LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಹೊಸ ವರ್ಷ ಆಚರಣೆಗೆ ಪೊಲೀಸರಿಂದ ಸುರಕ್ಷತಾ ಕ್ರಮ

ಬೆಂಗಳೂರು: ಬೆಂಗಳೂರು ನಗರದ ಜನತೆ ಹೊಸ ವರ್ಷ ಆಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲು ಪೊಲೀಸರು ಸುರಕ್ಷತಾ ಕ್ರಮವನ್ನು ಕೈಗೊಂಡಿರುತ್ತೇವೆ ಎಂದು ಪೊಲೀಸ್ ಆಯುಕ್ತ ದಯಾನಂದ್ ರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಅತಿ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯನ್ನಾಗಿ ಪರಿಗಣಿಸಿ ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ವ್ಯಾಪಕ ಬಂದೋಬಸ್ತ್ ಮಾಡಲಾಗುತ್ತದೆ ಎಂದು ತಿಳಿಸಿದರು.

ವಿಶೇಷವಾಗಿ ಕೇಂದ್ರ ವಿಭಾಗದ ಬ್ರಿಗೇಡ್ ರಸ್ತೆ ಮತ್ತು ಎಂಜಿ ರಸ್ತೆ, ಉಪೇರ ಜಂಕ್ಷನ್, ರಿಚ್ಮಂಡ್ ರಸ್ತೆ ರೆಸಿಡೆನ್ಸಿ ರಸ್ತೆ ವ್ಯಾಪ್ತಿಯಲ್ಲಿ ಐದು ಡಿಸಿಪಿ 18 ಎಸಿಪಿ 41 ಪೊಲೀಸ್ ಸೇರಿದಂತೆ ಒಟ್ಟು 252 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.ಇದಲ್ಲದೆ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಚೆಕ್ ಪೋಸ್ಟ್ಗಳನ್ನು ತೆರೆದಿದ್ದು ಮಕ್ಕಳು ಕಾಣೆಯದಲ್ಲಿ ಯಾವುದೇ ರೀತಿಯ ಕಳುವಿನ ದೂರುಗಳಿಗೆ ಅಥವಾ ಯಾವುದೇ ತುರ್ತುಸಂದರ್ಭಗಳಲ್ಲಿ ಅವಶ್ಯಕತೆ ಯನ್ನು ಪಡೆಯ ಬಹುದಾಗಿದೆ ಎಂದು ತಿಳಿಸಿದರು.

ಇದಲ್ಲದೆ ಪ್ರಮುಖ ಸ್ಥಳಗಳಲ್ಲಿ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿರುವ ಮಹಿಳಾ ಸುರಕ್ಷತಾ ಸ್ಥಳಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಡಿಸೆಂಬರ್ 31 ರಂದು ರಾತ್ರಿ 11,830 ಅಧಿಕಾರಿ ಮತ್ತು ಸಿಬ್ಬಂದಿಗಳು ವಿಶೇಷ ಕರ್ತವ್ಯದಲ್ಲಿ ಹಾಜರಾಗಿರುತ್ತಾರೆ ಎಂದು ತಿಳಿಸಿದರು. ಇದಲ್ಲದೆ ಕೆಎಸ್‍ಆರ್ಪಿ ಮತ್ತು ಸಿಎ ಆರ್ ತುಕುಡಿಗಳನ್ನು ಸಹ ನೇಮಿಸಲಾಗಿದೆ. ಎಲ್ಲಾ ಮೇಲ್ ಸೇತುವೆಗಳನ್ನು ರಾತ್ರಿ 11 ರಿಂದ ಬೆಳಿಗ್ಗೆ 4 ರ ತನಕ ಬಂದ್ ಮಾಡಲಾಗುವುದು ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು