LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹೊಸ ಇತಿಹಾಸ ಸೃಷ್ಟಿಸಿದ ಮನು ಭಾಕರ್

ಪ್ಯಾರಿಸ್: ಆಧುನಿಕ ಒಲಿಂಪಿಕ್ಸ್ ಆರಂಭವಾಗಿ ೫೬ ವರ್ಷಗಳ ನಂತರ ಭಾರತವು ವೈಯಕ್ತಿಕ ವಿಭಾಗದಲ್ಲಿ ಮೊದಲ ಬಾರಿಗೆ ಪದಕ ಜಯಿಸಿತ್ತು. ಆಗ ೧೯೫೨ರ ಹೆಲ್ಸಿಂಕಿ ಒಲಿಂಪಿಕ್ಸ್‌ನಲ್ಲಿ ಕುಸ್ತಿಪಟು ಕಶಾಬಾ ಜಾಧವ್ ಅವರು ಕಂಚಿನ ಪದಕ ಜಯಿಸಿದ್ದರು. ಅದಾದ ನಂತರ ವೈಯಕ್ತಿಕ ವಿಭಾಗದಲ್ಲಿ ಮತ್ತೊಂದು ಪದಕ ಜಯಿಸಲು ೪೪ ವರ್ಷಗಳವರೆಗೆ ಕಾಯಬೇಕಾಯಿತು. ಟೆನಿಸ್‌ನಲ್ಲಿ ಲಿಯಾಂಡರ್ ಪೇಸ್ ೧೯೯೬ರ ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದುಕೊಟ್ಟರು.

ಆದರೆ ಭಾರತದ ಮಹಿಳೆಯೊಬ್ಬರು ಒಲಿಂಪಿಕ್ ಕೂಟದಲ್ಲಿ ಪದಕ ಜಯಿಸುವುದನ್ನು ನೋಡಲು ೨೦೦೦ನೇ ಇಸವಿಯವರೆಗೂ ಕಾಯಬೇಕಾಯಿತು. ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಕರ್ಣಂ ಮಲ್ಲೇಶ್ವರಿ ಅವರು ವೇಟ್‌ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದರು. ಇದೆಲ್ಲದರಾಚೆ ಭಾರತದ ಸ್ವಾತಂತ್ರ್ಯ ನಂತರದ ಒಲಿಂಪಿಕ್ ಕೂಟಗಳಲ್ಲಿ ಮಹಿಳೆ ಅಥವಾ ಪುರುಷರ ವೈಯಕ್ತಿಕ ವಿಭಾಗದಲ್ಲಿ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿದ ಭಾರತೀಯರು ಯಾರೂ ಇರಲಿಲ್ಲ. ಇದೀಗ ಪ್ಯಾರಿಸ್‌ನಲ್ಲಿ ಶೂಟರ್ ಮನು ಭಾಕರ್ ಈ ಸಾಧನೆ ಮಾಡಿದ್ದಾರೆ.

ಪ್ಯಾರಿಸ್‌ನಿಂದ ೨೮೦ ಕಿ.ಮೀ ದೂರದಲ್ಲಿರುವ ಶತೋಹು ಶೂಟಿಂಗ್ ರೇಂಜ್‌ನಲ್ಲಿ ನಡೆದ ೧೦ ಮೀ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಮನು ಅವರು ಸರಬ್ಜೋತ್ ಸಿಂಗ್ ಜೊತೆಗೂಡಿ ದಕ್ಷಿಣ ಕೊರಿಯಾ ತಂಡವನ್ನು ಮಣಿಸಿದರು. ಇದರೊಂದಿಗೆ ಕಂಚಿನ ಪದಕಕ್ಕೆ ಕೊರಳೊಡ್ಡಿದರು.
ಭಾನುವಾರ ಇದೇ ರೇಂಜ್‌ನಲ್ಲಿ ಅವರು ಮಹಿಳೆಯರ ವಿಭಾಗದ ೧೦ ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗಳಿಸಿದ್ದರು. ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ ಪದಕ ಗದ್ದ ಭಾರತದ ಮೊಟ್ಟಮೊದಲ ಮಹಿಳೆಯಾಗಿದ್ದರು. ಇದೀಗ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಮೊದಲ ಭಾರತೀಯ ಕ್ರೀಡಾಪಟುವಾದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು