LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹ್ಯಾಟ್ರಿಕ್ ಜಯ: ಸೆಮಿಫೈನಲ್‌ಗೆ ಭಾರತ

ಭಾರತ ತಂಡ ಮಹಿಳಾ ಏಷ್ಯಾಕಪ್ ಟಿ೨೦ ಟೂರ್ನಿಯಲ್ಲಿ ನೇಪಾಳ ವಿರುದ್ಧ ೮೨ ರನ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೆಮಿಫೈನಲ್ ಹಂತಕ್ಕೇರಿದೆ.

ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಆರಂಭಿಕ ಆಟಗಾರ್ತಿಯಾದ ದಯಾಳನ್ ಹೇಮಲತಾ(೪೭) ಮತ್ತು ಶಫಾಲಿ ವರ್ಮಾ ಅವರ ಬಿರುಸಿನ ಬ್ಯಾಟಿಂಗ್ ನೆರವಿನಿಂದ ನಿಗದಿತ ೨೦ ಓವರ್‌ಗಳಲ್ಲಿ ೩ ವಿಕೆಟ್‌ಗೆ ೧೭೮ ರನ್ ಪೇರಿಸಿತು.

ಗುರಿ ಬೆನ್ನಟ್ಟಿದ ನೇಪಾಳ ಆರಂಭದಲ್ಲೇ ಸತತವಾಗಿ ವಿಕೆಟ್ ಕಳೆದುಕೊಂಡು ಅಂತಿಮವಾಗಿ ೯ ವಿಕೆಟ್‌ಗೆ ೯೬ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಯುಎಇ ವಿರುದ್ಧ ಆರು ವಿಕೆಟ್ ಗೆಲುವಿನೊಂದಿಗೆ ಐತಿಹಾಸಿಕ ಸಾಧನೆ ಮಾಡಿದ್ದ ನೇಪಾಳ ತಂಡ ಇಂದಿನ ಪಂದ್ಯದಲ್ಲಿ ಭಾರತ ವಿರುದ್ಧ ದೊಡ್ಡ ಅಂತರದ ಗೆಲುವು ಸಾಧಿಸುತ್ತಿದ್ದರೆ ಪಾಕಿಸ್ತಾನವನ್ನು ಹಿಂದಿಕ್ಕಿ ಸೆಮಿಫೈನಲ್ ಹಂತಕ್ಕೇರುವ ಅವಕಾಶವಿತ್ತು. ಆದರೆ ಸೋಲು ಕಂಡು ಈ ಅವಕಾಶದಿಂದ ವಂಚಿತವಾಯಿತು. ಭಾರತ ಪರ ಬೌಲಿಂಗ್‌ನಲ್ಲಿ ಅರುಂಧತಿ ರೆಡ್ಡಿ(೨), ದೀಪ್ತಿ ಶರ್ಮಾ(೩), ರಾಧಾ ಯಾದವ್(೨) ವಿಕೆಟ್ ಕಿತ್ತು ಮಿಂಚಿದರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು