LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

11 ವರ್ಷಗಳ ಗೆಲುವಿನ ನಾಗಾಲೋಟ: ಈ ಬಾರಿ ಏನಾಗಲಿದೆ

ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿ ಬುಧವಾರದಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನು ಆಡಲಾಗುತ್ತದೆ. ಇನ್ನು ಈ ಸರಣಿಯಲ್ಲಿ ಕಾಣಿಸಿಕೊಳ್ಳಲಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದ್ದು, ಹೀಗಾಗಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯು ಇಂದಿನಿಂದ (ಜ.22) ಶುರುವಾಗಲಿದೆ. ಈ ಸರಣಿಯು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಗಂಭೀರ್ ಗರಡಿಯಲ್ಲಿ ಭಾರತ ತಂಡವು ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡವನ್ನು ಎದುರಿಸುತ್ತಿದೆ. ಅದರಲ್ಲೂ ಟೀಮ್ ಇಂಡಿಯಾ ಕಳೆದ ಕಳೆದ ಹನ್ನೊಂದು ವರ್ಷಗಳಿಂದ ಆಂಗ್ಲರ ವಿರುದ್ಧ ಟಿ20 ಸರಣಿಯಲ್ಲಿ ಪಾರುಪತ್ಯ ಮೆರೆಯುತ್ತಾ ಬಂದಿದೆ.

ಇದೀಗ ಗೌತಮ್ ಗಂಭೀರ್ ಅವರ ಕೋಚಿಂಗ್?ನಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿರುವುದರಿಂದ ಈ ಬಾರಿ ಏನಾಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಗಂಭೀರ್ ಕೋಚ್ ಆದ ಬಳಿಕ ಭಾರತ ತಂಡದ ಹಲವು ಗೆಲುವಿನ ನಾಗಾಲೋಟಗಳಿಗೆ ಬ್ರೇಕ್ ಬಿದ್ದಿದೆ. ಆ ಸೋಲುಗಳ ಸಂಪೂರ್ಣ ಮಾಹಿತಿ ಇಲ್ಲಿದೆ, ಕ್ಲಿಕ್ ಮಾಡಿ. ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಸೋತು 11 ವರ್ಷಗಳೇ ಕಳೆದಿವೆ. 2014ರಲ್ಲಿ ಇಂಗ್ಲೆಂಡ್ ತವರಿನಲ್ಲಿ ಭಾರತವನ್ನು 1-0 ಅಂತರದಿಂದ ಮಣಿಸಿದ್ದು ಕೊನೆಯ ಸಾಧನೆ.

ಇದಾದ ಬಳಿಕ ಉಭಯ ತಂಡಗಳು 4 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಈ ನಾಲ್ಕು ಸರಣಿಗಳಲ್ಲಿ ತವರಿನಲ್ಲಿ ಭಾರತ ತಂಡ 2 ಸರಣಿಗಳನ್ನು ಗೆದ್ದುಕೊಂಡಿತ್ತು. ಅಲ್ಲದೆ ಇಂಗ್ಲೆಂಡ್?ಗೆ ತೆರಳಿ ಆಂಗ್ಲರನ್ನು 2 ಬಾರಿ ಸೋಲಿಸಿದ್ದಾರೆ. ಈ ಮೂಲಕ ಕಳೆದ 11 ವರ್ಷಗಳಲ್ಲಿ ಇಂಗ್ಲೆಂಡ್ ವಿರುದ್ಧ ಎಲ್ಲಾ ಟಿ20 ಸರಣಿ ಗೆದ್ದು ಟೀಮ್ ಇಂಡಿಯಾ ಪಾರುಪತ್ಯ ಮೆರೆದಿದೆ. ಇದೀಗ ಮತ್ತೊಮ್ಮೆ 5 ಪಂದ್ಯಗಳ ಸರಣಿಗಾಗಿ ಉಭಯ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು