LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹೊಸ ಸೀಸನ್ ನೊಂದಿಗೆ ಇನ್ನಷ್ಟು ಹೊಸತನದಲ್ಲಿ ಶುರುವಾಗ್ತಿದೆ "ಬೊಂಬಾಟ್ ಭೋಜನ ಸೀಸನ್ 5"

ಕನ್ನಡ ಕಿರುತೆರೆಯಲ್ಲಿ ಅಡುಗೆ ಶೋ ಅಂದ್ರೆ ಥಟ್ಟನೆ ನೆನಪಾಗೋದೇ ಸ್ಟಾರ್ ಸುವರ್ಣ ವಾಹಿನಿಯ 'ಬೊಂಬಾಟ್ ಭೋಜನ'. ಸಾವಿರಕ್ಕೂ ಹೆಚ್ಚು ಸಂಚಿಕೆಗಳನ್ನು ದಾಟಿ ಹೊಸ ಮೈಲಿಗಲ್ಲು ಸೃಷ್ಟಿಸಿರುವ ಈ ಶೋ ಈಗಾಗಲೇ 4 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇದೀಗ ಇನ್ನಷ್ಟು ಹೊಸತನವನ್ನೊಳಗೊಂಡು 5ನೇ ಆವೃತ್ತಿಯೊಂದಿಗೆ ವೀಕ್ಷಕರ ಮುಂದೆ ಬರಲು ಸಜ್ಜಾಗಿದೆ.

.ಈ ಬಾರಿ 'ಬೊಂಬಾಟ್ ಭೋಜನ ಸೀಸನ್ 5' ರ ಪ್ರಮುಖ ವಿಶೇಷತೆಯಂದ್ರೆ "ಬೊಂಬಾಟ್ ಭೋಜನ ಔಟಿ Wheeಟs". ಇನ್ಮುಂದೆ ಬೊಂಬಾಟ್ ಭೋಜನದ ಗಾಡಿ ರಾಜ್ಯಾದ್ಯಂತ ಸಂಚರಿಸಿ ನಿಮ್ ಊರಿಗೆ, ನಿಮ್ ಕೇರಿಗೆ, ನಿಮ್ ಗಲ್ಲಿಗಳಿಗೆ ಬಂದು ರುಚಿ ರುಚಿಯಾದ ಅಡುಗೆಯನ್ನು ತಯಾರಿಸಿ ಆ ರುಚಿಯನ್ನು ಅಲ್ಲಿನ ಜನರಿಗೆ ತಿಳಿಸಿಕೊಡಲಿದೆ. ಇದು ಈ ಸೀಸನ್ ನ ಮುಖ್ಯ ಆಕರ್ಷಣೆ.

ಜೊತೆಗೆ ಈ ಸೀಸನ್ ಅಲ್ಲಿ ಏನೆಲ್ಲಾ ಇರುತ್ತೆ ಎಂದು ಹೇಳೋದಾದ್ರೆ..ಸ್ಪೆಷಲ್ ಊಟ : ಸಿಹಿ ಕಹಿ ಚಂದ್ರು ಅವರು ರುಚಿ-ರುಚಿಯಾದ ಅಡುಗೆಯನ್ನು ತಿಳಿಸುತ್ತಾರೆ. ಹೋಟೆಲ್ ಊಟ : ಕರ್ನಾಟಕದಾದ್ಯಂತ ಚಲಿಸಿ, ಜನಪ್ರಿಯತೆಗಳಿಸಿರುವ ವರ್ಷಗಳ ಇತಿಹಾಸವಿರುವ ಹೋಟೆಲ್ ಗಳಿಗೆ ಧಾವಿಸಿ ಅಲ್ಲಿನ ಜನಪ್ರಿಯ ತಿನಿಸುಗಳನ್ನು ಸವಿದು ಜನರಿಗೆ ತಿಳಿಸುವುದು. ಊಟ ರೆಡಿ : ಜನಸಾಮಾನ್ಯರು / ಸೆಲೆಬ್ರಿಟಿಸ್ ಗಳು ಬಂದು ವಿವಿಧ ರೀತಿಯ ಕೈರುಚಿಯನ್ನು ತಿಳಿಸುವುದು. ಆರೋಗ್ಯ ಅಡುಗೆ : ಡಾ|| ಗೌರಿ ಸುಬ್ರಮಣ್ಯ ರವರು ಜನರಿಗೆ ಉಪಯುಕ್ತವಾದ ಮನೆಮದ್ದನ್ನು ಇಲ್ಲಿ ತಿಳಿಸುತ್ತಾರೆ.

ಸವಿಯೂಟ : ಬೇರೆ ಬೇರೆ ಜಿಲ್ಲೆಗಳಲ್ಲಿರುವ ಲೇಡೀಸ್ ಕ್ಲಬ್ ಗಳಿಗೆ ಹೋಗಿ ಅಲ್ಲಿನ ಜನರೊಂದಿಗೆ ಬೆರೆತು, ಅಡುಗೆ ಮಾಂತ್ರಿಕ ಸಿಹಿ ಕಹಿ ಚಂದ್ರು ರವರು ವಿಭಿನ್ನ ಅಡುಗೆ ಡಿಶ್ ಗಳನ್ನು ತಯಾರಿಸುತ್ತಾರೆ.ಇದೆಲ್ಲದರ ಜೊತೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇದೇ ಮೊದಲ ಬಾರಿಗೆ ಪ್ರತೀ ಶನಿವಾರ ಮಾಂಸ ಪ್ರಿಯರಿಗಾಗಿ ಸಿದ್ಧವಾಗ್ತಿದೆ 'ಬೊಂಬಾಟ್ ಬಾಡೂಟ'.

ಅಡುಗೆ ಮಾಂತ್ರಿಕ ಆದರ್ಶ್ ತಟಪತಿ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಇದರಲ್ಲಿ ಖಾರ ಮಸಾಲ, ಮಿರ್ಚಿ ಮಸಾಲ ಹಾಗು ನಾಟಿ ಮಸಾಲ ಎಂಬ ವಿಭಾಗಗಳು ಹೊಂದಿರುತ್ತದೆ.ನಳ ಮಹಾರಾಜ ಸಿಹಿ ಕಹಿ ಚಂದ್ರು ರವರ ನೇತೃತ್ವದಲ್ಲಿ ಶುರುವಾಗುತ್ತಿರುವ 'ಬೊಂಬಾಟ್ ಭೋಜನ ಸೀಸನ್ 5' ಇದೇ ಸೋಮವಾರದಿಂದ ಮಧ್ಯಾಹ್ನ 12 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ..

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು