LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಹೊಸ ವರ್ಷಕ್ಕೆ ಜನರ ಹೊಳೆ: ಮೆಟ್ರೋ ಬರೋಬ್ಬರಿ 2 ಕೋಟಿ ರೂ ಆದಾಯ

ಬೆಂಗಳೂರು: 2024ಕ್ಕೆ ಗುಡ್‌ಬೈ ಹೇಳಿ, ಹೊಸವರ್ಷವನ್ನು ಗ್ರ್ಯಾಂಡ್‌ ಆಗಿ ಬರಮಾಡಿಕೊಳ್ಳಲಾಗಿದೆ. ಎಂಜಿ ರೋಡ್, ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದ ವಿವಿಧೆಡೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಹಿನ್ನೆಲೆ ನಮ್ಮ ಮೆಟ್ರೋ ರೈಲು ಸೇವೆಯನ್ನು ತಡರಾತ್ರಿ ಎರಡು ಗಂಟೆವರೆಗೂ ವಿಸ್ತರಿಸಲಾಗಿತ್ತು. ಪರಿಣಾಮ ನಿನ್ನೆ ಒಂದೇ ದಿನ ನಮ್ಮ ಮೆಟ್ರೋಗೆ 2 ಕೋಟಿ 7 ಲಕ್ಷದ 52 ಸಾವಿರ ರೂ. ಆದಾಯವಾಗಿದೆ.

ಹೊಸ ವರ್ಷ ಹಿನ್ನೆಲೆಯಲ್ಲಿ ನಿನ್ನೆ ಬೆಳಗ್ಗೆ 5ರಿಂದ ಮಧ್ಯರಾತ್ರಿ 2.45ರವರೆಗೆ ಮೆಟ್ರೋ ರೈಲುಗಳು ಸಂಚಾರ ಮಾಡಿವೆ. ನಿನ್ನೆ ಒಂದೇ ದಿನ ಪಿಂಕ್‌ ಲೈನ್​​ನಲ್ಲಿ ಒಟ್ಟು 4,00,583, ಗ್ರೀನ್ ಲೈನ್​ನಲ್ಲಿ  2,90,530, ಪಿಂಕ್‌ ಮತ್ತು ಗ್ರೀನ್ ಮಾರ್ಗದಿಂದ ಒಟ್ಟು 8,59,467, ಪೇಪರ್ ಟಿಕೆಟ್ ಮೂಲಕ ಮೆಟ್ರೋಟದಲ್ಲಿ 5,423 ಮತ್ತು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ 1,62,931 ಜನರು ಪ್ರಯಾಣ ಮಾಡಿದ್ದಾರೆ. ಆ ಮೂಲಕ ನಮ್ಮ ಮೆಟ್ರೋಗೆ 2 ಕೋಟಿ 7 ಲಕ್ಷದ 52 ಸಾವಿರ ರೂ. ಆದಾಯ ಹರಿದುಬಂದಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್) 2025ರ ಹೊಸ ವರ್ಷದ ಮುನ್ನಾದಿನದಂದು ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಣೆ ಮಾಡಿತ್ತು. ಕೊನೆಯ ರೈಲು ಜನವರಿ 1, 2025 ರಂದು ಮುಂಜಾನೆ 02:00 ಗಂಟೆಗೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ, ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್)ನಿಂದ ಕೊನೆಯ ರೈಲು ಎಲ್ಲಾ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2:40 ಗಂಟೆಗೆ ಹೊರಡುತ್ತದೆ ಎಂದು ತಿಳಿಸಿತ್ತು.

ಎಂ.ಜಿ ರಸ್ತೆಯಲ್ಲಿ ಜನಸಂದಣಿ ಹಿನ್ನೆಲೆ ಡಿಸೆಂಬರ್ 31, 2024 ರಂದು ರಾತ್ರಿ 11:00 ಗಂಟೆಯಿಂದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಬಂದ್​ ಮಾಡಲಾಗಿತ್ತು. ಪ್ರಯಾಣಿಕರ ಬಳಕೆಗಾಗಿ ಹತ್ತಿರದ ನಿಲ್ದಾಣಗಳಾದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್‌ನಲ್ಲಿ ರೈಲುಗಳು ಸ್ಟಾಪ್​ ಮಾಡಲಾಗಿತ್ತು.

ಇನ್ನು ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಂದ ಯಾವುದೇ ನಿಲ್ದಾಣಕ್ಕೆ ರಾತ್ರಿ 11:00 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು 50 ಬೆಲೆಯ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಅನ್ನು ನೀಡಲಾಗಿತ್ತು. ಈ ಕಾಗದದ ಟಿಕೆಟ್ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ 31ನೇ ಡಿಸೆಂಬರ್ 2024ರ ಬೆಳಗ್ಗೆ 8:00 ರಿಂದ ಮುಂಗಡವಾಗಿ ಖರೀದಿಸಬಹುದಾಗಿತ್ತು. ಸಾಮಾನ್ಯ QR ಕೋಡ್ ಟಿಕೆಟ್​ಗಳು ಮತ್ತು ಕಾರ್ಡ್‌ಗಳು ಈ ನಿಲ್ದಾಣಗಳಿಂದ ಪ್ರಯಾಣಿಸಲು ಸಹ ಮಾನ್ಯ ಮಾಡಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು