LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹೊಸ ವರ್ಷಕ್ಕೆ ಕಟ್ಟೆಚ್ಚರ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತೆ ವಹಿಸಲು ಪೊಲೀಸರಿಗೆ ಆಯುಕ್ತರ ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ದಿನವಾದ 31ರ ರಾತ್ರಿ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ನಗರ ಪೊಲೀಸ್ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೂಚಿಸಿದ್ದಾರೆ.18ನೇ ಪೊಲೀಸ್ ಆಯುಕ್ತರ ಮಾಸಿಕ ಪೆರೇಡ್‍ನಲ್ಲಿ ಭಾಗವಹಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ದಯಾನಂದ್, ಮುಂಬರುವ ಹೊಸ ವರ್ಷದ ದಿನಾಚರಣೆಗೆ ಸಂಬಂಧಪಟ್ಟ ಹಾಗೆ ನಗರದ ಎಲ್ಲಾ ಪೊಲೀಸ್ ಇನ್ಸ್‍ಪೆಕ್ಟರ್, ಎಸಿಪಿ ಮತ್ತು ಡಿಸಿಪಿ ಸೂಚನೆ ನೀಡಿದರು.

ಹೊಸ ವರ್ಷದ ಪ್ರಯುಕ್ತ ರಸ್ತೆಗಳಲ್ಲಿ ಹಾಗೂ ಹೋಟೆಲ್‍ಗಳಲ್ಲಿ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಏರ್ಪಡಿಸುವುದರಿಂದ ಮಹಿಳೆಯರ ಸುರಕ್ಷಿತೆಗೆ ಆದ್ಯತೆ ನೀಡಬೇಕೆಂದು ಹೇಳಿದ್ದಾರೆ.ವಿಶೇಷವಾಗಿ ಡ್ರಗ್ಸ್ ಬಳಸುವುದು, ಮಹಿಳೆಯರನ್ನು ಚುಡಾಯಿಸುವುದು, ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುವುದು ಹಾಗೂ ಇನ್ನೂ ಇತರೆ ಸಮಾಜಘಾತಕ ಕೆಲಸಗಳನ್ನು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿದ್ದಾರೆ.

ಕಾರ್ಯಕ್ರಮ ನಿಯೋಜಿಸುವ ಹೋಟೆಲ್ ಮಾಲೀಕರುಗಳನ್ನು ಅಥವಾ ಮ್ಯಾನೇಜರ್ ಗಳನ್ನು ಕರೆದು ಸಭೆ ನಡೆಸಬೇಕೆಂದು ತಿಳಿಸಿದ್ದಾರಲ್ಲದೆ ಮತ್ತು ವಿಶೇಷವಾಗಿ ಸಿಸಿ ಕ್ಯಾಮೆರಾ ಗಳನ್ನು ಪರಿಶೀಲಿಸಬೇಕೆಂದು ತಿಳಿಸಿದರು.ಅಂದಾಜು 5000 ಪೊಲೀಸರನ್ನು ವಿಶೇಷ ಕಾರ್ಯಕ್ರಮಕ್ಕೆ ಅಂದು ರಾತ್ರಿ ನಿಯೋಜಿಸಲಾಗುವುದು. ಸಂಚಾರಿ ಪೊಲೀಸರಿಗೆ ವೀಲಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬೆಂಗಳೂರು ನಗರದ್ಯಂತ ಅಂದು ವಿಶೇಷವಾಗಿ ಕೆಲವು ಕಡೆ ನಾಕ ಬಂದಿಯನ್ನು ಸಹ ಏರ್ಪಡಿಸಲಾಗಿರುತ್ತದೆ ಎಂದಿದ್ದಾರೆ.

ಕವಾಯಿತಿನಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರವನ್ನು ಸಹ ನೀಡಿ ಅಭಿನಂದಿಸಿದರು.
ಕವಾಯಿತಿನ ನೇತೃತ್ವ ವಹಿಸಿದ್ದ ಈಶಾನ್ಯ ವಿಭಾಗದ ಡಿಸಿಪಿ ಸಜಿತ್ ರವರನ್ನು ಮತ್ತು ಅವರ ತಂಡವನ್ನು ಉತ್ತಮ ಕವಾಯಿತು ಪ್ರದರ್ಶನ ನೀಡಿದ್ದಕ್ಕಾಗಿ ಅಭಿನಂದಿಸಿದರು.ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರು ಸೇರಿದಂತೆ ಡಿಸಿಪಿಗಳು ಹಾಗೂ ಎಲ್ಲ ಎಸಿಪಿ ವರ್ಗದವರು ಉಪಸ್ಥಿತರಿದ್ದರು.

 

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು