LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

೨೫ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ

ದೊಡ್ಡಬಳ್ಳಾಪುರ: ಕಾರ್ಗಿಲ್ ಯುದ್ಧ ಭಾರತೀಯ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ . ಭಾರತೀಯರಲ್ಲಿ ದೇಶ ಪ್ರೇಮವನ್ನು ಮತ್ತು ಭಕ್ತಿಯನ್ನು ಅರ್ಪಿಸುವ ದಿನವನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಎನ್.ಸಿ.ಸಿ ನಿವೃತ್ತ ಅಧಿಕಾರಿ ಮೇಜರ್ ಎಸ್.ಮಹಾಬಲೇಶ್ವರ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಎನ್.ಸಿ.ಸಿ ಘಟಕದಿಂದ ನಡೆದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತೀಯರು ಅಪರೇಶನ್ ವಿಜಯ್ ಮೂಲಕ ಕಾರ್ಗಿಲ್-ದ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಸೈನಿಕರ ಗೌರವಾರ್ಥವಾಗಿ ಜುಲೈ ೨೬ ರಂದು ಕಾರ್ಗಿಲ್ ವಿಜಯ್ ದಿವಸ್ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ.

೧೯೯೯ ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು ಎರಡು ತಿಂಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಲೇಹ್ ಹೆದ್ದಾರಿಯವರೆಗೆ ನುಗ್ಗಿ ಬಂದಿದ್ದ ಪಾಕ್ ಸೇನೆಯನ್ನು ಭಾರತೀಯ ಸೇನೆ ಕೆಚ್ಚೆದೆಯಿಂದ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಸೇರಿದಂತೆ ಸುಮಾರು ೫೨೭ ಭಾರತೀಯ ಯೋಧರು ಹುತಾತ್ಮರಾದರು ಎಂದರು.

ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯ ಅಂಗವಾಗಿ ಎನ್‌ಸಿಸಿವಿದ್ಯಾರ್ಥಿಗಳು ಕಾರ್ಗಿಲ್ ಸೈನಿಕರನ್ನುಸ್ಮರಿಸಿ ಭಾರತದ ಭೂಪಟ ರಚನೆಮಾಡಿ ದೀಪ ಬೆಳಗಿಸಿ ಗೌರವನಮನವನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶ್ರೀಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಆನಂದಮೂರ್ತಿ, ಉಪಪ್ರಾಂಶು ಪಾಲ ಎಸ್.ಎಸ್.ಶಿವಶಂಕರ್, ಎನ್.ಸಿ.ಸಿ ಅಧಿಕಾರಿಗಳಾದ ಎನ್.ಶ್ರೀನಿವಾಸ, ಪ್ರವೀಣ್, ಶ್ರೀಕಾಂತ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು