LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Hassan

೫೦ ಲಕ್ಷ ರೂ. ಪರಿಹಾರಕ್ಕೆ ಒತ್ತಾಯ

ಹಾಸನ: ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಟ್ರಕ್ ಅಪಘಾತದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿದ್ದಾರೆ. ಈ ವೇಳೆ ಪರಿಹಾರದ ವಿಚಾರವಾಗಿ ಜನರು ಸಚಿವರಿಗೆ ತರಾಟೆ ತೆಗೆದುಕೊಂಡಿದ್ದಾರೆ.
ವಿಮಾನ ದುರಂತದಲ್ಲಿ ಸತ್ತರೆ ೧ ಕೋಟಿ ರೂ. ಪರಿಹಾರ ಕೊಡ್ತೀರಿ. ಸ್ಟೇಡಿಯಂನಲ್ಲಿ ಸತ್ತರೆ ೫೦ ಲಕ್ಷ ರೂ. ಕೊಡ್ತೀರಿ. ಬಡವರ ಮಕ್ಕಳು ಸತ್ತರೆ ಬೆಲೆ ಇಲ್ವಾ? ಸರ್ಕಾರ ೫ ಲಕ್ಷ ರೂ. ಪರಿಹಾರ ಘೋಷಿಸಿದೆ. ಬಡವರ ಮಕ್ಕಳು ಸತ್ತಿದ್ದಾರೆ ಹೆಚ್ಚಿನ ಪರಿಹಾರ ಕೊಡಬೇಕು. ೨೫ ಲಕ್ಷ ರೂ. ಕೊಡುವಂತೆ ಸಚಿವರಿಗೆ ಜನ ಆಗ್ರಹಿಸಿದ್ದಾರೆ.
ಕೇರಳದಲ್ಲಿ ಸತ್ತರೆ ಕರ್ನಾಟಕದಿಂದ ಪರಿಹಾರ ಕೊಡ್ತೀರಿ. ನಮ್ಮ ರೈತರ ಮಕ್ಕಳು ಸತ್ರೆ ಬಿಡಿಗಾಸು ಕೊಡ್ತೀರಿ. ೫ ಲಕ್ಷ ಪರಿಹಾರ ಕೊಡೋದಾದರೆ ನೀವೇ ಇಟ್ಟುಕೊಳ್ಳಿ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST