LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

131ನೇ ಸಿನಿಮಾದ ಮೊದಲ ಝಲಕ್ ರಿಲೀಸ್

ಶಿವಣ್ಣನಿಗೆ ಕಿಲ್ಲಿಂಗ್ ವೀರಪ್ಪನ್ ಸಿನಿಮಾ ಮಾಡಿಸಿದ್ದ ಸುಧೀರ್ ಮತ್ತೊಮ್ಮೆ ಕರುನಾಡ ಕಿಂಗ್ ಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ಯುವ ನಿರ್ದೇಶಕ ಕಾರ್ತಿಕ್ ಅದ್ವೈತ್ ದೊಡ್ಮನೆ ದೊರೆಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೊದಲ ಝಲಕ್ ಶಿವಣ್ಣನ ಹುಟ್ಟುಹಬ್ಬಕ್ಕೆ ಅನಾವರಣಗೊಂಡಿದೆ.

ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿದೆ. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೊಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗುತ್ತದೆ. ಶಿವಣ್ಣನನ್ನು ಅಚ್ಯುತ್ ಕುಮಾರ್ ವರ್ಣನೆ ಮಾಡುವ ರೀತಿ ಅದ್ಭುತವಾಗಿದೆ.

ಆದ್ರೆ ಶಿವಣ್ಣ ವಿಡಿಯೋದಲ್ಲಿ ಕಾಣಿಸಿಕೊಳ್ಳಲ್ಲ. ಐ ಆಮ್ ಕಮಿಂಗ್ ಎನ್ನುವ ಕರುನಾಡ ಕಿಂಗ್ ನ ಫೋಟೋ ಬಿಟ್ಟು ಚಿತ್ರತಂಡ ಥ್ರಿಲ್ ಹೆಚ್ಚಿಸಿದೆ. ಚಂಡಮಾರುತ ಮೊದಲ ಮೌನ ಎಂಬ ಅಡಿಬರಹದೊಂದಿಗೆ ಶಿವಣ್ಣನ 131ನೇ ಚಿತ್ರದ ವಿಡಿಯೋ ಝಲಕ್ ಬಿಡುಗಡೆ ಮಾಡಲಾಗಿದ್ದು, ಅಚ್ಯುತ್ ಕುಮಾರ್, ರವೀಂದ್ರ ವಿಜಯ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಕಾರ್ತಿಕ್ ಅದ್ವೈತ್, ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ, ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ?ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ. ಇತರ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳಲುಸಿದ್ಧತೆ ಮಾಡಿಕೊಂಡಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು