LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

೭.೬೯ ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ

ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. ೭.೬೯ ಕೋಟಿ ಅಂದಾಜು ಮೌಲ್ಯದ ಒಟ್ಟು ೫ ಎಕರೆ ೦.೦೭.೨೦ ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.

ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗುಂಡುತೋಪು, ಸ್ಮಶಾನ, ಸರ್ಕಾರಿ ಓಣಿ, ಬಿಳಿಕೆರೆ ಜಾಜಿಮುಳಗಡೆ, ಖರಾಬು, ಗೋಮಾಳ ಮತ್ತು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಬೆAಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ದೇವಗೆರೆ ಗ್ರಾಮದ ಸ.ನಂ ೭೧ ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೨೨ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೦.೫೦ ಲಕ್ಷಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ದೊಡ್ಡೇರಿ ಗ್ರಾಮದ ಸ.ನಂ ೬೨ ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೦೫ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೦.೧೯ ಲಕ್ಷಗಳಾಗಿರುತ್ತದೆ.

ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಶಿವನಪುರ ಗ್ರಾಮದ ಸ.ನಂ ೨/೪ಎ ರ ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೦೨.೦೮ ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. ೦.೨೦ ಲಕ್ಷಗಳಾಗಿರುತ್ತದೆ. ದಾಸನಪುರ ಹೋಬಳಿಯ ಶಿವನಪುರ ಗ್ರಾಮದ ಸ.ನಂ ೨/೪ಬಿ೧ ರ ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೦೧೨ ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. ೦.೧೦ ಲಕ್ಷಗಳಾಗಿರುತ್ತದೆ. ದಾಸನಪುರ ಹೋಬಳಿಯ ಹೊಸಹಳ್ಳಿಪಾಳ್ಯ ಗ್ರಾಮದ ಸ.ನಂ ೪೦ ರ ಬಿಳಿಕೆರೆ ಜಾಜಿಮುಳಗಡೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೨ ಎಕರೆಯಾಗಿದ್ದು, ಅಂದಾಜು ಮೌಲ್ಯ ರೂ. ೨ ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ತೊರೆನಾಗಸಂದ್ರ ಗ್ರಾಮದ ಸ.ನಂ ೩೪ ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೨೭ ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. ೧.೫೦ ಕೋಟಿಗಳಾಗಿರುತ್ತದೆ.

ಯಲಹಂಕ ತಾಲ್ಲೂಕಿನ ಹೆಸರಘಟ್ಟ-೧ ಹೋಬಳಿಯ ಕೊಡಿಗೆತಿರುಮಳಾಪುರ ಗ್ರಾಮದ ಸ.ನಂ ೧೪ ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೩೧ ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. ೧.೨೦ ಕೋಟಿಗಳಾಗಿರುತ್ತದೆ. ಹೆಸರಘಟ್ಟ-೨ ಹೋಬಳಿಯ ಕಾಕೋಳು ಗ್ರಾಮದ ಸ.ನಂ ೪೪ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೧ ಎಕರೆಯಾಗಿದ್ದು, ಅಂದಾಜು ಮೌಲ್ಯ ರೂ. ೨ ಕೋಟಿಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಡಾ.ಜಗದೀಶ್ ಕೆ.ನಾಯಕ್ , ಜಿಲ್ಲಾಧಿಕಾರಿಗಳ ಕಛೇರಿಯ ಕಚೇರಿಯ ಸಹಾಯಕರು, ವಿವಿಧ ತಾಲ್ಲೂಕಿನ ತಹಶೀಲ್ದಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು