LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹೊಸ ವಿಶ್ವ ದಾಖಲೆ ಬರೆದ ಸ್ಮೃತಿ ಮಂದಾನ: ಆಸೀಸ್ ವಿರುದ್ಧ ಹೀನಾಯ ಸೋಲು

ಭಾರತ ತಂಡ ವಾಕಾದಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯವನ್ನು ಸೋಲುವ ಮೂವರ ಸರಣಿಯಲ್ಲಿ ಕ್ಲೀನ್ ಸ್ವೀಪ್ ಆಗಿದೆ. ಆದರೆ ಜಿದ್ದಾಜಿದ್ದಿನ ಪಂದ್ಯದಲ್ಲಿ ವಿರೋಚಿತ ಹೋರಾಟ ಮಾಡಿ ಶತಕ ಬಾರಿಸಿದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಹೊಸ ವಿಶ್ವದಾಖಲೆ ಬರೆದಿದ್ದಾರೆ. 2024ರಲ್ಲಿ ಇದು ಅವರ 4ನೇ ಏಕದಿನ ಶತಕವಾಗಿದ್ದು ವೃತ್ತಿ ಜೀವನದಲ್ಲಿ 9ನೇಯದ್ದಾಗಿದೆ. ಕ್ಯಾಲೆಂಡರ್ ವರ್ಷದಲ್ಲಿ ನಾಲ್ಕು ಶತಕ ಬಾರಿಸಿದ ವಿಶ್ವದ ಮೊದಲ ಮಹಿಳಾ ಕ್ರಿಕೆಟರ್ ಎಂಬ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ.

ಭಾರತ ಮಹಿಳೆಯರ ತಂಡ ಆಸ್ಟ್ರೇಲಿಯಾ ವಿರುದ್ಧ ವಾಕಾದಲ್ಲಿ ನಡೆದ 3ನೇ ಏಕದಿನ ಪಂದ್ಯವನ್ನಾದರೂ ಗೆದ್ದು ವೈಟ್ ವಾಶ್ ನಿಂದ ತಪ್ಪಿಸಿಕೊಳ್ಳಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ಆಸ್ಟ್ರೇಲಿಯಾದ ಸರ್ವಾಂಗೀಣ ಆಟದ ಎದುರು ನಿರುತ್ತರವಾದ ಭಾರತ ತಂಡ 83 ರನ್ ಗಳಿಂದ ಸೋಲೊಪ್ಪಿಕೊಂಡಿದೆ. ಆದರೆ ಇಡೀ ಪಂದ್ಯದಲ್ಲಿ ಏಕಾಂಗಿ ಹೋರಾಟ ನಡೆಸಿದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಶತಕ ಗಳಿಸುವುದರೊಂದಿಗೆ ಹೊಸ ಇತಿಹಾಸ ಬರೆದರು.
ಮಹಿಳಾ ಕ್ರಿಕೆಟ್ ನ ಏಕದಿನ ಪಂದ್ಯಗಳಲ್ಲಿ ಕ್ಯಾಲೆಂಡರ್ ವರ್ಷವೊಂದರಲ್ಲಿ ನಾಲ್ಕು ಶತಕ ಬಾರಿಸಿದವರು ಇಲ್ಲ.

ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಎಂಬ ಗೌರವಕ್ಕೆ ಸ್ಮೃತಿ ಪಾತ್ರರಾದರು. ಈ ಹಿಂದೆ 7 ಆಟಗಾರ್ತಿಯರು ಕ್ಯಾಲೆಂಡರ್ ವರ್ಷದಲ್ಲಿ 3 ಶತಕಗಳನ್ನು ಹೊಡೆದಿದ್ದಾರೆ. ಆಧರೆ ನಾಲ್ಕು ಶತಕ ಗಳಿಸಲು ಮಾತ್ರ ಯಾರಿಂದಲೂ ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಸ್ಮೃತಿ ಮಂದಾನ ಅವರ ಈ ಸಾಧನೆ ಬಹಳ ಮಹತ್ವದ್ದಾಗಿದೆ.

ಇದು ಅವರ ಕ್ರಿಕೆಟ್ ವೃತ್ತಿಜೀವನದಲ್ಲಿ 9ನೇ ಏಕದಿನ ಶತಕವಾಗಿದೆ. ವಿಶ್ವ ಕ್ರಿಕೆಟ್ ನಲ್ಲಿ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ 15 ಶತಕಗಳೊಂದಿಗೆ ಮೊದಲನೇ ಸ್ಥಾನದಲ್ಲಿದ್ದಾರೆ. ಆನಂತರದ ಸ್ಥಾನಗಳಲ್ಲಿ ನ್ಯೂಜಿಲೆಂಡ್ ನ ಬೇಟ್ಸ್(13), ಇಂಗ್ಲೆಂಡಿನ ಬಿಮೌಂಟ್ 3ನೇ ಸ್ಥಾನಗಳಲ್ಲಿ ಇದ್ದಾರೆ. ಸ್ಮೃತಿ ಮಂದಾನ ಅವರು ತಲಾ 9 ಶತಕ ಗಳಿಸಿರುವ ಇಂಗ್ಲೆಂಡ್ ನ ನತಾಲಿ ರುತ್ ಸಿವಿರ್ ಬ್ರಂಟ್, ಎಡ್ವರ್ಡ್ಸ್, ಶ್ರೀಲಂಕಾದ ಚಾಮರಿ ಅಟಪಟ್ಟು ಜೊತೆಗೆ ಜಂಟಿಯಾಗಿ 4ನೇ ಸ್ಥಾನದಲ್ಲಿ ಇದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು