೇರ್ ಡ್ರೈಯರ್ ಪಡೆದು ಮನೆಗೆ ಮರಳಿದ ಬಸಮ್ಮ ಹೇರ್ ಡ್ರೈಯರ್ ಆನ್ ಮಾಡಿದ್ದಾರೆ. ಹೇರ್ ಡ್ರೈಯರ್ ಆನ್ ಮಾಡುತ್ತಿದ್ದಂತೆ ಅದು ಸ್ಫೋಟಗೊಂಡು ಅವರ ಕೈಗಳಿಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು