LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಹೊಸ ಅಪರಾಧ ಕಾನೂನುಗಳು ಜಾರಿ ಕಾನ್‍ಸ್ಟೇಬಲ್‍ನಿಂದ ಹಿಡಿದು ಅಧಿಕಾರಿಗಳವರೆಗೂ ತರಬೇತಿ ನೀಡಲಾಗಿದೆ: ಗೃಹ ಸಚಿವ

ಬೆಂಗಳೂರು: ದೇಶಾದ್ಯಂತ ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಾಸನಗಳ ಮೂಲಕ ಡಿಜಿಟಲ್ ದಾಖಲೆಗಳನ್ನು ಪ್ರಾಥಮಿಕ ಪುರಾವೆಗಳಾಗಿಸುವಲ್ಲಿ ಪ್ರಮುಖ ಬದಲಾವಣೆ ಐಪಿಸಿ, ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳು ಜುಲೈ 1 ರಿಂದ ದೇಶದಲ್ಲಿ ಜಾರಿ ಆಗಿವೆ.

ಇಂದಿನಿಂದ 3 ಹೊಸ ಅಪರಾಧ ಕಾನೂನುಗಳು ಜಾರಿ ವಿಚಾರಕ್ಕೆ ಸಂಬಂಧಿಸಿ ಗೃಹಸಚಿವ ಡಾ.ಪರಮೇಶ್ವರ್‍ಪ್ರತಿಕ್ರಿಯೆ ನೀಡಿದ್ದು ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ ಎಂದು ತಿಳಿಸಿದರು.ಬೆಂಗಳೂರಿನಲ್ಲಿ ಮಾತನಾಡಿದ ಡಾ.ಪರಮೇಶ್ವರ್, ಇಂದಿನಿಂದ ಮೂರು ಹೊಸ ದೇಶಿ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್‍ಗಳಿಗೆ ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ.

ಸ್ವಲ್ಪ ದಿನಗಳ ನಂತರ ಇದರ ಸಕ್ಸಸ್ ಬಗ್ಗೆ ಗೊತ್ತಾಗುತ್ತೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್‍ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ಕೊಟ್ಟಿದ್ದೇವೆ.ಕಾನ್‍ಸ್ಟೇಬಲ್‍ನಿಂದ ಹಿಡಿದು ಅಧಿಕಾರಿಗಳವರೆಗೂ ಹೊಸ ಅಪರಾಧ ಕಾನೂನಿನ ಬಗ್ಗೆ ತರಬೇತಿ ನೀಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಇದು ಒಂದು ರೀತಿಯಲ್ಲಿ ಟೆಸ್ಟಿಂಗ್ ಸಮಯ. ಇಡೀ ದೇಶದಲ್ಲಿ ಜಾರಿಯಾಗಿದೆ. ಪ್ರತಿಕ್ರಿಯೆ ನೋಡಿಕೊಂಡು ಸರ್ಕಾರ ಮುಂದೆ ಕೆಲ ಪರಿಷ್ಕರಣೆ ಮಾಡಬಹುದು. ಇವತ್ತಿನಿಂದ ಯಾವೆಲ್ಲ ಪ್ರಕರಣಗಳು ದಾಖಲಾಗುತ್ತದೋ ಅವೆಲ್ಲವೂ ಈ ಹೊಸ ಕಾನೂನಿನ ಅಡಿ ದಾಖಲಾಗಲಿದೆ ಎಂದು ಹೇಳಿದರು.ಹೊಸ ಕಾನೂನುಗಳ ಪರಿಣಾಮ ಏನು ಎನ್ನುವುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಸ್ವಲ್ಪ ದಿನಗಳ ನಂತರ ಇದರ ಸಕ್ಸಸ್ ಬಗ್ಗೆ ಗೊತ್ತಾಗಲಿದೆ ಎಂದರು.

ಇದೇ ವೇಳೆ ವರ್ಷದಲ್ಲಿ ಮತ್ತೆ ಚುನಾವಣೆ ನಡೆಯಲಿದೆ ಎಂಬ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಸಚಿವ ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಬೊಮ್ಮಾಯಿ ಒಂದು ಮಾತನಾಡಿದರೆ, ಸಿ.ಟಿ.ರವಿ ಮತ್ತೊಂದು ರೀತಿ ಮಾತಾಡ್ತಾರೆ. ಅವರಲ್ಲೇ ಹೊಂದಾಣಿಕೆ ಇಲ್ಲ. ನಮಗೆ ಹೇಲ್ತಾರ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಅವರು ನಮ್ಮ ಮೇಲೆ ಗೂಬೆ ಕೂರಿಸಬೇಕು. ಹಾಗಾಗಿ ನಮ್ಮ ಬಗ್ಗೆ ಮಾತಾಡ್ತಿರ್ತಾರೆ. ನಾವು ಜನಗಳಿಗೆ ಮಾತು ಕೊಟ್ಟಿದ್ದೇವೆ. ನಾವು ಮಾಡಬೇಕಾಗಿರುವ ಅಭಿವೃದ್ಧಿ ಕಾರ್ಯಗಳನ್ನು ನಾವು ಮಾಡುತ್ತಿದ್ದೇವೆ ಎಂದರು.

ವಾಲ್ಮೀಕಿ ನಿಗಮ ಹಗರಣ ಕೇಸ್ ಸಂಬಂಧ ಮಾತನಾಡಿದ ಪರಮೇಶ್ವರ್, ವಾಲ್ಮೀಕಿ ಹಗರಣ ಕೇಸ್ ಅನ್ನು ಸಿಬಿಐ ಅಧಿಕಾರಿಗಳು ಕೂಡ ತನಿಖೆ ನಡೆಸುತ್ತಿದ್ದಾರೆ. ಹಾಗೂ ಎಸ್‍ಐಟಿ ಕೂಡ ತನಿಖೆ ಮಾಡ್ತಿದ್ದಾರೆ. ತಪ್ಪು ಮಾಡಿದವರ ರಕ್ಷಣೆಗೆ ಸರ್ಕಾರ ನಿಲ್ಲುವುದಿಲ್ಲ. ತಪ್ಪು ಮಾಡಿದವರು ಯಾರೇ ಇದ್ದರೂ ಅವರಿಗೆ ಶಿಕ್ಷೆ ಆಗುತ್ತೆ. ಅಧಿಕಾರಿಗಳು, ರಾಜಕೀಯ ವ್ಯಕ್ತಿಗಳು ಯಾರೇ ಇದ್ದರೂ ಶಿಕ್ಷೆ ಆಗುತ್ತೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು