LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಲಾರ ಜಿಲ್ಲೆಗೆ 12ನೇ ಸ್ಥಾನ

ಕೋಲಾರ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು. ಪರೀಕ್ಷೆ ಬರೆದ 13360 ಮಂದಿ ಹೊಸ ಅಭ್ಯರ್ಥಿಗಳಲ್ಲಿ 11505 ಮಂದಿ ತೇರ್ಗಡೆಯಾಗುವ ಮೂಲಕ ಜಿಲ್ಲೆಗೆ 86.12 ಫಲಿತಾಂಶ ಲಭ್ಯವಾಗಿದೆ. ವಿಜ್ಞಾನ ವಿಭಾಗದಲ್ಲಿ ನಗರದ ಮಹಿಳಾ ಸಮಾಜ ಕಾಲೇಜಿನ ಹೆಚ್.ಜಿ. ವಂದನಾ, ವಾಣಿಜ್ಯದಲ್ಲಿ ಬಂಗಾರಪೇಟೆ ಎಸ್‍ಡಿಸಿ ಕಾಲೇಜಿನ ನಿಕೇತನ ಹಾಗೂ ಕಲಾ ವಿಭಾಗದಲ್ಲಿ ಕೋಲಾರದ ಬಾಲಕಿಯರ ಪಿಯುಕಾಲೇಜಿನ ಜಿ.ಎಂ.ಅರ್ಚನಾ ಜಿಲ್ಲೆಗೆ ಮೊದಲಿಗರಾಗಿ ಹೊರಹೊಮ್ಮಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದ್ದಾರೆ.

ಕೋಲಾರ ಜಿಲ್ಲೆ ಕಳೆದ ಬಾರಿ ಶೇ.79.2 ಫಲಿತಾಂಶದೊಂದಿಗೆ 14ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಸುಧಾರಣೆಯೊಂದಿಗೆ ಉತ್ತಮ ಸಾಧನೆ ಮಾಡಿದ್ದು, ಶೇ.86.12 ಫಲಿತಾಂಶದೊಂದಿಗೆ ಜಿಲ್ಲೆ 12ನೇ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆಯಾಗಿದೆ ಫಲಿತಾಂಶದಲ್ಲೂ ಶೇ.6.10 ರಷ್ಟು ಏರಿಕೆಯಾಗಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಉಪನಿರ್ದೇಶಕರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಟಾಫರ್ ಆಗಿರುವ ನಗರದ ಮಹಿಳಾ ಸಮಾಜ ಕಾಲೇಜಿನ ಹೆಚ್.ಜಿ.ವಂದನಾ 592 ಅಂಕಗಳೊಂದಿಗೆ ಜಿಲ್ಲೆಗೆ ಮೊದಲಿಗರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಯ ಬಂಗಾರಪೇಟೆ ಎಸ್‍ಡಿಸಿ ಕಾಲೇಜಿನ ನಿಕೇತನ 594 ಅಂಕಗಳೊಂದಿಗೆ ಜಿಲ್ಲೆಗೆ ಮೊದಲಿಗರಾಗಿದ್ದು, ಕಲಾ ವಿಭಾಗದಲ್ಲಿ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಜಿ.ಎಂ.ಅರ್ಚನಾ 581 ಅಂಕಗಳೊಂದಿಗೆ ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಟಾಫರ್ ಆಗಿರುವ ನಿಕೇತನ ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದಾರೆ. ಉಳಿದಂತೆ ಮುಳಬಾಗಿಲು ಪಟ್ಟಣದ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಕೆ.ಸಿದ್ದಾರ್ಥ 590 ಅಂಕ ಹಾಗೂ ಕೆಜಿಎಫ್ ವಿಮಲ ಹೃದಯ ಪಿಯು ಕಾಲೇಜಿನ ಆರ್.ಭಾವನಾ 589 ಅಂಕಗಳೊಂದಿಗೆ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ನಗರದ ವಿದ್ಯಾಜ್ಯೋತಿ ಕಾಲೇಜಿನ ಎಂ.ತ್ರಿಷಾ 591 ಅಂಕ, ಮಹಿಳಾ ಸಮಾಜ ಕಾಲೇಜಿನ ಪವನ್ ಸಾಯಿ ಎನ್ .ಆರ್ ಹಾಗೂ ರಾಕ್ ವ್ಯಾಲಿ ರೆಸಿಡೆನ್ಸಿಯಲ್ ಪಿಯು ಕಾಲೇಜಿನ ಆರ್.ಹನ್ಸಿಕಾ 590 ಅಕಗಳೊಂದಿಗೆ ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ.ಕಲಾ ವಿಭಾಗದಲ್ಲಿಬಂಗಾರಪೇಟೆ ಬಾಲಕಿಯರ ಪಿಯು ಕಾಲೇಜಿನ ಹಿಮ ಬಿಂದು 581 ಅಂಕಗಳೊಂದಿಗೆ ದ್ವಿತೀಯ ಹಾಗೂ ಇದೇ ಕಾಲೇಜಿನ ಕೆ.ಎನ್.ಸಂಗೀತಾ 50 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ1316 ಹೊಸ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 945 ಮಂದಿ ತೇರ್ಗಡೆಯಾಗಿದ್ದು, 71.81 ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ6137 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5234 ಮಂದಿ ಉತ್ತೀರ್ಣರಾಗಿ 85.29 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ5907 ಮಂದಿ ಹೊಸ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 5326 ಮಂದಿ ಉತ್ತೀರ್ಣರಾಗುವ ಮೂಲಕ ಶೇ.90.16 ಫಲಿತಾಂಶ ಬಂದಿದೆ.

ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳೇ ಉತ್ತಮ ಸಾಧನೆ ಮಾಡಿದ್ದು, ನಗರ ಪ್ರದೇಶದಲ್ಲಿ ಪರೀಕ್ಷೆ ಬರೆದ 10478 ಮಂದಿ ಪೈಕಿ 8999 ಮಂದಿ ಉತ್ತೀರ್ಣರಾಗಿ ಶೇ.85.88 ಫಲಿತಾಂಶ ಬಂದಿದೆ ಆದರೆ ಗ್ರಾಮೀಣ ಭಾಗದಲ್ಲಿ 2882 ಮಂದಿ ಪರೀಕ್ಷೆ ಬರೆದಿದ್ದು, 2506 ಮಂದಿ ಉತ್ತೀರ್ಣರಾಗುವ ಮೂಲಕ ಶೇ.86.95 ಫಲಿತಾಂಶ ಲಭ್ಯವಾಗಿದೆ.

ಒಟ್ಟಾರೆ ಫಲಿತಾಂಶದಲ್ಲೂ ಹೊಸ ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಪರೀಕ್ಷೆ ಬರೆದ 8096 ಬಾಲಕಿಯರಲ್ಲಿ 6799 ಮಂದಿ ತೇರ್ಗಡೆಯಾಗಿ ಶೇ.83.98 ಫಲಿತಾಂಶ ಬಂದಿದೆ. ಇದೇ ರೀತಿ ಬಾಲಕರು 6773 ಮಂದಿ ಪರೀಕ್ಷೆ ಬರೆದಿದ್ದು 5297 ಮಂದಿ ಉತ್ತೀರ್ಣರಾಗಿ ಶೇ.78.32 ಫಲಿತಾಂಶ ಪಡೆಯುವ ಮೂಲಕ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು