LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

1.08 ಕೋಟಿ ರೂ ವೆಚ್ಚದ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಂಕು ಸ್ಥಾಪನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಭಾನುವಾರ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ 108.50 ಲಕ್ಷ ರೂಗಳ ರಸ್ತೆ, ಚರಂಡಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಶಾಸಕ ಧೀರಜ್ ಮುನಿರಾಜು ಅವರು ಮಾತನಾಡಿ ಒಳಚರಂಡಿ ವ್ಯವಸ್ಥೆ ಕಲ್ಪಿಸಿಕೊಡಲು, ನಗರೋತ್ಥಾನ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿಕೊಡಲು, ರಸ್ತೆ ಅಭಿವೃದ್ಧಿಗೆ ಹಾಗೂ ರಸ್ತೆ ಅಗಲೀಕರಣಕ್ಕೆ ಅನುದಾನ ಕಲ್ಪಿಸಿಕೊಡಲು ಮನವಿ ಮಾಡಿದರು.ಸಚಿವರು ಮನವಿಗೆ ಸ್ಪಂದಿಸಿ ನಗರೋತ್ಥಾನ ಕಾಮಗಾರಿಗಳು ಒಂದು ತಿಂಗಳ ಒಳಗಾಗಿ ಶುರು ಆಗಬೇಕು. ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಟೌನ್ ಶಿಪ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಈ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಜಿ.ಪಂ. ಸಿಇಒ ಡಾ. ಕೆ ಎನ್ ಅನುರಾಧ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಪೌರಾಯುಕ್ತ ಕಾರ್ತಿಕ್ ಈಶ್ವರ್, ತಾಪಂ ಇಒ ಮುನಿರಾಜು, ನಗರಸಭಾ ಸದಸ್ಯರು, ನಗರಸಭೆ ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು