LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರಿನಲ್ಲಿ ಹೆಚ್ಚಿನ ಬಸ್‌ ಮತ್ತು ಮೆಟ್ರೋ ರೈಲು ಸೇವೆ ವಿಸ್ತರಣೆ

ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ ಶುರುವಾಗಿದೆ. ಎಂಜಿ ರೋಡ್, ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದ ವಿವಿಧೆಡೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ನಮ್ಮ ಮೆಟ್ರೋ ರೈಲು ಸೇವೆ ತಡರಾತ್ರಿ ಎರಡು ಗಂಟೆವರೆಗೂ ವಿಸ್ತರಿಸಲಾಗಿದ್ದು, ಇದೀಗ ಬಿಎಂಟಿಸಿ ಕೂಡ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ವಿವಿಧ ಭಾಗಗಳಿಂದ ರಾತ್ರಿ ಎರಡು ಗಂಟೆವರೆಗೆ ಹೆಚ್ಚುವರಿ ಬಸ್ಸುಗಳು ಸಂಚಾರ ಮಾಡಲಿವೆ.

ಎಂಜಿ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಬಸ್​ ಸೌಲಭ್ಯ ಕಲ್ಪಿಸಲಾಗುತ್ತಿದೆ. 13 ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿರುವುದಾಗಿ ಬಿಎಂಟಿಸಿ ತಿಳಿಸಿದೆ. ರಾತ್ರಿ 11 ಗಂಟೆಯಿಂದ ರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಸ್ ಸೇವೆ ದೊರೆಯಲಿದೆ.

ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆ, ಎಲೆಕ್ಟ್ರಾನಿಕ್​ ಸಿಟಿ, ಜಿಗಣಿ, ಸರ್ಜಾಪುರ, ಕೆಂಗೇರಿ, ಜನಪ್ರಿಯ ಟೌನ್​ಶಿಪ್, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್​.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಬನಶಂಕರಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಹೆಬ್ಬಾಳ, ಸೆಂಟ್ರಲ್ ಸಿಲ್ಕ್ ಬೋರ್ಡ್​ನಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಈ ಮಧ್ಯೆ, ನಮ್ಮ ಮೆಟ್ರೋ ಕೂಡ ಹೊಸ ವರ್ಷಾಚರಣೆ ಸಂದರ್ಭ ಪ್ರಯಾಣಿಕರ ನಿರ್ವಹಣೆಗೆ ಒಂದಷ್ಟು ತಯಾರಿ ಮಾಡಿಕೊಂಡಿದೆ. ಸಂಭ್ರಮದಲ್ಲಿ ಕುಡಿದು ಹುಚ್ಚಾಟ ಆಡುವವರ ಬಗ್ಗೆಯೂ ಹದ್ದಿನ ಕಣ್ಣಿಡುವ ಮೂಲಕ ಅಂಥವರ ಆಟಾಟೋಪಕ್ಕೆ ಬ್ರೇಕ್ ಹಾಕಲು ಬೇಕಾದ ತಯಾರಿ ಮಾಡಿಕೊಂಡಿದೆ. ಡಿಸೆಂಬರ್ – 31 ರ ರಾತ್ರಿ ಮದ್ಯಪಾನ ಮಾಡಿ ಬರುವ ಪ್ರಯಾಣಿಕರಿಗೆ ಈ ಬಾರಿ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಬಿಎಂಆರ್​ಸಿಎಲ್ ಹೇಳಿದೆ.

ಕುಡಿದು ಬಂದು ಮಹಿಳೆಯರ ಜೊತೆಗೆ ಕಿರಿಕ್ ಮಾಡಿದರೆ, 500 ರುಪಾಯಿ ದಂಡ ವಿಧಿಸುವುದಾಗಿ ಬಿಎಂಆರ್​ಸಿಎಲ್ ತಿಳಿಸಿದೆ. ಮಹಿಳೆಯರಿಗೆ ತೊಂದರೆ ನೀಡಿದರೆ ಅಂಥವರನ್ನು ಪೋಲಿಸ್ ವಶಕ್ಕೆ ನೀಡಲಾಗುವುದು ಎಂದೂ ತಿಳಿಸಿದೆ. 31 ರ ರಾತ್ರಿ ಮಹಿಳೆಯರ ಸುರಕ್ಷತೆಗಾಗಿ ಪ್ರತಿ ಮೆಟ್ರೋ ಕೋಚ್​​ನಲ್ಲೂ ಮಹಿಳಾ ಸೆಕ್ಯುರಿಟಿ ಮತ್ತು ಪ್ಯಾಟ್ರೋಲ್ ಟೀಮ್ ನೇಮಕ ಮಾಡಲಾಗಿದೆ.

ಹೊಸ ವರ್ಷದ ಸಂಭ್ರಮಾಚರಣೆಗೆ ಮೆಟ್ರೋ ರೈಲು ಸೇವೆ ವಿಸ್ತರಣೆ ಮಾಡಲಾಗಿದ್ದು, ತಡರಾತ್ರಿ 2 ಗಂಟೆಗೆ ಎಲ್ಲಾ ಟರ್ಮಿನಲ್​​ನಿಂದ ಕೊನೆಯ ರೈಲು ಹೊರಡಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು