LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹೊರಬಂತು ಗುಂಮ್ಟಿ ಸಿನೆಮಾದ ಸುಮಧುರ ಗೀತೆ

ಈಗಾಗಲೇ ತನ್ನ ಶೀರ್ಷಿಕೆ ಮತ್ತು ಕಥಾಹಂದರದ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ಗುಂಮ್ಟಿ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ಗುಂಮ್ಟಿ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಸುಮಧುರ ಗೀತೆಯೊಂದನ್ನು ಬಿಡುಗಡೆ ಮಾಡಿದೆ.

ಹಾಡುವ ಹಕ್ಕಿ ಹಾಡುತೈತಿ ಮನುಸಾ ಕಾಯಕ ಮಾಡಿ ಕಾಣೋ ನೀನು ಕನಸಾ ಎಂಬ ಸಾಲುಗಳಿಂದ ಆರಂಭವಾಗುವ ಗುಂಮ್ಟಿ ಚಿತ್ರದ ಈ ಗೀತೆಗೆ ಮೆಹಬೂಬ್ ಸಾಬ್ ಧ್ವನಿಯಾಗಿದ್ದು, ಡೊಂಡಿ ಮೋಹನ್ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಕತ್ತಲೆ ಕೋಣೆ ಮತ್ತು ಇನಾಮ್ದಾರ್ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ಗುಂಮ್ಟಿ ಸಿನೆಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್-ಕಟ್ ಹೇಳಿದ್ದು, ಜೊತೆಗೆ ತೆರೆಮೇಲೆ ನಾಯಕ ನಟನಾಗಿಯೂ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಗುಂಮ್ಟಿ ಚಿತ್ರದ ಈ ಗೀತೆಯ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದ ಚಿತ್ರತಂಡ, ಹಾಡಿನ ಬಗ್ಗೆ ಮತ್ತು ಗುಂಮ್ಟಿ ಚಿತ್ರದ ಬಗ್ಗೆ ಒಂದಷ್ಟು ವಿಷಯಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿತು. ಮೊದಲಿಗೆ ಗುಂಮ್ಟಿಯ ಬಗ್ಗೆ ಮಾತಿಗಿಳಿದ ನಿರ್ದೇಶಕ ಕಂ ನಾಯಕ ನಟ ಸಂದೇಶ್ ಶೆಟ್ಟಿ ಆಜ್ರಿ, ಇದೊಂದು ಕಲಾತ್ಮಕ ಸಿನೆಮಾವಾಗಿದ್ದು, ಕರ್ನಾಟಕದ ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯನ್ನು ತೆರೆಮೇಲೆ ಹೇಳಲು ಹೊರಟಿದ್ದೇವೆ.

ಗುಂಮ್ಟಿ ಎಂಬುದು ಕುಡುಬಿ ಸಮುದಾಯಕ ಕಲಾಪ್ರಾಕಾರದ ಸಾಂಪ್ರದಾಯಿಕ ವಾದ್ಯವಾಗಿದ್ದು, ಅದನ್ನೇ ಸಿನೆಮಾದ ಟೈಟಲ್ ಆಗಿ ಇಟ್ಟುಕೊಂಡಿದ್ದೇವೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷ ಗುಂಮ್ಟಿ ಸಿನಿಮಾದಲ್ಲಿ ಅನಾವರಣವಾಗಲಿದೆ ಎಂದು ಶೀರ್ಷಿಕೆ ಮತ್ತು ಕಥಾಹಂದರದ ಬಗ್ಗೆ ವಿವರಣೆ ನೀಡಿದರು.

ಗುಂಮ್ಟಿ ಸಿನೆಮಾದಲ್ಲಿ ವೈಷ್ಣವಿ ನಾಡಿಗ್ ನಾಯಕಿಯಾಗಿ ಮಲ್ಲಿ ಎಂಬ ಹೆಸರಿನ ಕುಡುಬಿ ಸಮುದಾಯದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚೇತನ ನೈಲಾಡಿ, ಚಿತ್ರಕಲಾ, ನೂರ್ ಅಹ್ಮದ್, ಸ್ವರಾಜ್ ಲಕ್ಷ್ಮಿ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ತಸ್ಮೈ ಪ್ರೊಡಕ್ಷನ್ಸ್ ಮತ್ತು ಜ್ಯೋತಿ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ಜಂಟಿಯಾಗಿ ನಿರ್ಮಾಣವಾಗುತ್ತಿರುವ ಗುಂಮ್ಟಿ ಸಿನಿಮಾವನ್ನು ವಿಕಾಸ್ ಎಸ್. ಶೆಟ್ಟಿ ನಿರ್ಮಿಸುತ್ತಿದ್ದಾರೆ. ಗುಂಮ್ಟಿ ಚಿತ್ರಕ್ಕೆ ಅನೀಶ್ ಡಿಸೋಜಾ ಛಾಯಾಗ್ರಹಣ, ಶಿವರಾಜ ಮೇಹು ಸಂಕಲನವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು