ಭುವನೇಶ್ವರ: ಒಡಿಶಾ ರಾಜ್ಯದ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 10 ಜನ ದುರ್ಮರಣಕ್ಕೀಡಾಗಿ ರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಈ ಘಟನೆ ಕಟಕ್ ನಗರದಲ್ಲಿರುವ ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು ವಿಭಾಗದಲ್ಲಿ ಸಂಭವಿಸಿದೆ. ಸೋಮವಾರ ಮುಂಜಾನೆ ಸುಮಾರು 2.59 ಗಂಟೆ ವೇಳೆಗೆ ಐಸಿಯುವಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದ ವೇಳೆಗೆ ಐಸಿಯುವಿನಲ್ಲಿ ಸುಮಾರು 15 ಮಂದಿ ರೋಗಿಗಳು ದಾಖಲಾಗಿದ್ದರು.